ಮುಂಡಗೋಡ: ಭಾರತ ಸಂವಿಧಾನದ ಶಿಲ್ಪಿ ಡಾಃ ಬಿ. ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಸಂವಿಧಾನ ದಿನಾಚರಣೆ

Source: S.O. News Service | By I.G. Bhatkali | Published on 26th November 2020, 6:12 PM | Coastal News |

ಮುಂಡಗೋಡ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವಾ ಸಮಿತಿ ಮುಂಡಗೋಡ, ವಕೀಲರ ಸಂಘ ಮುಂಡಗೋಡ ಹಾಗೂ ಮುಂಡಗೋಡದ ವಿವಿದs ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ಸಂವಿಧಾನದ ಶಿಲ್ಪಿ ಡಾಃ ಬಿ. ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಸಂವಿಧಾನ ದಿನಾಚರಣೆ ಹಾಗೂ ಪ್ರತಿಜ್ಞಾ ವಿಧಿ ಭೋದsನಾ ಕಾರ್ಯಕ್ರಮವನ್ನು ಗುರವಾರ  ನ್ಯಾಯಾಲಯ ಆವರಣ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.  

ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು       ಕೇಶವ  ಕೆ. ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಿಂತ ಮೊದಲು ನಮ್ಮ ದೇಶವನ್ನು  ಬ್ರಿಟಿಷರಿಂದ ಭಾರತವನ್ನು ಮುಕ್ತಿಗೊಳಿಸಬೇಕು ಎಂದು ಭಾರತದ ಎಲ್ಲ ಜನರು ನಾಯಕರು ಬ್ರಿಟಿಷರ ವಿರುದ್ದ ದಂಗೆ ಎದ್ದು ಉಪನ್ಯಾಸ ಸತ್ಯಾಗ್ರಹ, ಸತತ ಹೋರಾಟ ಮಾಡಿ ಭಾರತದ ಹಲವಾರು ನಾಯಕರುಗಳ ಪ್ರಾಣತ್ಯಾಗ, ಬಲಿದಾನದಿಂದ ಭಾರತವನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು. ನಂತರ ಡಾ. ಬಿ. ಆರ್. ಅಂಬೇಡ್ಕರ್ ರವರ ಮುಂದಾಳತ್ವದಲ್ಲಿ ಭಾರತದ ಏಳಿಗೆಗೋಸ್ಕರ ಸಂವಿಧಾನವನ್ನು ರಚಿಸಲಾಯಿತು. ನಾವೇಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ ಜೀವನ ನಡೆಸಬೇಕು. ನವೆಂಬರ್ 26 ರಂದು ಭಾರತದ ಸಂವಿಧಾನವನ್ನು ಅಂಗಿಕರಿಸಲಾಯಿತು. ಕರಡು ಸಮಿತಿಯ ಅದs್ಯಕ್ಷರಾದ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ನಾವೆಲ್ಲರೂ ನಮ್ಮ ಸಂವಿಧಾನವನ್ನು ಗೌರವಿಸಬೇಕು. ಕಾರಣ ಸಮಾಜದ ಕಟ್ಟ ಕಡೆಯ ಪ್ರಜೆಯು ಭಾರತದ ಸಂವಿಧಾನ ಹಾಗೂ ಕಾನೂನನ್ನು ತಿಳಿದುಕೊಂಡಿರಬೇಕು ಎಂಬುದು ಇದರ ಮುಖ್ಯ ಉದ್ದೇಶ. 

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳಾ ಎಸ್. ಪಿ. ಸಮ್ಮಸಗಿ ಸಂವಿಧಾನ ದಿನದ ಪ್ರತಿಜ್ಞಾ   ವಿಧಿಯನ್ನು ಭೋಧಿಸಿದರು.

ನ್ಯಾಯವಾದಿ  ಕೆ. ಎನ್. ಹೆಗಡೆ ಸಂವಿಧಾನ ದಿನ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಕೀಲರಾದ  ಆರ್. ಎಂ. ಮಳಗೀಕರ್ ಮತ್ತು  ಅನ್ನಪೂರ್ಣ ಎಸ್. ¨Àsಟ್ ವಕೀಲರುಗಳು ಸಂವಿಧಾನದ ಉಗಮ, ರಚನೆ, ಅದರ ಕಾರ್ಯಗಳು, ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ತಮ್ಮ ಉಪನ್ಯಾಸದಲ್ಲಿ ತಿಳಿಸಿಕೊಟ್ಟರು.   

ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾರ್ಯಕ್ರಮದ ಅದs್ಯಕ್ಷತೆಯನ್ನು ವಹಿಸಿದ್ದ ವಕೀಲ  ಜಿ. ಎಸ್. ಕಾತೂರ ಮಾತನಾಡಿ ಸಂವಿಧಾನವು ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ. ಅವುಗಳನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು. ಎಲ್ಲರೂ ಸಂವಿಧಾನವನ್ನು ಗೌರವಿಸೋಣ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ವಕೀಲ  ಬಿ. ಎಫ್. ಪೂಜಾರ ನ್ಯಾಯಾಲಯದ ಎಲ್ಲ ಹಿರಿಯ, ಕಿರಿಯ ನ್ಯಾದಯವಾದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  ವಕೀಲರಾದ  ಆರ್. ಎಸ್. ಹಂಚಿನಮನಿ ಅವರು ಸ್ವಾಗತಿಸಿ, ನಿರೂಪಿಸಿದರು. ಹಾಗೂ ವಕೀಲ ಎಂ. ಎ. ನಂದಿಕಟ್ಟಿ ವಂದನಾರ್ಪಣೆ ಮಾಡಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...