'ರಾಜ್ಯದಲ್ಲಿ ಹಿಂಸಾಚಾರ ಹೇಳಿಕೆ'; ಅಮಿತ್ ಶಾ ವಿರುದ ಕಾಂಗ್ರೆಸ್ ದೂರು

Source: Vb | By I.G. Bhatkali | Published on 28th April 2023, 7:41 AM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ.

ಮತದಾರರಿಗೆ ಬೆದರಿಕೆ ಆರೋಪದ ಮೇಲೆ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಗುರುವಾರ ನಗರದ ಕೇಂದ್ರ ವಿಭಾಗದ ಪೊಲೀಸರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್‌ ವಲ್ಲಭ್ ದೂರು ಸಲ್ಲಿಸಿದರು.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ , ಸಿಂಗ್ ಜಾತಿ ಸುರ್ಜೆವಾಲಾ ಮಾತನಾಡಿ ಧರ್ಮಗಳ ಹೆಸರಿನಲ್ಲಿ ದ್ವೇಷ ಹರಡಿ ಕರ್ನಾಟಕ ರಾಜ್ಯದ ಸೌಹಾರ್ದಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಆಧಾರರಹಿತ ಆರೋಪ ಮಾಡಲಾಗಿದೆ. ಎ.26ರಂದು ಕೇಂದ್ರ ಸಚಿವ ಅಮಿತ್‌ ಶಾ ಅವರು ಬಿಜೆಪಿ ಪ್ರಚಾರ ಸಮಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚಲಿವೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಿಎಫ್‌ಐ ಮೇಲಿನ ನಿಷೇಧ ಹಿಂಪಡೆಯಲಿದೆ ಎಂಬ ಆಧಾರರಹಿತ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳ ಮೂಲಕ ದ್ವೇಷ ಹರಡಿ ಕೋಮು ಸೌಹಾರ್ದಕ್ಕೆ ಧಕ್ಕೆ ತಂದು ಚುನಾವಣೆಯಲ್ಲಿ ಅಕ್ರಮಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...