ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ: ಇಂದು 12 ಬಲಿ, 210 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 7944ಕ್ಕೆ ಏರಿಕೆ

Source: UNI | Published on 18th June 2020, 8:26 PM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 12 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 114ಕ್ಕೇರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 210 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 7944ಕ್ಕೇರಿಕೆಯಾಗಿದೆ.
ಕಳೆದೊಂದು ದಿನದಲ್ಲಿ 179 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 4983 ಮಂದಿ ಚೇತರಿಕೆ ಕಂಡಿದ್ದಾರೆ. ಸದ್ಯ 2843 ಸಕ್ರಿಯ ಪ್ರಕರಣಗಳಿದ್ದು, 73 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 


ಬಳ್ಳಾರಿಯಲ್ಲಿ 48, ಕಲಬುರಗಿಯಲ್ಲಿ 48, ದಕ್ಷಿಣ ಕನ್ನಡದಲ್ಲಿ 23, ರಾಮನಗರದಲ್ಲಿ 21, ಬೆಂಗಳೂರು ನಗರದಲ್ಲಿ 17, ಯಾದಗಿರಿಯಲ್ಲಿ 8, ಮಂಡ್ಯದಲ್ಲಿ 7, ಬೀದರ್ ನಲ್ಲಿ 6, ಗದಗದಲ್ಲಿ 5, ರಾಯಚೂರು, ಹಾಸನ, ಧಾರವಾಡದಲ್ಲಿ ತಲಾ 4, ದಾವಣಗೆರೆ, ಚಿಕ್ಕಮಗಳೂರಿನಲ್ಲಿ 3, ವಿಜಯಪುರ, ಉತ್ತರ ಕನ್ನಡ , ಮೈಸೂರಿನಲ್ಲಿ ತಲಾ 2, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗದಲ್ಲಿ ತಲಾ1 ಪ್ರಕರಣಗಳು ವರದಿಯಾಗಿವೆ. 
ಬೆಂಗಳೂರು ನಗರದ 57, 58, 39, 68, 31 ವರ್ಷದ ವ್ಯಕ್ತಿ, 40 ವರ್ಷದ ಮಹಿಳೆ, ಕೊಪ್ಪಳದಲ್ಲಿ 50 ವರ್ಷದ ಮಹಿಳೆ, ಬೆಂಗಳೂರು ನಗರದ 74,65 ವರ್ಷದ ಮಹಿಳೆ, ಬೀದರ್ ನಲ್ಲಿ 55 ವರ್ಷದ ವ್ಯಕ್ತಿ, ವಿಜಯಪುರದಲ್ಲಿ 66 ವರ್ಷದ ಮಹಿಳೆ, ಕಲಬುರಗಿಯಲ್ಲಿ 50 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...