ಕಚೇರಿ ಸಿಬ್ಬಂದಿಗೆ ಕೊರೋನಾ ಹಿನ್ನೆಲೆ ಕ್ವಾರಂಟೈನ್: ನಾನು ಆರೋಗ್ಯವಾಗಿದ್ದೇನೆ, ಚಿಂತೆ ಬೇಡ ಎಂದ ಸಿಎಂ ಯಡಿಯೂರಪ್ಪ

Source: ANI | Published on 11th July 2020, 11:59 PM | State News | Don't Miss |

ಬೆಂಗಳೂರು: ಕೃಷ್ಣಾ ಕಚೇರಿಯ ಕೆಲ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 
ತಮ್ಮ ಆರೋಗ್ಯ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಚೇರಿಯ ಸಿಬ್ಬಂದಿಗಳಲ್ಲಿ ಕೊರೋನಾ ಪತ್ತೆಯಾಗಿದೆ. ಹೀಗಾಗಿ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆಂದು ಹೇಳಿದ್ದಾರೆ. 
ನಾನು ಆರೋಗ್ಯವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊರೋನಾ ನಿಯಂತ್ರಣಕ್ಕೆ ಸಹಕಾರ ನೀಡಿ ಎಂದು ರಾಜ್ಯದ ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...