ಭಟ್ಕಳ: ಹಿಂದುಳಿದವರು ಆರ್ಥಿಕವಾಗಿ ಬಲಗೊಳ್ಳುವಂತಾಗಬೇಕು: ಆನಂದ ಆಸ್ನೋಟಿಕರ್

Source: S O News service | By I.G. Bhatkali | Published on 20th April 2019, 12:22 AM | Coastal News | Don't Miss |

ಭಟ್ಕಳ: ಧರ್ಮ ರಕ್ಷಣೆಯ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಶೋಷಿಸಲಾಗುತ್ತಿದ್ದು, ಅವರಿಗೆ ಆರ್ಥಿಕ ಬಲವನ್ನು ನೀಡಬೇಕಾದ ಅಗತ್ಯ ಇದೆ ಎಂದು ಉತ್ತರಕನ್ನಡ ಲೋಕಸಭಾ ಮೈತ್ರಿ ಅಭ್ಯರ್ಥಿ ಆನಂದ ಆಸ್ನೋಟಿಕರ್ ಹೇಳಿದರು.

ನಮ್ಮ ಯುವಕರು ಕೆಲಸಕ್ಕಾಗಿ ಅಲೆದಾಡುತ್ತಿದ್ದಾರೆ. ಎಲ್ಲಿಯೋ ದೂರ ಹೋಗಿ ಹೊಟೆಲ್ ಕೆಲಸ ಮಾಡಿಕೊಂಡು ಬದುಕಲು ಯತ್ನಿಸುತ್ತಿದ್ದಾರೆ. ಅಂತಹ ಅಮಾಯಕರ ಹುಡುಗರಿಗೆ ಅನಂತಕುಮಾರ ಏನನ್ನೂ ಮಾಡಿಲ್ಲ. ಉತ್ತರಕನ್ನಡದಲ್ಲಿ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಸಮುದ್ರ ನೀರನ್ನು ಶುದ್ಧೀಕರಿಸಿ ಜನರ ಉಪಯೋಗಕ್ಕೆ ನೀಡುವ ಯೋಜನೆಯನ್ನು ಜಾರಿಗೊಳಿಸಬೇಕಾಗಿದೆ. ಜಿಲ್ಲೆಯಲ್ಲಿ ರೇಲ್ವೇ ಇನ್ನಷ್ಟು ಅಭಿವೃದ್ಧಿಯಾಗಬೇಕಾಗಿದೆ. ರೈತರ ಸಾಲ ಮನ್ನಾದಂತೆ ಮೀನುಗಾರರ ಸಾಲವನ್ನೂ ಮನ್ನಾ ಮಾಡಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು. ಇತ್ತೀಚಿನ ಕೆಲ ದಿನಗಳಲ್ಲಿ ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿದೆ. ಚಿತ್ತರಂಜನ್, ಅಟಲ್ ಬಿಹಾರಿ ವಾಜಪೇಯಿ, ಬಂಗಾರಪ್ಪ, ಮೋದಿ ಅಲೆಯಲ್ಲಿ ಗೆದ್ದಿದ್ದ ಅನಂತಕುಮಾರಗೆ ಈ ಚುನಾವಣೆಯಲ್ಲಿ ಯಾವ ಅಲೆಯೂ ಕೈ ಹಿಡಿಯುವುದಿಲ್ಲ ಎಂದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...