ಸಂವಿಧಾನ ದಿನಾಚರಣೆ: ಅರ್ಥಪೂರ್ಣ ವೆಬಿನಾರ್

Source: SO News | By Laxmi Tanaya | Published on 26th November 2020, 11:38 PM | State News | Don't Miss |

ಧಾರವಾಡ :  ಭಾರತ 1950, ಜನವರಿ 26ರಂದು ಅಧಿಕೃತವಾಗಿ ಸಂವಿಧಾನವನ್ನು ಅಳವಡಿಕೆ ಮಾಡಿಕೊಂಡಿತು. ಆದರೆ ಸಂವಿಧಾನವನ್ನು ಅಧಿಕೃತವಾಗಿ ಸ್ವೀಕರಿಸಿದ್ದು 1949, ನವಂಬರ 26ರಂದು. ಆದುದರಿಂದಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ.

 ಸಂವಿಧಾನದ ಮುಖ್ಯ ಉಪಲಬ್ಧಿ ಎಂದರೆ ಭಾರತದಲ್ಲಿ ಗಣರಾಜ್ಯದ ಸ್ಥಾಪನೆ. ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಇವುಗಳು ಗಣರಾಜ್ಯದ ಮೂಲ ಬುನಾದಿಗಳಾಗಿವೆ. ಅಷ್ಟೇ ಅಲ್ಲದೆ ಗಣರಾಜ್ಯದ ಸಫಲತೆಯು ಅಲ್ಲಿನ ಜನಸಮುದಾಯ ಎಷ್ಟರಮಟ್ಟಿಗೆ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸುತ್ತಾರೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ. ಆದುದರಿಂದ ಜನ ಸಾಮಾನ್ಯರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ದಿನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಈಶ್ವರ ಭಟ್ ಹೇಳಿದರು.
ಅವರು ಇಂದು ಭಾರತ ಸರ್ಕಾರದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನ ಕುರಿತ ವಿಶೇಷ ಜಾಗೃತಿ ವೆಬಿನಾರ್‍ನಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರ ಸಂವಿಧಾನದ ಮೂಲಕ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ವ್ಯಾಖ್ಯಾನ ಮಾಡುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ದಿಷ್ಟಪಡಿಸುತ್ತದೆ. ಎಲ್ಲಾ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದರು.

ಕಾನೂನು ವಿಶ್ವವಿದ್ಯಾಲಯದ ಪ್ರೊ.ಸಿ.ಎಸ್.ಪಾಟೀಲ ಮಾತನಾಡಿ, ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಲಭೂತ ಕರ್ತವ್ಯಗಳಾದ ಮಾನವೀಯತೆ, ಅನುಕಂಪ, ಪರಿಸರ ರಕ್ಷಣೆ, ಒಳ್ಳೆಯ ಸಂಸ್ಕøತಿ, ಭ್ರಾತೃತ್ವ ನಮ್ಮಲ್ಲಿದ್ದರೆ, ದೇಶದ ಉನ್ನತಿ ಸಾಧ್ಯವಾಗಲಿದೆ ಎಂದರು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾನೂನು ವಿಶ್ವವಿದ್ಯಾಲಯದಪ್ರೊ.ರತ್ನಾ ಆರ್. ಭರಮಗೌಡರ ಮಾತನಾಡಿ, ಭಾರತದ ಸಂವಿಧಾನವು ಮಾನವನ ಘನತೆ ಮತ್ತು ಅಧಿಕಾರಗಳನ್ನು ಎತ್ತಿ ಹಿಡಿಯುತ್ತದೆ ಎಂದು ತಿಳಿಸಿದರು. ಅಷ್ಟೆ ಅಲ್ಲದೆ ನಮ್ಮ ದೇಶದ ನ್ಯಾಯಾಲಯಗಳೂ ಸಹಿತ ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಮುಖ್ಯಪಾತ್ರವನ್ನು ವಹಿಸಿವೆ ಎಂದು ವಿವರಿಸಿದರು. ಸಂವಿಧಾನದ ಮಹತ್ವವನ್ನು ವಿವರಿಸುತ್ತಾ ಇದು ಪ್ರಜಾಪ್ರಭುತ್ವದ ಬುನಾದಿ, ಮಾನವ ಹಕ್ಕುಗಳ ರಕ್ಷಣೆಯಲ್ಲಿ ಮತ್ತು ಸರ್ಕಾರಗಳನ್ನು ಸಂವಿಧಾನದ ಆಶಯದಂತೆ ನಡೆಸುವಲ್ಲಿ  ಮುಖ್ಯಪಾತ್ರವನ್ನು ವಹಿಸಿದೆ. ಪ್ರತಿಯೊಬ್ಬರು ಕಾಯ್ದೆ ಕಾನೂನುಗಳನ್ನು ಗೌರವಿಸಬೇಕು, ಎಲ್ಲಾ ಸಮಸ್ಯೆಗಳಿಗೆ ಕಾನೂನಿನಲ್ಲಿ ಪರಿಹಾರವಿದೆ ಎಂದು ತಿಳಿಸಿದರು.  

ಪ್ರಾರಂಭದಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪನಿರ್ದೇಶಕ ಡಾ.ಡಿ.ಜಿ.ಹಳ್ಳಿಕೇರಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಧಾರವಾಡ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಮುರಳಿಧರ ಕಾರಭಾರಿ, ಡಾ.ಸುನೀಲ ಬಾಗಡೆ, ಪ್ರೊ. ಐ.ಬಿ.ಬಿರಾದಾರ, ರಶ್ಮಿ ಮಂಡಿ ಹಾಗೂಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಮತ್ತು ವಿವಿಧ ರಾಜ್ಯದ ಅನೇಕ ಮಹಾವಿದ್ಯಾಲಯದ ಪ್ರಾದ್ಯಾಪಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮುಂತಾದವರು ಉಪಸ್ಥಿತರಿದ್ದರು. 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...