ಇಂದು ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯಕ್ಕೆ ಅಕ್ಕಿ ನೀಡದಿರುವುದರ ಹಿಂದೆ ದೊಡ್ಡ ಷಡ್ಯಂತ್ರ: ಡಿಸಿಎಂ

Source: Vb | By I.G. Bhatkali | Published on 20th June 2023, 7:47 AM | State News |

ಬೆಂಗಳೂರು: ರಾಜ್ಯಕ್ಕೆ ಅಕ್ಕಿ ನೀಡದೆ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ಮಾಡಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಕೇಂದ್ರ ಸರಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರದಲ್ಲಿ ದೇಶದ ರೈತರಿಂದ ದವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ ಎಂದರು.

ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ವತಿಯಿಂದ ಜೂ.20ರಂದು ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...