ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 600 ಮನೆಗಳ ನಿರ್ಮಾಣ- ದಿಂಬಾಲ ಅಶೋಕ್‌

Source: sonews | By Staff Correspondent | Published on 1st November 2018, 8:20 PM | State News | Don't Miss |

ಶ್ರೀನಿವಾಸಪುರ: ಪಟ್ಟಣದಲ್ಲಿ ಸರ್ವರಿಗೂ ಸೂರು ಯೋಜನೆಯಡಿ ವಿವಿಧ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ವಸತಿ ರಹಿತರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 600 ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಪಿಎಲ್ಡಿ ಬ್ಯಾಂಕ್ಅಧ್ಯಕ್ಷ ದಿಂಬಾಲ ಅಶೋಕ್ಹೇಳಿದರು.

ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ಮುಖಂಡರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಜೂರಾಗಿರುವ ಮನೆಗಳ 600 ಮನೆಗಳ ಪೈಕಿ ಕಟ್ಟೆ ಕೆಳಗಿನ ಪಾಳ್ಯಕ್ಕೆ 67, ಜನಜೀವನ ಪಾಳ್ಯಕ್ಕೆ 148, ಜಾಕೀರ್ಹುಸೇನ್ಮೊಹಲ್ಲಾಗೆ 150, ಸಂತೆ ಮೈದಾನಕ್ಕೆ 184 ಹಾಗೂ ಅಂಬೇಡ್ಕರ್ಪಾಳ್ಯಕ್ಕೆ 51 ಮನೆಗಳನ್ನು ಹಂಚಿಕೆ ಮಾಡಲಾಗಿದೆ. .2 ರಂದು ಬೆಳಿಗ್ಗೆ 11.30 ಗಂಟೆಗೆ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ಕುಮಾರ್ಅವರು 600 ಮನೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು ಎಂದು ಹೇಳಿದರು.

ಪುರಸಭಾ ಸದಸ್ಯ ಬಿ.ಎಲ್‌.ಪ್ರಕಾಶ್ಮಾತನಾಡಿ, ನಿಯಮಾನುಸಾರ ಪಕ್ಷಾತೀತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆಯಾ ಕೊಳಚೆ ಪ್ರದೇಶದಲ್ಲಿ ವಾಸಿಸುವ ವಸತಿ ರಹಿತರಿಗೆ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ. ಸಂತೆ ಮೈದಾನದಲ್ಲಿ ನೆಲ ಹಾಗೂ ಮಹಡಿ ಮನೆಗಳನ್ನು ನಿರ್ಮಿಸಲಾಗುವುದು. ಮನೆ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ರೂ.10ಸಾವಿರ ಹಾಗೂ ಇತರರು ರೂ.15 ಸಾವಿರ ಶುಲ್ಕ ನೀಡಬೇಕಾಗುತ್ತದೆ. ಮನೆ ನಿರ್ಮಿಸಿಕೊಡುವುದರ ಜೊತೆಗ ಅಗತ್ಯವಾದ ಎಲ್ಲ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಪುರಸಭಾಧ್ಯಕ್ಷ ಮುಕ್ತಿಯಾರ್ ಅಹ್ಮದ್ಮಾತನಾಡಿ, ಪುರಸಭೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿರುವ 4 ಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ರೂ.4.20 ಕೋಟಿ ಮಂಜೂರು ಮಾಡಿದೆ. ಹಣದಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುವುದು. ರಾಜೀವ್ಗಾಂಧಿ ಗೃಹನಿರ್ಮಾಣ ಯೋಜನೆಯಡಿ 500ಮನೆಗಳು ಮಂಜೂರಾಗಿದ್ದು, ನಿವೇಶನ ಹೊಂದಿರುವ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಎಸ್ಸಿ, ಎಸ್್ಟಿಗೆ ತಲಾ ರೂ.3.30 ಲಕ್ಷ ಹಾಗೂ ಇತರರಿಗೆ ರೂ.2.70 ಲಕ್ಷ ನೀಡಲಾಗುವುದು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌, ಬ್ಲಾಕ್ಕಾಂಗ್ರೆಸ್ಅಧ್ಯಕ್ಷ ಅಕ್ಬರ್ಷರೀಫ್‌, ಮುಖಂಡರಾದ ಗಂಗಾಧರ್‌, ವೆಂಕಟರೆಡ್ಡಿ, ಮುನಿರಾಜು, ಸರ್ದಾರ್, ನವಾಬ್‌, ಜಯಣ್ಣ

 

 

 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...