ಇನ್ನೂ ಆರು ತಿಂಗಳಲ್ಲಿ ಕೊರೋನಾ ವ್ಯಾಕ್ಸಿನ್ - ಕೇಂದ್ರ ಸಚಿವ ಹರ್ಷವರ್ಧನ

Source: SO News | By Laxmi Tanaya | Published on 16th October 2020, 3:37 PM | National News | Don't Miss |

ನವದೆಹಲಿ : ಇನ್ನು ಕೆಲವೇ ತಿಂಗಳುಗಳಲ್ಲಿ ಭಾರತ ಕೊರೋನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಭಾರತೀಯ ರೆಡ್‌‌ ಕ್ರಾಸ್ ಸೊಸೈಟಿ ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್ನ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವದ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಮುಂದಿನ ಆರು ತಿಂಗಳಲ್ಲಿ  ಕೊರೋನಾ ಲಸಿಕೆಯನ್ನು ಜನರಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತೇವೆ. ಈ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡಲು ನಾವು ಆರು ಅಡಿಗಳಷ್ಟು ದೂರದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಕೈ ತೊಳೆಯುವುದು ಮತ್ತು ವಿಶೇಷವಾಗಿ ಸಾರ್ವಜನಿಕ  ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು. ಇದರಿಂದ ಹಲವರ ಜೀವ ಉಳಿಸಬಹುದು ಎಂದು ಅವರು ಹೇಳಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...