ಪೌರ ಕಾರ್ಮಿಕರಿಗೆ ಒಂದು ವರ್ಷದೊಳಗೆ 164ಮನೆಗಳ ನಿರ್ಮಾಣ: ಸಚಿವ ಕೆ.ಎಸ್.ಈಶ್ವರಪ್ಪ

Source: SO News | By Laxmi Tanaya | Published on 4th October 2020, 6:28 AM | State News | Don't Miss |

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದ ಒಳಗಾಗಿ 164ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು  ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6ಎಕ್ರೆ ಜಮೀನು ಗುರುತಿಸಲಾಗಿದ್ದು, ತಕ್ಷಣ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಪೌರ ಕಾರ್ಮಿಕರಿಗೆ ಮನೆಯನ್ನು ಒದಗಿಸುವ ವಿಶಿಷ್ಟ ಯೋಜನೆ ಇದಾಗಿದ್ದು, ಇಡೀ ರಾಜ್ಯಕ್ಕೆ ಇದು ಮಾದರಿಯಾಗಿದೆ ಎಂದು ಹೇಳಿದರು.

ಮನೆಗಳ ನಿರ್ಮಾಣದಿಂದಾಗಿ ಇಡೀ ಊರನ್ನು ಸ್ವಚ್ಛಗೊಳಿಸುವಂತಹ ಮಹಾನ್ ಕಾಯಕ ಮಾಡುವ ಪೌರಕಾರ್ಮಿಕರಿಗೆ ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಲಿದೆ. ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಗಾಂಧಿ ಜಯಂತಿ ದಿನದಂದು ಪೌರ ಕಾರ್ಮಿಕರ ಮನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ಒದಗಿರುವುದು ಅರ್ಥಪೂರ್ಣವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ದಿನ ನಿಜವಾದ ಸ್ವಾತಂತ್ರ್ಯ ಎಂಬ ಗಾಂಧೀಜಿ ಅವರ ನುಡಿ ಇಂದು ಸಾಕಾರವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‍ಗಳಾದ ಚನ್ನಬಸಪ್ಪ, ನಾಗರಾಜ ಕಂಕಾರಿ, ಯೋಗೀಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...