ಮಾರ್ಚ್ ಅಂತ್ಯದೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ; ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ

Source: so news | Published on 19th January 2020, 12:01 AM | State News | Don't Miss |

 

ಧಾರವಾಡ:ಲೋಕೊಪಯೋಗಿ ಇಲಾಖೆಯ ಎಲ್ಲ ಯೋಜನಾ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ವ್ಯವಸ್ಥಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಅನುದಾನವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಉಪಮುಖ್ಯಮಂತ್ರಿ, ಲೋಕೊಪಯೋಗಿ, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು  ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಗುಣಮಟ್ಟದಲ್ಲಿ ರಾಜಿಯಾಗದೇ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಕಾಮಗಾರಿಯಲ್ಲಿ ಕಳಪೆಯಾಗದಂತೆ ಜಾಗೃತಿ ವಹಿಸಬೇಕು. ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳ ಅನುದಾನ ಬಳಕೆಯಲ್ಲಿ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ಈ ಅನುದಾನವನ್ನು ಬಳಕೆ ಮಾಡದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬಳಕೆ ಮಾಡಿ, ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಸಬೇಕು. ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಸ್ಪಚ್ಚತೆಯನ್ನು ಕಾಪಾಡಬೇಕು. ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳಿಗೆ ಪೂರ್ವ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಅಧ್ಯಯನಕ್ಕೆ ಯಾವುದೇ ಕೊರತೆಗಳಾಗದಂತೆ ಜಾಗೃತಿವಹಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ ಅವರು ಮಾತನಾಡಿ, ಇಲಾಖೆಯಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿದ್ಯಾರ್ಥಿನಿಲಯ, ವಿದ್ಯಾರ್ಥಿ ವೇತನ, ಎಸ್‍ಎಸ್‍ಎಲ್‍ಸಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಪ್ರಗತಿ ಕಾಲೋನಿ ಹಾಗೂ ಭವನ ನಿರ್ಮಾಣ, ಸ್ಮಶಾನಕ್ಕಾಗಿ ಭೂಮಿ, ದೌರ್ಜನ್ಯದಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರಧನ ವಿತರಣೆ, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಲೋಕೊಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ರಾಜೇಶ, ಅಧೀಕ್ಷಕ ಅಭಿಯಂತರ ಶಿವಾನಂದ ನಾಯಕ, ಕಾರ್ಯಪಾಲಕ ಅಭಿಯಂತರ ವ್ಹಿ.ಬಿ. ಯಮಕನಮರಡಿ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಪಾಲಕ, ಸಹಾಯಕ ಕಾರ್ಯಪಾಲಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...