ಮೆಗ್ಗಾನ್ ಬೋಧನಾ ಆಸ್ಪತ್ರೆ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

Source: S.O. News Service | By MV Bhatkal | Published on 18th June 2020, 8:05 PM | State News | Don't Miss |

ಶಿವಮೊಗ್ಗ: ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು.
ಅವರು ಗುರುವಾರ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಶಿಮ್ಸ್‍ನಲ್ಲಿರುವ 13ಪ್ರಯೋಗಾಲಯಗಳನ್ನು 1.21ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದ್ದು, ಐದು ಪ್ರಯೋಗಾಲಯಗಳ ನವೀಕರಣ ಪೂರ್ಣಗೊಂಡಿದೆ. 1.90ಕೋಟಿ ರೂ. ವೆಚ್ಚದಲ್ಲಿ ಶರಾವತಿ ಬ್ಲಾಕ್ ಕಟ್ಟಡ ನವೀಕರಣ, 1.65 ಕೋಟಿ ರೂ. ವೆಚ್ಚದಲ್ಲಿ 3ಬೋಧನಾ ಕೊಠಡಿ, 4.5ಕೋಟಿ ರೂ. ವೆಚ್ಚದಲ್ಲಿ ಕ್ಯಾಥ್‍ಲ್ಯಾಬ್‍ಗೆ ಉಪಕರಣಗಳನ್ನು ಖರೀದಿಸಲು ಟೆಂಡರ್ ಮಾಡಲಾಗಿದೆ. 5.32ಕೋಟಿ ರೂ. ವೆಚ್ಚದಲ್ಲಿ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ಕಾಮಗಾರಿ ಚಾಲನೆಯಲ್ಲಿದೆ. ಇದೇ ರೀತಿ 2.16ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮರಣೋತ್ತರ ಪರೀಕ್ಷಾ ಕೇಂದ್ರ, ಉಪಕರಣ ಮತ್ತು ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ನಿರ್ಮಾಣ, 21.50ಕೋಟಿ ರೂ. ವೆಚ್ಚದಲ್ಲಿ ಎಂಸಿಎಚ್ ಬ್ಲಾಕ್ ನಿರ್ಮಾಣ12.49 ಕೋಟಿ ರೂ. ವೆಚ್ಚದಲ್ಲಿ ಎಂಸಿಎಚ್ ಬ್ಲಾಕ್‍ಗೆ ಉಪಕರಣ ಖರೀದಿಗೆ ಪ್ರಕ್ರಿಯೆ ನಡೆಸಲಾಗಿದೆ ಎಂದು ಶಿಮ್ಸ್ ಆಡಳಿತಾಧಿಕಾರಿ ಶಿವಕುಮಾರ್ ಅವರು ಮಾಹಿತಿ ನೀಡಿದರು.
ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಗುಣಮಟ್ಟ ಕಾಪಾಡಿಕೊಂಡು ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು.
ಚೀಟಿ ಬರೆಯಬಾರದು: ಯಾವುದೇ ಕಾರಣಕ್ಕೂ ರೋಗಿಗಳಿಗೆ ಹೊರಗಿನಿಂದ ಔಷಧಿಯನ್ನು ತರಿಸಲು ಚೀಟಿ ಬರೆಯಬಾರದು. ಒಂದು ವೇಳೆ ಅನಿವಾರ್ಯವಾಗಿ ಚೀಟಿ ಬರೆದರೂ ಬಿಪಿಎಲ್ ಕಾರ್ಡುದಾರರಿಗೆ ಆ ಮೊತ್ತವನ್ನು ಪುನರ್ ಪಾವತಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಇರುವ ರೀತಿಯಲ್ಲಿ ಲಭ್ಯವಿರುವ ವೈದ್ಯರ ಹೆಸರು ಸಮಯ ಇತ್ಯಾದಿಗಳ ವಿವರಗಳು ಎಲ್‍ಇಡಿ ಪರದೆಯಲ್ಲಿ ಪ್ರಚುರಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಆಡಳಿತ ಮಂಡಳಿ ಸದಸ್ಯರಾದ ಡಾ.ಗೌತಮ್, ವಾಣಿ ಕೋರಿ, ದಿವಕರ ಶೆಟ್ಟಿ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...