ಕಾಪು: ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ವಂಚಿಸಲು ಯತ್ನ; ವೈದ್ಯೆ ಸೇರಿ ಇಬ್ಬರ ಬಂಧನ

Source: VB News | Published on 28th July 2020, 12:22 AM | Coastal News | Don't Miss |

 

 

ಕಾಪು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕಿಗೆ ವಂಚಿಸಲು ಯತ್ನಿಸಿರುವ ಆರೋಪದಡಿ ವೈದ್ಯೆ ಸೇರಿದಂತೆ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಉಪ್ಪೂರು ಸಾಲ್ಮರ ನಿವಾಸಿ ಡಾ.ರಿನೇಟ್ ಸೋನಿಯಾ ಡಿಸೋಜ(37) ಹಾಗೂ ಸಾಲಿಗ್ರಾಮ ಚಿತ್ರಪಾಡಿಯ ವಿಜಯ ಕೊಠಾರಿ(43) ಬಂಧಿತ ಆರೋಪಿಗಳು.
ಡಾ.ರಿನೆಟ್ ಮಣಿಪಾಲ ಕೆಎಂಸಿ ಆಸ್ಪತ್ರೆ ಮತ್ತು ಮಣಿಪಾಲ ಮಾಹೆಯಲ್ಲಿ ವೈದ್ಯೆ ಹಾಗೂ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಜು.13ರಂದು ಆಕೆ ಮತ್ತು ಆಕೆಯ ಸಹೋದರನಿಗೆ ವಾಹನ ಖರೀದಿಸಲು ಸಾಲ ನೀಡುವಂತೆ ಬ್ಯಾಂಕ್ ಆಫ್ ಬರೋಡಾ ಮೂಡಬೆಟ್ಟು ಶಾಖೆಗೆ ದಾಖಲಾತಿಗಳನ್ನು ಸಲ್ಲಿಸಿದ್ದರು. ಅರ್ಜಿಯೊಂದಿಗೆ ಸಲ್ಲಿಸಿದ ಮಣಿಪಾಲ ಮಾಹೆಯ ವೇತನ ಸ್ಲಿಪ್‌ಗಳನ್ನು ಬ್ಯಾಂಕಿನವರು ಪರಿಶೀಲಿಸಿದ್ದು, ಮಾಹೆ ಇ-ಮೈಲ್ ಮೂಲಕ ಬ್ಯಾಂಕಿಗೆ ಸಲ್ಲಿಸಿರುವ ದೃಢಪತ್ರದಿಂದ ಆಕೆ ಈ ಸಂಸ್ಥೆಯಲ್ಲಿ ಉದ್ಯೋಗದಲ್ಲಿ ಇಲ್ಲ ಎಂಬುದು ತಿಳಿದುಬಂದಿದೆ. ಅದರಂತೆ ಜು.24ರಂದು ಬ್ಯಾಂಕಿನ ಮೆನೇಜರ್ ಅಲ್ವಿನಾ ಡಿಸೋಜ ನೀಡಿದ ದೂರಿನಂತೆ ಡಾ.ರಿನೆಟ್ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಟಪಾಡಿ ಬ್ಯಾಂಕಿನಲ್ಲಿ ಬಂಧನ: ‌ಈ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಆರೋಪಿ ಡಾ.ರಿನೇಟ್ ಡಿಸೋಜ ಜು.24ರಂದು ಬರೋಡಾ ಬ್ಯಾಂಕ್ ಕಟಪಾಡಿ ಶಾಖೆಗೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆಕೆ, ನನಗೆ ವಿಜಯ ಕೊಠಾರಿ ಸಾಲಕ್ಕೆ ಅರ್ಜಿ ಸಲ್ಲಿಸಲು ನಕಲಿ ದಾಖಲಾತಿಗಳನ್ನು ಮಾಡಿಕೊಟ್ಟಿರುವುದಾಗಿ ತಿಳಿಸಿದ್ದಳು. ಅದರಂತೆ ಪೊಲೀಸರು ವಿಜಯ ಕೊಠಾರಿಯನ್ನು ಬಂಧಿಸಿ, ಆತ ನಕಲಿ ದಾಖಲೆ ತಯಾರಿಸುತ್ತಿದ್ದ ಲ್ಯಾಪ್‌ಟಾಪ್‌ನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ.
ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕ ಮೊತ್ತದ ಸಾಲ ಪಡೆದು ಬ್ಯಾಂಕಿಗೆ ಮೋಸ ಮಾಡುವುದನ್ನು ಬ್ಯಾಂಕಿನ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಕಾಪು ಎಸ್ಸೈ ರಾಜಶೇಖರ್ ಬಿ.ಸಾಗನೂರ್, ಅಪರಾಧ ವಿಭಾಗದ ಎಸ್ಸೈ ಐ.ಆರ್.ಗಡ್ಡೆಕರ್, ಪ್ರೊಬೆಷನರಿ ಎಸ್ಸೈ ಅನಿಲ್ ಮಾದರ, ಸಿಬ್ಬಂದಿಗಳಾದ ರವಿ ಕುಮಾರ್, ರಮೇಶ್, ಮಹಾಬಲ ಶೆಟ್ಟಿಗಾರ್, ಸುಲೋಚನಾ, ಶ್ರೀನಾಥ, ಪರಶುರಾಮ, ಅರುಣ್ ಕುಮಾರ್, ಆನಂದ ಭಾಗವಹಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...