ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ: ಶಾಸಕಿ ಸೌಮ್ಯಾ ರೆಡ್ಡಿ

Source: so news | Published on 5th October 2019, 12:39 AM | State News | Don't Miss |


ಧಾರವಾಡ:ನಮ್ಮ ಸುತ್ತಮುತ್ತಲಿನ ಪರಿಸರ, ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಬೆಂಗಳೂರಿನ ಜಯನಗರ ಶಾಸಕಿ ಮತ್ತು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸೌಮ್ಯಾ ರೆಡ್ಡಿ ಹೇಳಿದರು. 
ಇಂದು 65ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆಯು ಸೃಜನಾ ರಂಗಮಂದಿರದಲ್ಲಿ ಏರ್ಪಡಿಸಿರುವ ಛಾಯಾಚಿತ್ರ, ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಈ ಭೂಮಿ ನನ್ನದೇ ಅಂದುಕೊಂಡು ಕೃಷಿ, ಕೈಗಾರಿಕೆ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ವಾತಾವರಣದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ ಎಂದು ತಿಳಿಸಿದರು. 
ಮನುಷ್ಯನ ಅತಿಯಾದ ದುರಾಸೆಯಿಂದ ಅರಣ್ಯ ನಾಶವಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಹಾಗೂ ನೀರು, ಶಬ್ದ, ಪರಿಸರ ಮಾಲಿನ್ಯಗಳ ಸಮಸ್ಯೆಗಳಿಗೆ ಮನುಷ್ಯ ಕಾರಣವಾಗಿದ್ದಾನೆ ಎಂದು ಹೇಳಿದರು. 
ಧಾರವಾಡ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಚವ್ಹಾಣ್ ಮಾತನಾಡಿ, ಅರಣ್ಯ ನಾಶದ ಪರಿಣಾಮವಾಗಿ ಕಳೆದ 20 ವರ್ಷಗಳ ಕಾಲ 16 ವರ್ಷಗಳು ಬರಗಾಲ ಸಂಭವಿಸಿದೆ. 2009 ಮತ್ತು 2019 ನೇ ವರ್ಷ ಪ್ರವಾಹವಾದರೆ, ಕೇವಲ ಎರಡು ವರ್ಷ ಮಾತ್ರ ಸಾಮಾನ್ಯ ಮಳೆಯಾಗಿದೆ. ಹಾಗೂ ಕರ್ನಾಟಕದಲ್ಲಿ ಮಾತ್ರವಲ್ಲದೇ ಬೇರೆ ರಾಜ್ಯಗಳು ನೆರೆಹಾವಳಿಗೆ ತುತ್ತಾಗಿ ಸಮಸ್ಯೆಗಳನ್ನು ಎದುರಿಸುತ್ತಿವೆ. ಆದ್ದರಿಂದ ಅರಣ್ಯ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.  
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಬ್ಬಯ್ಯ ಪ್ರಸಾದ ಮಾತನಾಡಿದ ಅವರು, ಮಾನವನು ತನ್ನ ಸ್ವಾರ್ಥದಿಂದ ಅರಣ್ಯ ನಾಶವನ್ನು ಮಾಡಿದರೆ 2026 ವೇಳೆಗೆ ಶೂನ್ಯ ವರ್ಷ ಆಚರಣೆ ಮಾಡಬೇಕಾಗುತ್ತದೆ. ಆದ್ದರಿಂದ ನಾವೆಲ್ಲರೂ ಇದರ ಬಗ್ಗೆ ಗಂಭೀರವಾದ ಚಿಂತನೆ ಮಾಡಿ, ಅರಣ್ಯ ಉಳಿಸಲು ಕಾರ್ಯೋನ್ಮುಖರಾಗಬೇಕಾಗಿದೆ ಎಂದು ಸಲಹೆ ನೀಡಿದರು. 
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಹೇಶಕುಮಾರ್ ಸ್ವಾಗತಿಸಿದರು. ಒಟಿಲಿ ಅನ್ಬನ್‍ಕುಮಾರ್  ಕಾರ್ಯಕ್ರಮ ನಿರೂಪಿಸಿದರು. 
ಕಾರ್ಯಕ್ರಮದಲ್ಲಿ ಪ್ರೋಬೆಷನರಿ ಐ.ಎ.ಎಸ್ ಅಧಿಕಾರಿ ಆಕೃತಿ ಬನ್ಸಾಲ್, ಗುಂಗರಗಟ್ಟಿ ಅರಣ್ಯ ಅಕಾಡೆಮಿಯ ಜಂಟಿ ನಿರ್ದೇಶಕಿ ದೀಪ ಜೆ. ಕಂಟ್ರಾಕ್ಟರ್ ಮತ್ತು ಆರ್.ಜಿ.ತಿಮ್ಮಾಪುರ ಹಾಗೂ ಅರಣ್ಯ ಅಧಿಕಾರಿಗಳು ಸೇರಿದಂತೆ ಪ್ರಜಂಟೇಷನ್ ಶಾಲೆಯ ಮತ್ತು ಶ್ರೇಯಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...