ಉ.ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾ

Source: SOnews | By Staff Correspondent | Published on 10th February 2024, 9:34 PM | Coastal News |

ಕುಮಟಾ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಕುಮಟಾ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾ ವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮುಂಡಗೋಡ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಮುಂಡಗೋಡ ತಾಲೂಕಿನ , ಕಾತುರ್, ಓರಲಗಿ, ಪಾಳ, ಕೊಡಂಬಿ ಗ್ರಾಮ ಪಂಚಾಯತಿಯಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾ ವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಫೆ. 11 ರಂದು ಹೊನ್ನಾವರ ತಾಲೂಕಿನ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಫೆಬ್ರವರಿ 11 ಸಂವಿಧಾನ ಜಾಗೃತಿ ಜಾಥಾವು ಕುಮಟಾ ತಾಲೂಕಿನಿಂದ ಹೊನ್ನಾವರ ತಾಲೂಕಿನ ಚಂದಾವರ , ದೇವ್ಗಿರಿ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಮುಂಡಗೋಡ ತಾಲೂಕಿನ ಮಳಗಿ, ಬೇಸಡಗಿ, ದಾಸನಕೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಅರಿವು ಮೂಡಿಸಲಿದೆ.

 

Read These Next