ಕೊರೊನಾ ವೈರಸ್ : ಹುಬ್ಬಳ್ಳಿಯಲ್ಲಿ ಪ್ರಯೋಗಾಲಯ ಶೀಘ್ರ ಸ್ಥಾಪನೆ - ಸಚಿವ ಜಗದೀಶ ಶೆಟ್ಟರ್

Source: so news | Published on 22nd March 2020, 12:17 AM | State News | Don't Miss |

 

ಧಾರವಾಡ: ಕೊರೊನಾ ವೈರಸ್ ಹರಡದಂತೆ ತಡೆಯುವಲ್ಲಿ ಸರ್ಕಾರ, ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಜನರು ಶುಚಿತ್ವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯಕ್ಕೆ ಒತ್ತು ನೀಡಬೇಕು. ಕೋವಿಡ್-19 ರ ಗಂಟಲು ದ್ರವ ಮಾದರಿ ಪ್ರಯೋಗಾಲಯವನ್ನು ಹುಬ್ಬಳ್ಳಿಯಲ್ಲಿ ಶೀಘ್ರ ಸ್ಥಾಪಿಸಲಾಗುವುದು. ಕೊರೊನಾ ವೈರಸ್ ನಿಯಂತ್ರಣಕ್ಕೆ ವ್ಯಾಪಕ ಜನಜಾಗೃತಿ ಮೂಡಿಸಲು ಪ್ರಧಾನಮಂತ್ರಿಗಳು ಕರೆ ನೀಡಿರುವ ಭಾನುವಾರದ ಜನತಾ ಕಫ್ರ್ಯೂಗೆ ಜಿಲ್ಲೆಯ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಸಹಕಾರ ನೀಡಬೇಕು. ಬೆಳಿಗೆ 7 ಗಂಟೆಯಿಂದ ರಾತ್ರಿ 9 ರ ವರೆಗೆ ಎಲ್ಲರೂ ಮನೆಯಲ್ಲಿದ್ದು ಈ ವೈರಾಣು ವಿರುದ್ಧದ ಜನಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ಆಡಳಿತದ ಇತರ ವಿಷಯಗಳನ್ನು ತಾತ್ಕಾಲಿಕವಾಗಿ ಬದಿಗಿಟ್ಟು ವೈರಾಣು ನಿರ್ಮೂಲನೆಗೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ಸಂಜೆ ಕೋರನಾ ವೈರಸ್ ಹರಡದಂತೆ ಕೈಗೊಂಡ ಕ್ರಮಗಳು, ಚಿಕಿತ್ಸೆ ಸಿದ್ದತೆ, ಆರೋಗ್ಯ ಸುರಕ್ಷತಾ ಕ್ರಮಗಳು, ಜನಜಾಗೃತಿ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈಲು, ವಿಮಾನ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ರಿನಿಂಗ್ ಕಾರ್ಯ ಬಿಗಿಯಾಗಬೇಕು. ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿದೆ ಆದರೂ ಸುಳ್ಳು ವಂದತಿಗಳ ನಿಯಂತ್ರಣಕ್ಕೆ ಪ್ರಯತ್ನಗಳಾಗಬೇಕು. ಇದು ಇಡೀ ಮನುಕುಲಕ್ಕೆ ಪರೀಕ್ಷೆ ಕಾಲವಾಗಿದ್ದು, ಜನತೆ ಧೃತಿಗೆಡದಂತೆ ಪರಿಸ್ಥಿತಿ ಎದುರಿಸಬೇಕು. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಹಾಗೂ ಮಾಧ್ಯಮಗಳ ಮೇಲೆ ಹೆಚ್ಚು ಜವಾಬ್ದಾರಿ ಇದೆ. ವೈರಾಣು ವಿರುದ್ಧ ಹೋರಾಟದಲ್ಲಿ ಸಾರ್ವಜನಿಕರ ಆರೋಗ್ಯದ ರಕ್ಷಣೆಗಾಗಿ ಶಕ್ತಿಮೀರಿ ಸರ್ಕಾರದ ಅಧಿಕಾರಿಗಳು ಪ್ರಯತ್ನಿಸಬೇಕು. ಚೀನಾ, ಇಟಲಿ ಹಾಗೂ ಇತರ ರಾಷ್ಟ್ರಗಳಲ್ಲಿ ತಲೆದೋರಿರುವ ಘೋರತೆಯನ್ನು ಅರಿತುಕೊಳ್ಳಬೇಕು. ಜನತೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು.

ವ್ಯಾಪಾರಿಗಳು ಗ್ರಾಹಕರ ಹಿತ ಕಾಪಾಡಬೇಕು : ಈ ಪರಿಸ್ಥಿತಿಯಲ್ಲಿ ಮೆಡಿಕಲ್ ಶಾಪ್‍ಗಳ ವ್ಯಾಪಾರಸ್ಥರು ಮತ್ತು ಫಾರ್ಮಸಿ ಕಂಪನಿಗಳು ಗ್ರಾಹಕರಿಗೆ ಅವರ ಬೇಡಿಕೆಗೆ ಅನುಸಾರವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಪೂರೈಸಬೇಕು. ಹೆಚ್ಚಿನ ಲಾಭದ ದೃಷ್ಟಿ ಹೊಂದದೆ ನ್ಯಾಯಯುತ ವ್ಯಾಪಾರ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ವಿಮಾನ ನಿಲ್ದಾಣಗಳಲ್ಲಿ ಆಗಮಿಸುತ್ತಿರುವ ಪ್ರಯಾಣಿಕರ ಮಾಹಿತಿ ಸಮರ್ಪಕವಾಗಿ ಲಭ್ಯವಾಗುತ್ತಿರುವ ಬಗ್ಗೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಬೇಕು. ವಿದೇಶಗಳಿಂದ ಬಂದ ಯಾವುದೇ ಪ್ರಯಾಣಿಕರು ತಪಾಸಣೆಗೊಳಪಡದೇ ಹೊರಗುಳಿಯಬಾರದು. ಸ್ವಯಂ ಪ್ರೇರಿತರಾಗಿ ತಪಾಸಣೆಗೆ ಬರಬೇಕು ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನೈರ್ಮಲ್ಯ ನಿರ್ವಹಣೆಗೆ ಮಹಾನಗರ ಪಾಲಿಕೆ ಹೆಚ್ಚು ಆದ್ಯತೆ ನೀಡಬೇಕು. ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಕಡ್ಡಾಯವಾಗಿ ಸಾಮಾಗ್ರಿಗಳನ್ನು ಪೂರೈಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಧಾರವಾಡ ಶಿಕ್ಷಣ ಕೇಂದ್ರವಾಗಿದ್ದು, ಇಲ್ಲಿನ ಮೂರು ವಿಶ್ವವಿದ್ಯಾಲಯಗಳು, ಐಐಟಿ, ಐಐಐಟಿ ಮೊದಲಾದ ಪ್ರತಿಷ್ಠಿತ ಸಂಸ್ಥೆಗಳಿಗೆ ದೇಶದ ಹಾಗೂ ವಿದೇಶಗಳ ನಾನಾ ಕಡೆಗಳಿಂದ ವಿಷಯ ತಜ್ಞರು ಪಿಹೆಚ್‍ಡಿ ಯ ಮೌಖಿಕ ಪರೀಕ್ಷೆ ಮತ್ತು ವಿಶೇಷ ಉಪನ್ಯಾಸಗಳಿಗಾಗಿ ಆಗಮಿಸಿರುತ್ತಾರೆ. ಅವರ ಮಾಹಿತಿ ಪಡೆಯುವ ಮತ್ತು ನಿಗಾ ಇಡುವ ಕಾರ್ಯ ಆಗಬೇಕು ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಜಿಲ್ಲಾಯಲ್ಲಿ ಕೋರನಾ ವೈರಸ್ ಹರಡದಂತೆ ಕೈಗೊಂಡ ಕ್ರಮಗಳ ಕುರಿತು ಮತ್ತು ಜಿಲ್ಲೆಯಲ್ಲಿ ನಿಗಾ ಇರಿಸಲ್ಪಟ್ಟಿರುವ ಸೋಂಕು ಶಂಕಿತರ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಪಿಪಿಟಿ ಮೂಲಕ ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ವಿಜಯಲಕ್ಷ್ಮಿ ಪಾಟೀಲ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಪ್ರಸಾದ ಅಬ್ಬಯ್ಯ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಪ್ರದೀಪ ಶೆಟ್ಟರ್, ಎಸ್.ವಿ. ಸಂಕನೂರ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪೆÇಲೀಸ್ ಆಯುಕ್ತ ಆರ್. ದೀಲಿಪ್, ಎಸ್.ಪಿ. ವರ್ತಿಕಾ ಕಟಿಯಾರ, ಜಿ.ಪಂ. ಸಿಇಓ ಡಾ.ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಡಿಸಿಪಿ ಕೃಷ್ಣಕಾಂತ, ಡಿಹೆಚ್‍ಓ ಡಾ.ಯಶವಂತ ಮದೀನಕರ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ವೈದ್ಯಕೀಯ ಅಧೀಕ್ಷಕ ಡಾ: ಅರುಣಕುಮಾರ, ಜಿಲ್ಲಾ ಸರ್ಜನ ಡಾ. ಶಿವಕುಮಾರ ಮಾನಕರ ಸೇರಿದಂತೆ ಜಿಲ್ಲಾ ಆರೋಗ್ಯ ಸುರಕ್ಷತಾ ಸಮಿತಿ ಸದಸ್ಯರು, ತಾಲೂಕಾ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...