ಕೊರೋನಾ ವೈರಸ್ ರೂಪಾಂತರ ಆತಂಕ. ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್‌ಕರ್ಫ್ಯೂ ಜಾರಿ : ಮುಖ್ಯಮಂತ್ರಿ ಘೋಷಣೆ.

Source: SO News | By Laxmi Tanaya | Published on 23rd December 2020, 1:31 PM | State News |

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಭಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು  ರಾತ್ರಿ  ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಒಟ್ಟು  9 ದಿನಗಳ ಕಾಲ ರಾತ್ರಿ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 23 ರಿಂದ ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರಲಿದ್ದು ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗೆ  ಕಡಿವಾಣ ಹಾಕಿದಂತಾಗಿದೆ.

ಕರ್ಪ್ಯೂ ಅವಧಿಯಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳು  ಬಂದ್ ಆಗಲಿದ್ದು, ಯಾವುದೇ ವ್ಯಾಪಾರ, ವಹಿವಾಟುಗಳೂ ನಡೆಯುವುದಿಲ್ಲ. ಸಂಜೆ 5 ಗಂಟೆಗೆ ನೈಟ್‌ಕರ್ಫ್ಯೂ ಸಂಬಂಧ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...