ಸಂವಿಧಾನದ ಮೌಲ್ಯಗಳ ಮೆಲುಕು :ಪ್ರವಾಹ ಪರಿಹಾರದ ಸಮರ್ಥ ನಿರ್ವಹಣೆ – ಜಿಲ್ಲಾಧಿಕಾರಿ ದೀಪಾ ಚೋಳನ್

Source: S.O. News Service | By MV Bhatkal | Published on 26th January 2020, 8:24 PM | State News | Don't Miss |

ಧಾರವಾಡ: ಕಳೆದ ಆಗಸ್ಟ್ಟ್ ಮತ್ತು ಅಕ್ಟೋಬರ್ ನಲ್ಲಿ ಪ್ರವಾಹದಿಂದಾಗಿ ಜಿಲ್ಲೆಯ 1,91,974 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ, 125.25 ಕೋಟಿ ರೂ. ನಷ್ಟದ ಅಂದಾಜನ್ನು ಎನ್‍ಡಿಆರ್‍ಎಫ್ ಮಾರ್ಗಸೂಚಿಗಳ ಪ್ರಕಾರ ಮಾಡಲಾಗಿದೆ. ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಇಲ್ಲಿಯವರೆಗೂ 1,16,400 ರೈತ ಫಲಾನುಭವಿಗಳಿಗೆ 243.73 ಕೋಟಿ ರೂ.ಗಳಷ್ಟು ಪರಿಹಾರ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ 71 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಸರಕಾರದಿಂದ ಸಕಲದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲಾಗಿರುತ್ತದೆ. ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಒಟ್ಟು 60,157 ಮೆಟ್ರಿಕ್ ಟನ್‍ಗಳಷ್ಟು ವಿವಿಧ ರಸಗೊಬ್ಬರಗಳನ್ನು ಪೂರೈಸಲಾಗಿದೆ. ಪ್ರಸಕ್ತವಾಗಿ ಜಿಲ್ಲೆಯಲ್ಲಿ 12,310 ಮೆಟ್ರಿಕ್ ಟನ್‍ಗಳಷ್ಟು ವಿವಿಧ ರಸಗೊಬ್ಬರಗಳ ದಾಸ್ತಾನು ಇದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರಿಗೆ ಪ್ರತಿ 4 ತಿಂಗಳಿಗೊಮ್ಮೆ ವಾರ್ಷಿಕ 3 ಕಂತುಗಳಲ್ಲಿ ಒಂದು ವರ್ಷಕ್ಕೆ 6 ಸಾವಿರ ರೂ.ಗಳಂತೆ ಆರ್ಥಿಕ ನೆರವು ನೀಡಲಾಗುವದು. ಹಾಗೂ ಇದರ ಜೊತೆಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಗಳನ್ನು ಎರಡು ಕಂತುಗಳಲ್ಲಿ ಜಮಾ ಮಾಡಲಾಗುವುದು. ಜಿಲ್ಲೆಯಲ್ಲಿ 1,44,887 ರೈತರಿದ್ದು ಈ ಪೈಕಿ 1,23,835 ರೈತರು ಈಗಾಗಲೇ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ 1,11,473 ರೈತರಿಗೆ 44.20 ಕೋಟಿ ರೂ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪೆÇ್ರೀತ್ಸಾಹಧನ ನೀಡಲಾಗಿದೆ. 65,803 ರೈತರಿಗೆ 13.16 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ವಂತಿಗೆ ಹಣ ಜಮೆಯಾಗಿದೆ. ಈ ಕಾರ್ಯ ಅನುμÁ್ಠನದಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮ ಸ್ಥಾನದಲ್ಲಿದೆ ಎಂದು ತಿಳಿಸಲು ಹೆಮ್ಮೆ ಎನಿಸುತ್ತದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಸಂವಿಧಾನ ಮೌಲ್ಯಗಳ ಮೆಲುಕು: ಭಾರತ ಉತ್ತಮ ಆದರ್ಶಗಳು, ಮೌಲ್ಯಗಳನ್ನು ಹೊಂದಿರುವ ಒಂದು ಬೃಹತ್ ಸಂವಿಧಾನವನ್ನು ಅಂಗೀಕರಿಸಿ ಸರ್ವತಂತ್ರ, ಸ್ವತಂತ್ರ ಗಣರಾಜ್ಯವಾಗಿ ರೂಪುಗೊಂಡು 70 ವರ್ಷಗಳಾಗಿವೆ. ಸುಮಾರು 200 ವರ್ಷಗಳ ಕಾಲ ಭಾರತವನ್ನು ಆಳಿದ ಬ್ರಿಟಿಷರು, ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಅಹಿಂಸಾ ಚಳುವಳಿಗೆ ಮಣಿದು ತಮ್ಮ ಆಳ್ವಿಕೆ ತ್ಯಜಿಸಿ, ದೇಶ ಬಿಟ್ಟು ಹೊರಡುವ ಸಂದರ್ಭದಲ್ಲಿ ಭಾರತದ ಸ್ವಾತಂತ್ರ್ಯ ಕಾಯಿದೆ 1947 ನ್ನು ಜಾರಿಗೊಳಿಸಿದರು. ಈ ಕಾಯಿದೆ ಜಾರಿಗೆ ಬರುವುದಕ್ಕಿಂತ ಒಂದು ವರ್ಷ ಮುಂಚಿತವಾಗಿಯೇ 1946 ರ ಡಿಸೆಂಬರ್ 11 ರಂದು ಸಂವಿಧಾನ ರಚನಾ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಡಾ.ಬಾಬುರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾದರು.
1947ರ ಅಗಸ್ಟ್ 15 ರಂದು ಭಾರತ ದೇಶವು ಸ್ವಾತಂತ್ರ್ಯ ಪಡೆದ ಬಳಿಕ ಸಂಪೂರ್ಣ ಕಾರ್ಯೋನ್ಮುಖವಾದ ಈ ಸಮಿತಿಯು ಒಟ್ಟು 2 ವರ್ಷ 11 ತಿಂಗಳು 17 ದಿನಗಳ ಕಾಲ ನಿರಂತರ ಶ್ರಮವಹಿಸಿ ಸಂವಿಧಾನದ ಪ್ರಾಥಮಿಕ ಕರಡು ಪ್ರತಿಯನ್ನು ಸಿದ್ಧಪಡಿಸಿತು. ಸುಮಾರು 114 ದಿನಗಳ ಕಾಲ ಸಂವಿಧಾನದ ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ನವೆಂಬರ್ 26, 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಜನೆವರಿ 26, 1950 ರಂದು ಜಾರಿಗೆ ತರಲಾಯಿತು. ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಈ ದಿನವು ವರ್ಷದ ಮೊದಲ ರಾಷ್ಟ್ರೀಯ ಹಬ್ಬವೂ ಹೌದು.
ಭಾರತ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಜನವರಿ 26, 1929 ರಂದು ಲಾಹೋರ್‍ನಲ್ಲಿ ಪೂರ್ಣ ಸ್ವರಾಜ್ ಘೋಷಣೆ ಮಾಡಲಾಗಿತ್ತು. ಈ ದಿನದ ನೆನಪಿಗಾಗಿ ಸ್ವಾತಂತ್ರ್ಯಾನಂತರ ಭಾರತದ ಸಂವಿಧಾನವನ್ನು ಜನವರಿ 26 ರಂದೇ ಜಾರಿಗೊಳಿಸಲಾಯಿತು. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾದ ಡಾ. ಬಿ.ಆರ್. ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನವನ್ನು ದೇಶಕ್ಕೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅನೇಕ ಶಿಕ್ಷಣ ತಜ್ಞರು,ನ್ಯಾಯವಾದಿಗಳು,ಪ್ರಜ್ಞಾವಂತರು,ಮುತ್ಸದ್ಧಿಗಳು,ಜನಪ್ರತಿನಿಧಿಗಳು ,ಪ್ರಮುಖ ಮಹಿಳಾ ಸದಸ್ಯರಾದ ಸರೋಜಿನಿ ನಾಯ್ಡು, ರಾಜಕುಮಾರಿ ಅಮೃತಾ ಕೌರ್, ವಿಜಯಲಕ್ಷ್ಮಿ ಪಂಡಿತ್ ಸೇರಿದಂತೆ ದೇಶದ ಎಲ್ಲಾ ಪ್ರಾಂತಗಳ ಪ್ರತಿನಿಧಿಗಳು ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿ ಭಾಗವಹಿಸಿ ತಮ್ಮ ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹಿರಿಮೆ ನಮ್ಮ ಭಾರತ ದೇಶಕ್ಕಿದೆ. ಪ್ರಜಾಪ್ರಭುತ್ವದ ಮೂಲಾಧಾರ ಸಂವಿಧಾನವಾಗಿದೆ. ದೇಶ ಮುನ್ನಡೆಯಲು ಬೆಳಕಾಗಿ ಸಂವಿಧಾನ ನಮಗೆ ದಾರಿ ತೋರುತ್ತಿದೆ. ಈ ದೇಶದ ಎಲ್ಲ ಪ್ರಜೆಗಳು, ವಿದ್ಯಾರ್ಥಿಗಳು, ಯಾವುದೇ ವೃತ್ತಿಯಲ್ಲಿರುವವರು ಸಂವಿಧಾನ ಅರಿತುಕೊಳ್ಳಬೇಕು. ಗಣರಾಜ್ಯೋತ್ಸವದ ಈ ದಿನದ ಸಂದರ್ಭದಲ್ಲಿ ನಾವೆಲ್ಲ ಮತ್ತೊಮ್ಮೆ ನಮ್ಮ ಸಂವಿಧಾನವನ್ನು ಅಧ್ಯಯನ ಮಾಡುವ ಸಂಕಲ್ಪ ಮಾಡೋಣ. ಭಾರತ ಸಂವಿಧಾನ ರಚನೆಗೆ ಶ್ರಮಿಸಿದ ಎಲ್ಲ ಮಹನೀಯರ ಸೇವೆಯನ್ನು ಸ್ಮರಿಸೋಣ ಎಂದರು.
ಪ್ರವಾಹ ಪರಿಸ್ಥಿತಿಯ ಸಮರ್ಪಕ ನಿರ್ವಹಣೆ: ಕಳೆದ 2019 ರ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 168 ರಷ್ಟು ಹೆಚ್ಚುವರಿ ಮಳೆಯಾಗಿ ಅತಿವೃಷ್ಠಿ ಉಂಟಾಯಿತು. ಇದು ಕಳೆದ 118 ವರ್ಷಗಳ ನಂತರ ದಾಖಲಾಗಿರುವ ಅತೀ ಹೆಚ್ಚಿನ ಮಳೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ 7 ಮಾನವ ಜೀವಹಾನಿ ಉಂಟಾಗಿದ್ದು, ಎಲ್ಲ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ. 234 ಜಾನುವಾರು ಜೀವಹಾನಿ ಉಂಟಾಗಿದ್ದು, 15.29 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಅತಿವೃಷ್ಠಿಯಿಂದ ಒಟ್ಟು 128 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿರುತ್ತವೆ. 1,684 ಮನೆಗಳು ಶೇಕಡಾ 25 ರಿಂದ 75 ರವರೆಗೆ ಹಾನಿಯಾಗಿರುತ್ತವೆ. 19,278 ಮನೆಗಳು ಅಲ್ಪ ಪ್ರಮಾಣದಲ್ಲಿ ಹಾನಿಯಾಗಿವೆ. ಒಟ್ಟು 21,090 ಮನೆಗಳು ಹಾನಿಗೀಡಾಗಿವೆ. ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳ ಪುನರ್ ನಿರ್ಮಾಣಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರಧನ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮನೆಗಳ ಪುನರ್ ನಿರ್ಮಾಣ ಮಾಡಲಾಗುತ್ತಿದೆ. ದುರಸ್ತಿ ಕಾರ್ಯ ಕೈಗೊಳ್ಳುವವರಿಗೆ 3 ಲಕ್ಷ ರೂ. ವರೆಗೆ ಪರಿಹಾರ ನೀಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಪಸ್ವಲ್ಪ ಹಾನಿಗೊಳಗಾದ ಮನೆಗಳನ್ನು ದುರಸ್ತಿ ಮಾಡಿಕೊಳ್ಳಲು 50 ಸಾವಿರ ರೂ. ಪರಿಹಾರ ನೀಡಲಾಗುವುದು. ಒಟ್ಟು 19,278 ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಪ್ರವಾಹಕ್ಕೀಡಾದ 3,071 ಸಂತ್ರಸ್ತ ಕುಟುಂಬಗಳಿಗೆ ಬಟ್ಟೆ, ಬರೆ ಮತ್ತು ಪಾತ್ರೆಗಳ ತಕ್ಷಣ ಪರಿಹಾರವಾಗಿ ತಲಾ 10 ಸಾವಿರ ರೂ.ಗಳಂತೆ ಒಟ್ಟು 307.10 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ನೆರೆಬಾಧಿತ ಒಟ್ಟು 33,852 ಕುಟುಂಬಗಳಿಗೆ ಆಹಾರ ಕಿಟ್‍ಗಳನ್ನು ಸರಬರಾಜು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಕೆರೆ, ಕುಡಿಯುವ ನೀರಿನ ಘಟಕಗಳು, ಅಂಗನವಾಡಿ ಕೇಂದ್ರ, ಪ್ರಾಥಮಿಕ ಶಾಲಾ ಕಟ್ಟಡಗಳು ಹಾನಿಗೀಡಾಗಿವೆ. ಇವುಗಳ ದುರಸ್ತಿಗೆ 40 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ, ಈ ಅನುದಾನವನ್ನು ವಿವಿಧ ಇಲಾಖೆಗಳಿಗೆ ಒದಗಿಸಲಾಗಿದ್ದು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಪುನರ್ ರಚನೆ, ನವೀಕರಣ ಹಾಗೂ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಸರ್ಕಾರದಿಂದ ಒಟ್ಟು 30.25 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಮೊದಲ ಕಂತಿನಲ್ಲಿ 12.10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ 4 ಕೋಟಿ, ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ 13 ಕೋಟಿ, ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ 9 ಕೋಟಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು 25 ಕೋಟಿ ರೂ.ಗಳ ಎಸ್‍ಎಫ್‍ಸಿ ವಿಶೇಷ ಅನುದಾನದಲ್ಲಿ ಒಟ್ಟು 26 ರಸ್ತೆ ಹಾಗೂ ಸೇತುವೆಗಳ ನಿರ್ಮಾಣ ಕಾರ್ಯ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ 14ನೇ ಹಣಕಾಸು ಆಯೋಗದ 51.22 ಕೋಟಿ ರೂ. ಅನುದಾನದಲ್ಲಿ ರಸ್ತೆ, ಒಳಚರಂಡಿ, ಸಮುದಾಯ ಭವನಗಳು ಸೇರಿ ವಿವಿಧ 190 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಪಾಲಿಕೆಯ ವಿವಿಧ ಶೀರ್ಷಿಕೆಗಳ 2.92 ಕೋಟಿ ರೂ.ಅನುದಾನದಲ್ಲಿ 12 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನೆರೆಹಾವಳಿಯಿಂದ ಹಾನಿಗೀಡಾದ ರಸ್ತೆ ಸೇತುವೆಗಳ ದುರಸ್ತಿ ಕಾರ್ಯ ನಡೆಸುತ್ತಿದೆ. 2.28 ಕೋಟಿ ರೂ. ವೆಚ್ಚದಲ್ಲಿ 15 ರಾಜ್ಯ ಹೆದ್ದಾರಿ, 11.82 ಕೋಟಿ ರೂ. ಅನುದಾನದಲ್ಲಿ 73 ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ 17.39 ಕೋಟಿ ರೂ. ವೆಚ್ಚದಲ್ಲಿ 73 ಸೇತುವೆ ಕಾಮಗಾರಿಗಳನ್ನು ಕೈಗೊಂಡಿದೆ. ಒಟ್ಟು 161 ಕಾಮಗಾರಿಗಳಲ್ಲಿ 92 ಕಾಮಗಾರಿಗಳು ಪೂರ್ಣಗೊಂಡಿವೆ. 67 ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. 2 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ನಡೆದಿದೆ.
ಬೆಳೆ ವಿಮೆ ಯೋಜನೆಯಡಿ 2018-19 ರ ಹಿಂಗಾರು ಹಂಗಾಮು ಹಾಗೂ 2019-20 ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 1,14,594 ರೈತರಿಗೆ ರೂ 254.74 ಕೋಟಿ ರೂ.ಗಳಷ್ಟು ವಿಮಾ ಪರಿಹಾರ ಮೊತ್ತ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ಮತ್ತಷ್ಟು ಉತ್ತೇಜನ ನೀಡಲು “ರೈತಸಿರಿ” ಯೋಜನೆಯನ್ನು ಸರ್ಕಾರ ಹೊಸದಾಗಿ ಘೋಷಿಸಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೆರ್‍ಗೆ 10 ಸಾವಿರ ರೂ. ನಗದು ಪೆÇ್ರೀತ್ಸಾಹ ಧನ ನೀಡಲಾಗುತ್ತದೆ. ಧಾರವಾಡ ಜಿಲ್ಲೆಗೆ 1,110 ಹೆಕ್ಟೇರ್ ಗುರಿ ನಿಗದಿಪಡಿಸಲಾಗಿದೆ. ಇಲ್ಲಿಯವರೆಗೂ 775 ಹೆಕ್ಟೇರ್‍ಗಳಷ್ಟು ಪ್ರಗತಿ ಸಾಧಿಸಲಾಗಿದೆ.
ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2019-20ನೇ ಸಾಲಿನಲ್ಲಿ ಸರ್ಕಾರವು 107.59ಕೋಟಿ ರೂ. ಆಯವ್ಯಯವನ್ನು ಮಂಜೂರು ಮಾಡಿದೆ. ಕಳೆದ ಡಿಸೆಂಬರ್ ಅಂತ್ಯದವರೆಗೆ ಒಟ್ಟು 14.75 ಲಕ್ಷ ಮಾನವ ದಿನಗಳನ್ನು ಸೃಜಿಸಿ, ಶೇ.96 ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 37,815 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎನ್‍ಆರ್‍ಡಿಡಬ್ಲ್ಯೂಪಿ ಯೋಜನೆಯಡಿ, ಜಿಲ್ಲೆಗೆ ಒಟ್ಟಾರೆ 42.75 ಕೋಟಿ ರೂ.ಗಳ ಅನುದಾನ ನಿಗದಿಪಡಿಸಲಾಗಿದೆ. 335 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈವರೆಗೆ 95 ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕುಡಿಯುವ ನೀರು: ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಹಾಗೂ ಇತರೆ 2 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ನವಲಗುಂದ ತಾಲೂಕಿನ ಮೊರಬ ಹಾಗೂ ಇತರೆ 3 ಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ 42.5 ಕೋಟಿ ರೂ.ಗಳು ಮಂಜೂರಾಗಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿವೆ.
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 58 ಯೋಜನೆಗಳನ್ನು ಒಂದು ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ. ಇಲ್ಲಿಯವರೆಗೆ 626.25 ಕೋಟಿ ರೂ. ಮಂಜೂರಾಗಿದ್ದು, 9 ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಇದೇ ಜನವರಿ 3 ರಂದು ನವದೆಹಲಿಯ ಸ್ಮಾರ್ಟ್‍ಸಿಟಿ ಮಿಷನ್ ಅವರ ಪ್ರಕಟಣೆಯಂತೆ ರಾಜ್ಯದ ಇತರ ಸ್ಮಾರ್ಟ್ ಸಿಟಿ ನಗರಗಳಲ್ಲಿ ಹುಬ್ಬಳ್ಳಿ-ಧಾರವಾಡ 4ನೇ ರ್ಯಾಂಕಿಂಗ್‍ನಲ್ಲಿದೆ. ಒಟ್ಟು 174.79 ಅಂಕಗಳನ್ನು ಪಡೆದು ದೇಶದ 100 ಸ್ಮಾರ್ಟ್‍ಸಿಟಿ ನಗರಗಳಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವು 27ನೇ ರ್ಯಾಂಕಿಂಗ್ ಪಡೆದಿದೆ.
ಫೆ.2 ರಂದು ಹೆಚ್‍ಡಿಬಿಆರ್‍ಟಿಎಸ್ ಉದ್ಘಾಟನೆ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ತ್ವರಿತ ಸಾರಿಗೆ ಸಂಪರ್ಕ ಕಲ್ಪಿಸಲು ಹೆಚ್-ಡಿ.ಬಿ.ಆರ್.ಟಿ.ಎಸ್ ಮತ್ತು ವಾ.ಕ.ರ.ಸಾ.ಸಂಸ್ಥೆಯ ಸಹಭಾಗಿತ್ವದಲ್ಲಿ 2018 ರ ಅಕ್ಟೋಬರ್ 2 ರಿಂದ 100 ಬಸ್‍ಗಳ ಪ್ರಾಯೋಗಿಕ ಕಾರ್ಯಾಚರಣೆ ಆರಂಭಿಸಲಾಗಿದೆ. ಸಾರಿಗೆ ವ್ಯವಸ್ಥೆಯಲ್ಲಿಯೇ ಐ.ಟಿ.ಎಸ್. ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವುದು ಹೆಚ್-ಡಿ.ಬಿ.ಆರ್.ಟಿ.ಎಸ್ ನ ವಿಶೇಷತೆಗಳಲ್ಲಿ ಒಂದಾಗಿದೆ. ಅತ್ಯುನ್ನತ ಮಾದರಿಯ ಯಂತ್ರೋಪಕರಣಗಳು, ಸಂಚಾರ ವ್ಯವಸ್ಥೆಗಳನ್ನು ಯೋಜನೆಯಡಿ ಅಳವಡಿಸಿಕೊಳ್ಳಲಾಗಿದೆ. ರಾಜ್ಯದ ರಸ್ತೆ ಸಾರಿಗೆ ವ್ಯವಸ್ಥೆಯಲ್ಲಿ ಮೊದಲಬಾರಿಗೆ ಸ್ಮಾರ್ಟ್‍ಕಾರ್ಡ್ ಪದ್ಧತಿಯನ್ನು ಹೆಚ್-ಡಿ.ಬಿ.ಆರ್.ಟಿ.ಎಸ್ ಸಾರಿಗೆ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.
ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಭಾರತ ಸರ್ಕಾರವು ಉತ್ತಮ ನಗರ ಸಮೂಹ ಸಾರಿಗೆ ವರ್ಗದಡಿ ಪ್ರಶಸ್ತಿ ನೀಡಿ ಗೌರವಿಸಿದೆ. ಯೋಜನೆಯು ಸಂಪೂರ್ಣ ಪ್ರಮಾಣದಲ್ಲಿ ಅನುμÁ್ಠನಗೊಂಡಿದ್ದು, ಬರುವ ಫೆಬ್ರವರಿ 2 ರಂದು ಭಾರತದ ಉಪ ರಾಷ್ರಪತಿಗಳು ಹುಬ್ಬಳ್ಳಿ-ಧಾರವಾಡ ತ್ವರಿತ ಬಸ್ ಸಾರಿಗೆ ಯೋಜನೆ ಮತ್ತು ಸಾರಿಗೆ ಪೂರಕ ಮೂಲಭೂತ ಸೌಕರ್ಯಗಳನ್ನು ಅಧಿಕೃತವಾಗಿ ಉದ್ಘಾಟಿಸಿ, ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಇನ್ವೆಸ್ಟ್ ಕರ್ನಾಟಕ, ಕುಸ್ತಿ ಹಬ್ಬ, ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ: ಬರುವ ಫೆಬ್ರವರಿ 14 ರಂದು ಹುಬ್ಬಳ್ಳಿಯಲ್ಲಿ “ಇನ್‍ವೆಸ್ಟ್ ಕರ್ನಾಟಕ - ಹುಬ್ಬಳ್ಳಿ” ಬಂಡವಾಳ ಹೂಡಿಕೆ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ಈಗಾಗಲೇ ಮುಂಬಯಿಯಲ್ಲಿ ರೋಡ್ ಶೋ ನಡೆದಿದೆ. ಹೈದ್ರಾಬಾದನಲ್ಲಿ ಕೂಡಾ “ರೋಡ್ ಶೋ” ಏರ್ಪಡಿಸಲಾಗುತ್ತಿದೆ. ಈ ಮೂಲಕ ಧಾರವಾಡ ಜಿಲ್ಲೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುತ್ತಿದೆ.
ಕ್ರೀಡೆ, ಸಾಹಿತ್ಯ, ಸಂಗೀತ, ವಿಜ್ಞಾನ, ಕಲೆ ಮತ್ತು ಸಂಸ್ಕøತಿ ಮೊದಲಾದ ಕ್ಷೇತ್ರಗಳಲ್ಲಿ ಧಾರವಾಡ ಜಿಲ್ಲೆಯು ಹೆಮ್ಮೆಯ ಪರಂಪರೆ ಹೊಂದಿದೆ. ಈ ಪರಂಪರೆಯನ್ನು ಮೆಲುಕು ಹಾಕುವ ರೀತಿಯಲ್ಲಿ ಬರುವ ಫೆಬ್ರವರಿ ತಿಂಗಳಲ್ಲಿ ಧಾರವಾಡ ನಗರದಲ್ಲಿ ಕರ್ನಾಟಕ ಕುಸ್ತಿಹಬ್ಬ ಆಯೋಜಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಕುಸ್ತಿಪಟುಗಳು ಸೇರಿದಂತೆ ಸಾವಿರಾರು ಕುಸ್ತಿಪಟುಗಳು 4 ದಿನಗಳ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮಗಳನ್ನು ನಗರದಲ್ಲಿ ಆಯೋಜಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಜನತೆ ಈ ಎಲ್ಲ ಪ್ರಮುಖ ಕಾರ್ಯಕ್ರಮಗಳ ಯಶಸ್ವಿಗೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ರಾಷ್ಟ್ರಪತಿಗಳ ಶ್ಲ್ಯಾಘನೀಯ ಪದಕಗಳನ್ನು ಪಡೆದಿರುವ ಜಿಲ್ಲೆಯ ಪೊಲೀಸ್ ಅಧಿಕಾರಿಗಳಾದ ಎಸಿಪಿ ಶಂಕರ ರಾಗಿ ಹಾಗೂ ಪಿಎಸ್‍ಐ ಬಾಬುಸಿಂಗ್ ಕಿತ್ತೂರ ಅವರು ಉತ್ತಮ ಸಾಧನೆಯ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತ ಆರ್.ದಿಲೀಪ್, ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಐಎಎಸ್ ಪ್ರೊಬೇಷನರಿ ಅಧಿಕಾರಿಗಳಾದ ಆಕೃತಿ ಬನ್ಸಾಲ್, ಭರತ್ ಎಸ್., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿವೈಎಸ್‍ಪಿ ರವಿ ನಾಯಕ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಎಸಿಪಿ ಎಂ.ಎನ್. ರುದ್ರಪ್ಪ, ಧಾರವಾಡ ತಹಶೀಲ್ದಾರ ಸಂತೋಷಕುಮಾರ್ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇನ್ಸ್‍ಪೆಕ್ಟರ್ ಜಿ.ಸಿ.ಡೂಗನವರ ನೇತೃತ್ವದಲ್ಲಿ ವಿವಿಧ 23 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರವಿ ಕುಲಕರ್ಣಿ ಹಾಗೂ ಸುಮಿತಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...