ನಳಿನ್ ಕುಮಾರ್ ಕಟೀಲು ವಿರುದ್ಧ ಕಾಂಗ್ರೆಸ್‌ ನಾಯಕರ ಆಕ್ರೋಶ

Source: Vb | By I.G. Bhatkali | Published on 4th January 2023, 8:17 AM | State News | National News |

ಬೆಂಗಳೂರು: ರಸ್ತೆ, ಮೋರಿ, ಚರಂಡಿ ಅಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ. ನಿಮ್ಮ ಮಕ್ಕಳ ಬದುಕಿನ ಪ್ರಶ್ನೆಗಾಗಿ ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಕ್ಷ ಬೇಕು ಅನ್ನೋದನ್ನು ತಿಳಿದುಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರು ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾಮಾಣಿಕವಾಗಿ ಇಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅಭಿವೃದ್ಧಿ ಅಥವಾ ಉದ್ಯೋಗದ ಬಗ್ಗೆ ಬಿಜೆಪಿಗೆ ಯಾವಾಗ ಆದ್ಯತೆ ಇತ್ತು? ಕನಿಷ್ಠ ಪಕ್ಷ ಈಗ ತನ್ನ ಆದ್ಯತೆಯನ್ನು ಪ್ರಾಮಾಣಿಕವಾಗಿ ಒಪ್ಪಿದೆ. ಚಿಂತಿಸಬೇಡಿ, ರಾಜ್ಯದ ಜನರು ಬಿಜೆಪಿಗೆ ತಾವು ಏನನ್ನು ಆಯ್ಕೆ ಮಾಡಲಿದ್ದೇವೆ ಎಂಬುದನ್ನು ಶೀಘ್ರದಲ್ಲೇ ತಿಳಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆತ್ಮೀಯ ಕನ್ನಡಿಗರೇ, ಬಿಜೆಪಿ ಅಧ್ಯಕ್ಷರು ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿಗೆ 'ಅಭಿವೃದ್ಧಿ' ಬೇಕಾಗಿಲ್ಲ. ಬಿಜೆಪಿಗೆ 'ರಸ್ತೆ' ಬೇಡ, ಬಿಜೆಪಿಗೆ ಒಳಚರಂಡಿ ಬೇಕಿಲ್ಲ. ಬಿಜೆಪಿಗೆ ಉದ್ಯೋಗ ಬೇಕಾಗಿಲ್ಲ. ಬಿಜೆಪಿಗೆ ಬೇಕಾಗಿರುವುದು ಲವ್ ಜಿಹಾದ್ ಮಾತ್ರ. ಬಿಜೆಪಿಗೆ ಬಾಗಿಲು ತೋರಿಸುವ ಸಮಯ ಇದಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

ಮೋದಿಯವರ 8 ವರ್ಷ, ಬಿ.ಎಸ್. ಯಡಿಯೂರಪ್ಪ ಅವರ 2 ವರ್ಷ, ಬೊಮ್ಮಾಯಿಯವರ 1.5 ವರ್ಷದ ಆಡಳಿತದ ನಂತರವೂ ಅಭಿವೃದ್ಧಿ ವಿಚಾರಗಳ ಬದಲು ಕೋಮುಕಲಹದ ರಾಜಕಾರಣದ ಬಿಜೆಪಿಯ ಗುಪ್ತ ಕಾರ್ಯಸೂಚಿ ನಳಿನ್ನಕುಮಾರ್ ಕಟೀಲು ಅವರ ಬಾಯಲ್ಲಿ ಹೊರಬಂದಿದೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಮೂಲಕ ಬಿಜೆಪಿಯು ನಿರ್ಲಜ್ಜ ತನ ಹಾಗೂ ಅನೈತಿಕ ರಾಜಕಾರಣದ ಪರಮಾವಧಿ ತಲುಪಿದೆ. ಬಿಜೆಪಿ ಎಂದೂ ಜನಪರ, ಅಭಿವೃದ್ಧಿಪರ ರಾಜ ಕಾರಣ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ರಸ್ತೆ, ಚರಂಡಿ, ರಸ್ತೆಗುಂಡಿಗಳು ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ. ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ. 54 ಸಾವಿರ ಪಿಎಸೈ ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ, ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ರಾಜ್ಯ ಬಿಜೆಪಿಗೆ ದೊಡ್ಡ ವಿಚಾರ ಯಾವುದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...