ಕೊರೋನಾ ಕೊನೆಯ ಸಾಕ್ರಾಮಿಕವಲ್ಲ, ಭವಿಷ್ಯದಲ್ಲಿ ಮತ್ತಷ್ಟು ಸವಾಲುಗಳಿಗೆ ಜಗತ್ತು ಸಿದ್ಧವಾಗಬೇಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Source: AFP | Published on 8th September 2020, 11:41 PM | National News | Don't Miss |


ಜಿನೀವಾ: ಜಗತ್ತಿನ 213 ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕು ಕೊನೆಯ ಸಾಂಕ್ರಾಮಿಕವಲ್ಲ. ಇಂತಹ ಹಲವು ಸಾಂಕ್ರಾಮಿಕಗಳಿಗೆ ಜಗತ್ತು ಮಾನಸಿಕವಾಗಿ ಮತ್ತು ಬೌದ್ಧಿಕವಾಗಿ ಸಿದ್ಧವಾಗಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೇಯೆಸಸ್ ಅವರು, ಕೊರೋನಾ ವೈರಸ್ ಸೋಂಕು ಕೊನೆಯ ಸಾಂಕ್ರಾಮಿಕವಲ್ಲ. ಇಂತಹ ಹಲವು ಸಾಂಕ್ರಾಮಿಕಗಳು ಭವಿಷ್ಯದಲ್ಲಿ ಜಗತ್ತನ್ನು ಪೀಡಿಸಬಹುದು. ಹೀಗಾಗಿ ಭವಿಷ್ಯದ ಬಿಕ್ಕಟ್ಟುಗಳಿಗೆ ವಿಶ್ವದಾದ್ಯಂತ  ದೇಶಗಳು ಸಿದ್ಧರಾಗಿರಬೇಕು. ಇದು ಮಾತ್ರವಲ್ಲ, ನಾವು ಯಾವುದೇ ಸಮಸ್ಯೆಯನ್ನು ನಿಭಾಯಿಸಬಹುದು, ಇದಕ್ಕಾಗಿ ಎಲ್ಲಾ ದೇಶಗಳು ಆರೋಗ್ಯ ರಕ್ಷಣೆಲ್ಲಿ ಹೂಡಿಕೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
'ಕೊರೋನಾ ವೈರಸ್ ಕೊನೆಯ ಸಾಂಕ್ರಾಮಿಕವಲ್ಲ. ಸಾಂಕ್ರಾಮಿಕ ರೋಗಗಳು ಜೀವನದ ಒಂದು ಭಾಗ ಎಂದು ಇತಿಹಾಸ ನಮಗೆ ಕಲಿಸಿದೆ. ಆದರೆ ಮುಂದಿನ ಬಾರಿ ಸಾಂಕ್ರಾಮಿಕ ರೋಗ ಬಂದಾಗ, ನಾವೆಲ್ಲರೂ ಅದಕ್ಕೆ ಸಿದ್ಧರಾಗಿರಬೇಕು. ತಂತ್ರಜ್ಞಾನಗಳಲ್ಲಿ ಹೆಚ್ಚಿನ ಪ್ರಗತಿಯ ಹೊರತಾಗಿಯೂ, ಅನೇಕ ದೇಶಗಳು  ಇನ್ನೂ ತಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಸರಿಯಾದ ದಿಕ್ಕಿನಲ್ಲಿ ಗಮನಹರಿಸಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ದೇಶಗಳು ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹೆಚ್ಚು ಹೂಡಿಕೆ ಮಾಡಬೇಕಾಗುತ್ತದೆ ಎಂದು ಟೆಡ್ರೊಸ್ ಅಧಾನೊಮ್ ಹೇಳಿದ್ದಾರೆ.
ಇನ್ನು ಕಳೆದ 2019ರ ಡಿಸೆಂಬರ್ ನಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಕ್ರಮೇಣ ಜಗತ್ತಿನಾದ್ಯಂತ ಪ್ರಸರಿಸಿದ್ದು, ಸಾಂಕ್ರಾಮಿಕವಾಗಿ ಪರಿಣಮಿಸಿದೆ. ಕಳೆದ ಮಾರ್ಚ್ ನಲ್ಲಿಯೇ ವಿಶ್ವಸಂಸ್ಥೆ ಕೋವಿಡ್-19 ಅನ್ನು ಮಾರ್ಚ್ 11 ರಂದು ಸಾಂಕ್ರಾಮಿಕ ರೋಗವನ್ನು ಘೋಷಿಸಲಾಯಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...