ಕೊರೊನಾ ವೈರಸ್ : ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ಗೆ0 ಹೆಚ್ಚಿನ ದರ ನಿಗಧಿಪಡಿಸಿದರೆ ಕಠಿಣ ಕ್ರಮ - ಜಿಲ್ಲಾಧಿಕಾರಿ ಜಿ.ಜಗದೀಶ್

Source: so news | Published on 19th March 2020, 12:03 AM | Coastal News | Don't Miss |

 

ಉಡುಪಿ: ಜಿಲ್ಲೆಯಲ್ಲಿನ ಸಾರ್ವಜನಿಕರು (ಕೋವಿಡ್-19) ಕೊರೊನಾ ವೈರಸ್ ಭೀತಿಯಲ್ಲಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಲವಾರು ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ನಂತಹ ಉಪಯುಕ್ತ ವಸ್ತುಗಳನ್ನು ಬಳಸಲಾಗುತ್ತಿದೆ.
ಆದರೆ ಈ ಸಂದರ್ಭವನ್ನು ಔಷಧಿ ಅಂಗಡಿ ಮಾಲಕರು ದುರುಪಯೋಗ ಪಡಿಸಿಕೊಂಡು ಹೆಚ್ಚಿನ ದರಗಳಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಈ ವಸ್ತುಗಳನ್ನು ನಿಯಮಬಾಹಿರವಾಗಿ ದಾಸ್ತಾನು ಇರಿಸಿ ಕೃತಕ ಅಭಾವವನ್ನು ಸೃಷ್ಟಿಸಿ ಈ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಲಾಭ ಪಡೆಯಲು ಹವಣಿಸುತ್ತಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ಔಷಧ ಅಂಗಡಿಗಳಲ್ಲಿ ಕೆಮ್ಮು, ಸೀನು ಇರುವ ಸಿಬ್ಬಂದಿಗಳು ಮಾಸ್ಕ್ ಧರಿಸದೇ ಗ್ರಾಹಕರಿಗೆ ಔಷಧಿ ಮಾರಾಟ ಮಾಡುತ್ತಿರುವುದಾಗಿ ದೂರುಗಳು ಬಂದಿರುತ್ತದೆ.
ಇದರಿಂದಾಗಿ ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಹಿನ್ನೆಡೆಯಾಗುತ್ತಿದ್ದು, ಆದ್ದರಿಂದ ಈ ತೆರನಾದ ಯಾವುದೇ ಚಟುವಟಿಕೆ ನಡೆಸದಂತೆ ತಿಳುವಳಿಕೆ ನೀಡಿದೆ. ತಪ್ಪಿದಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ: 1077, ದೂರವಾಣಿ ಸಂಖ್ಯೆ: 0820-2574802 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಡಿಸಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...