ಭಟ್ಕಳ: ಕೋವಿಡ್-19 ಪಾಸಿಟಿವ್; ಇಬ್ಬರು ಸಾವು

Source: sonews | By Staff Correspondent | Published on 15th July 2020, 10:26 PM | Coastal News | Don't Miss |

ಭಟ್ಕಳ: ಕೊರೊನಾ ತಾಲೂಕಿನಲ್ಲಿ ಸುದ್ದಿ ಮಾಡುತ್ತಲೇ ಇದ್ದು ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ಬರುವ ಮೂಲಕ ಜನತೆ ಸ್ವಲ್ಪ ನಿಟ್ಟುಸಿರು ಬಿಟ್ಟರೆ ಇಬ್ಬರು ಮೃತರಾಗುವ ಮೂಲಕ ಆತಂಕ ಹೆಚ್ಚಿಸಿದೆ. 

ಸೋಮವಾರ ರಾತ್ರಿ ಇಲ್ಲಿನ ಸುಲ್ತಾನ್ ಸ್ಟ್ರೀಟ್‍ನಲ್ಲಿ 61 ವರ್ಷದ ಮಹಿಳೆಯೋರ್ವರು ಉಸಿರಾಟದ ತೊಂದರೆಯಿಂದ ಮೃತ ಪಟ್ಟಿದ್ದು ವಿಷಯ ತಿಳಿದ ತಾಲೂಕಾ ಆಡಳಿತ ಗಂಟಲು ದ್ರವ ಸಂಗ್ರಹಿಸಿ ಕಾರವಾರಕ್ಕೆ ಪರೀಕ್ಷೆಗಾಗಿ ಕಳುಹಿಸಿದ್ದು ವರದಿ ಪಾಸಿಟಿವ್ ಬಂದಿದೆ ಎನ್ನಲಾಗಿದೆ.  

ಮಂಗಳವಾರ ರಾತ್ರಿ ಇಲ್ಲಿನ ತೆಂಗಿನಗುಂಡಿ ಹೆಬಳೆಯ ವ್ಯಕ್ತಿ ತಾಲೂಕಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ದಾಖಲಾಗಿದ್ದ ಮೃತರಾಗುವ ಮೂಲಕ ಆತಂಕಕ್ಕೆ ಕಾರಣವಾಗಿದೆ.

ತೆಂಗಿನಗುಂಡಿ ಹೆಬಳೆಯ 45 ವರ್ಷದ ವ್ಯಕ್ತಿ ಸಾಕಷ್ಟು ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ನಿನ್ನೆ ಕೂಡ ಚಿಕಿತ್ಸೆಗೆ ಬಂದು ದಾಖಲಾಗಿದ್ದರು. ಆದರೆ, ಆರೋಗ್ಯ ತೀರಾ ಹದಗೆಟ್ಟು ತಡರಾತ್ರಿ ಸಾವನ್ನಪ್ಪಿದ್ದರು.

ನಿನ್ನೆಯೇ ಮೃತ ವ್ಯಕ್ತಿಯ ಗಂಟಲಲು ದ್ರವವನ್ನು ತೆಗೆದು ಪರೀಕ್ಷೆಗೆ ಕಳುಹಿಸಲಾಗಿದ್ದು, ಇಂದು ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ಮೃತನ ಕುಟುಂಬಸ್ಥರ, ಸಂಪರ್ಕಿತರ ಮಾಹಿತಿಯನ್ನು ತಾಲೂಕಾಡಳಿತ ಕಲೆ ಹಾಕುತ್ತಿದ್ದು, ಎಲ್ಲರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಿದೆ.

ಒಟ್ಟಾರೆ ಕೋವಿಡ್-19ಕ್ಕೆ ಭಟ್ಕಳದಲ್ಲಿ ಮೂವರು ಬಲಿಯಾದಂತಾಗಿದ್ದು ಜನರಲ್ಲಿ ಆತಂಕ ಮೂಡಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...