ಜಿಲ್ಲೆಯಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

Source: SO News | By Laxmi Tanaya | Published on 14th June 2021, 6:57 PM | State News | Don't Miss |

ಶಿವಮೊಗ್ಗ :  ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು,  ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‍ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಆದ್ಯತಾ ವಲಯದ ಫಲಾನುಭವಿಗಳಿಗೆ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತಗೊಳಿಸಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅರುಣ್, ದತ್ತಾತ್ರೇಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...