ಕಾಂಗ್ರೆಸ್‌ನವರು ಅತ್ತೂ ಕರೆದು ಐತಿಹಾಸಿಕ ಕ್ಷಣದ ಭಾಗವಾಗಲು ಪ್ರಯತ್ನಿಸುತ್ತಿದ್ದಾರೆ: ಸದಾನಂದಗೌಡ ಟೀಕಾಪ್ರಹಾರ

Source: UNI | Published on 8th August 2020, 7:11 PM | State News | Don't Miss |

ಬೆಂಗಳೂರು: ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿರುವ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಶುಭ ಹಾರೈಸಿದ್ದಾರೆ.
ಕೋಟ್ಯಂತರ ಭಾರತೀಯರು ಎದುರು ನೋಡುತ್ತಿದ್ದ ಶುಭಘಳಿಗೆ ಸಮೀಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಯೋಧ್ಯೆ ಆಂದೋಲನದಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ, ಬಿಜೆಪಿ ಮಾಜಿ ಅಧ್ಯಕ್ಷ ಡಾ.ಮುರಳಿ ಮನೋಹರ ಜೋಷಿ ಮುಂತಾದ ಹಿರಿಯ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವರು ಇಂದು ಇಲ್ಲಿ ಮಾಧ್ಯಮ ಹೇಳಿಕೆಯೊಂದರಲ್ಲಿ ತಿಳಿಸಿದರು.
ಮರ್ಯಾದಾ ಪುರುಷೋತ್ತಮ ರಾಮಚಂದ್ರ ಭಾರತೀಯರ ಆರಾಧ್ಯದೈವ. ನಮ್ಮಂತಹ ಕೋಟ್ಯಂತರ ಶ್ರದ್ಧಾಳುಗಳು ಪ್ರಾರ್ಥನೆ ಫಲಿಸುವ ಕ್ಷಣ ಬಂದೇ ಬಿಟ್ಟಿದೆ. ಅಯೋಧ್ಯೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 
ರಾಮಮಂದಿರ ಪುನರ್ ನಿರ್ಮಾಣದ ಶಿಲಾನ್ಯಾಸಕ್ಕೆ ವೇದಿಕೆ ಸಜ್ಜುಗೊಂಡಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯಾಗಿದ್ದರೆ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಅಯೋಧ್ಯೆಯಲ್ಲಿ ಲಕ್ಷೋಪಲಕ್ಷ ಜನರು ಸೇರುತ್ತಿದ್ದರು. ಆದರೆ ಕೊರೊನಾ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಸರಳವಾಗಿ ಕೆಲವೇ ಕೆಲವು ಆಯ್ದ ಜನರ ಸಮ್ಮುಖದಲ್ಲಿ ಶಿಲಾನ್ಯಾಸ ನಡೆಯಲಿದೆ. ಈ ಕಾರ್ಯಕ್ರಮ ಅತ್ಯಂತ ಯಶಸ್ವಿತಯಾಗಿ ನಡೆಯಲಿ ಎಂದು ಹಾರೈಸುತ್ತೇನೆ ಎಂದು ಸಚಿವರು ತಿಳಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...