ಬಿಪಿಎಲ್ ಕಾರ್ಡುದಾರರ ಕುಟುಂಬದ ಪ್ರತೀ ಸದಸ್ಯನಿಗೆ ತಲಾ 10 ಕೆಜಿ ಅಕ್ಕಿ; ಕಾಂಗ್ರೆಸ್ ಪಕ್ಷದ ಮೂರನೇ 'ಗ್ಯಾರಂಟಿ ಯೋಜನೆ' ಘೋಷಣೆ

Source: Vb | By I.G. Bhatkali | Published on 25th February 2023, 10:36 AM | State News |

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಯನ್ನು ಗೆಲ್ಲಲೇ ಬೇಕೆಂಬ ಹಠ ತೊಟ್ಟಿರುವ ಪ್ರತಿಪಕ್ಷ ಕಾಂಗ್ರೆಸ್ 3ನೇ 'ಗ್ಯಾರಂಟಿ ಯೋಜನೆ' ಘೋಷಿಸಿದ್ದು, ಎಲ್ಲ ಬಿಪಿಎಲ್ ಕಾರ್ಡುದಾರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಕೊಡುವ ವಾಗ್ದಾನ ನೀಡಿದೆ.

ಶುಕ್ರವಾರ ಇಲ್ಲಿನ ಕ್ಲೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವ ರೇವೂ ನಾಯ್ ಬೆಳಮಗಿ, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಶಾಸಕ ಭೀಮಾ ನಾಯ್ಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮೂರನೇ 'ಗ್ಯಾರಂಟಿ 'ಗ್ಯಾರಂಟಿ ಯೋಜನೆ ಪೋಸ್ಟರ್‌ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಸುಳ್ಳಿ ನಿಂದ ಬೇಸತ್ತಿರುವ ಜನರಿಗೆ ಯಾರನ್ನು ನಂಬಬೇಕೆಂದು ತೋಚುತ್ತಿಲ್ಲ. ಹೀಗಾಗಿ ನಮ್ಮ ಯೋಜನೆಯನ್ನು ನಾವು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಲು 'ಗ್ಯಾರಂಟಿ ಕಾರ್ಡ್‌' ಅನ್ನು ಪ್ರತೀ ಮನೆಗೂ ನೀಡುತ್ತಿದ್ದೇವೆ' ಎಂದು ತಿಳಿಸಿದರು.

'ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ನೀಡಲು 4ರಿಂದ 5 ಸಾವಿರ ಕೋ. ರೂ. ಖರ್ಚಾಗುತ್ತಿದ್ದು, 10 ಕೆ.ಜಿ.ಗೆ ಹೆಚ್ಚಾಗು ವುದರಿಂದ ಹೆಚ್ಚುವರಿಯಾಗಿ 3ರಿಂದ 4 ಸಾವಿರ ಕೋ.ರೂ. ಹೆಚ್ಚು ವೆಚ್ಚ ತಗಲಬ ಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗ ಬಾರದು ಎಂಬುದು ನಮ್ಮ ಉದ್ದೇಶ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ನಮ್ಮ ಉಚಿತ ಅಕ್ಕಿ ಹಾಗೂ ನರೇಗಾ ಕಾರ್ಯ ಕ್ರಮಗಳು ಜನರ ಬದುಕಿಗೆ ಆಸರೆಯಾಗಿತ್ತು. ಆದರೆ ಬಿಜೆಪಿ ಸರಕಾರದ ತೀರ್ಮಾನ ಜನರಿಗೆ ನೋವು ತಂದಿದೆ. ನಾವು ಪ್ರಜಾಧ್ವನಿಯಾತ್ರೆ ಸಂದರ್ಭದಲ್ಲಿ ಜನರು ನೀವು ಅಧಿಕಾರಕ್ಕೆ ಬಂದರೆ ಅಕ್ಕಿ ಪ್ರಮಾಣ ಹೆಚ್ಚಿಸಿ ಎಂದು ಕೇಳಿದರು. ನಂತರ ಪಕ್ಷದ ಎಲ್ಲ ನಾಯಕರು ಚರ್ಚೆ ಮಾಡಿ ತಲಾ 10 ಕೆ.ಜಿ.ಯಂತೆ ಬಿಪಿಎಲ್ ಕಾರ್ಡುದಾರ ರಿಗೆ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ಅವರು ತಿಳಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...