ಭಟ್ಕಳದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಅರ್ಧ ಶತಕ; ಸೆಂಟ್ ಥಾಮಸ್ ಶಾಲೆಯ 17 ವಿದ್ಯಾರ್ಥಿಗಳಿಗೆ ಸೊಂಕು

Source: S.O. News Service | By V. D. Bhatkal | Published on 17th January 2022, 12:08 PM | Coastal News |

ಭಟ್ಕಳ: ತಾಲೂಕಿನಲ್ಲಿ ನಿರೀಕ್ಷೆಯಂತೆಯೇ ರವಿವಾರ ಕೊರೊನಾ ಸ್ಫೋಟಗೊಂಡಿದೆ. ತಾಲೂಕಿನಲ್ಲಿ ಒಂದೇ ದಿನ 51 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಇಲ್ಲಿನ ಶಿರಾಲಿ ಕೋಟೆಬಾಗಿಲ್ ಸೆಂಟ್ ಥಾಮಸ್ ಶಾಲೆಯ 17 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ, ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಲೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ಸೆಂಟ್ ಥಾಮಸ್ ಶಾಲೆಗೆ ರಜೆ ಘೋಷಿಸುವುದು ನಿಶ್ಚಿತವಾಗಿದೆ.

ಒಂದು ಶಾಲೆಯಲ್ಲಿ 5ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಬಾಧಿತರಾಗಿದ್ದರೆ ಆ ಶಾಲೆಗೆ ರಜೆ ಘೋಷಿಸಲಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳೇ ನಿರ್ಣಯ ಕೈಗೊಳ್ಳುತ್ತಾರೆ. ನಾವು ಜಿಲ್ಲಾಡಳಿತಕ್ಕೆ ವರದಿಯನ್ನು ನೀಡುತ್ತೇವೆ.
ದೇವಿದಾಸ ಮೊಗೇರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಭಟ್ಕಳ

ಕೋಟೆಬಾಗಿಲ ಮಜಿರೆಯಲ್ಲಿ ಓರ್ವ ನರ್ಸ್ ಸೇರಿದಂತೆ 4-5 ಜನರಿಗೆ ಕೊರೊನಾ ತಗುಲಿದ್ದು, ಸೆಂಟ್ ಥಾಮಸ್ ಶಾಲೆ ಪರಿಸರದ 100ಮೀ. ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸುವ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಅಲ್ಲದೇ ಭಟ್ಕಳ ಅಂಜುಮನ್ ಶಾಲೆಯ ಮೂವರು ಶಿಕ್ಷಕರು ಕೊರೊನಾ ಪೀಡಿತರಾಗಿರುವುದಾಗಿ ಪರೀಕ್ಷಾ ವರದಿ ತಿಳಿಸಿದೆ. ತರಬೇತಿಗಾಗಿ ಚಿತ್ರದುರ್ಗಕ್ಕೆ ತೆರಳಿದ್ದ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಓರ್ವರಿಗೆ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಕೊಂಡಿರುವ ಆರೋಗ್ಯ ಇಲಾಖೆಗೆ ಸವಾಲು ಎದುರಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...