ಕೊರೋನಾ ಹೆಚ್ಚುತ್ತಿರುವ ಹಿನ್ನಲೆ. ದೇವಾಲಯಗಳಲ್ಲಿ ಸೇವಾ ಕಾರ್ಯಕ್ಕೆ ಅವಕಾಶವಿಲ್ಲ : ಜಿಲ್ಲಾಧಿಕಾರಿ

Source: SO News | By Laxmi Tanaya | Published on 5th August 2021, 8:00 AM | Coastal News |

ಕಾರವಾರ :  ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಗೂಗಲ್ ಮೀಟ್ ಮೂಲಕ ಮಾದ್ಯಮಗಳಿಗೆ ಹೇಳಿಕೆ ನೀಡಿದ ಅವರು,ಈ ಸಂಬಂಧ ಮಾರ್ಗಸೂಚಿ ಹೊರಡಿಸಿದ್ದಾರೆ.
 
ದೇವಸ್ಥಾನ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ. ದೇವಸ್ಥಾನ /ಧಾರ್ಮಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯು ಕಡ್ಡಾಯವಾಗಿದ್ದು ಅದರ ನಿರ್ವಹಣೆಯು ಆಯಾ ಅಡಳಿತ ಮಂಡಳಿಗಳ ಜವಾಬ್ದಾರಿಯಾಗಿರುತ್ತದೆ. ದೇವಸ್ಥಾನ ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಭಾರಿ ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಬೇಕು.

ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶ ನೀಡಿದೆ. ಮದುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಯಾ ತಾಲೂಕಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಆಯಾ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಒ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳತಕ್ಕದ್ದು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೋಬೈಲ್ ಸಂಖ್ಯೆಯೊಂದಿಗೆ ಸಂಗ್ರಹಿಸುವುದು. ಮದುವ ಕಾರ್ಯಕ್ರಮಕ್ಕೆ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದರಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸತಕ್ಕದ್ದು.

 ಜಿಲ್ಲೆಯ ಗಡಿಭಾಗಗಳಲ್ಲಿ, ರೈಲ್ವೆ ಸ್ಟೇಷನ್ ಗಳಲ್ಲಿ ಹೊರರಾಜ್ಯದಿಂದ ಬರುವಂತಹ ಜನರ ಮೇಲೆ ಹೆಚ್ಚು ನಿಗಾವಹಿಸುವುದು ಹಾಗೂ ರಜಿಸ್ಟರ್ ಗಳನ್ನು ನಿರ್ವಹಿಸುವುದು. ಮತ್ತು ಮಹಾರಾಷ್ಟ್ರ ರಾಜ್ಯದಿಂದ ಬರುವಂತಹ ಜನರು ವಿಶೇಷವಾಗಿ ಕೇರಳ ಪಡೆದಿದ್ದರೂ /ಪಡೆಯದಿದ್ದರೂ 72 ಗಂಟೆಯೊಳಗೆ ಮಾಡಿಸಿರುವ RTPCR ಪರೀಕ್ಷೆಯ ನೆಗಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

 ಜಿಲ್ಲೆಯ ಪ್ರವಾಸಿ ತಾಣಗಳು ಬೀಚ್ ಗಳಲ್ಲಿ ಕೋಡ್ ಮಾರ್ಗಸೂಚಿಯ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಪ್ರವಾಸಿ ತಾಣಕ್ಕೆ 02 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಪೊಲೀಸ್ ಅಧೀಕ್ಷಕರು, ಉ.ಕ. ಕಾರವಾರ ರವರು ಕ್ರಮ ಕೈಗೊಳ್ಳುವುದು. ಪ್ರವಾಸಿ ತಾಣಗಳಲ್ಲಿ ಕೋವಿಡ್: ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆಯು ಆಯಾ ಪೊಲೀಸ್ ವೃತ್ತ ನಿರೀಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ಕೋವಿಡ್
ಸಮುಚಿತ ವರ್ತನ (ಮಾಸ್ಕ್. ಧರಿಸುವುದು ಹಾಗೂ ಸಾಮಾಜಿಕ ಅಂತರ) ಯನ್ನು ಪಾಲಿಸುವುದರೊಂದಿಗೆ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸಹಕರಿಸುವುದು. ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಲು ತಿಳಿಸಿದೆ. ಈ ಮೇಲಿನ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ವಿಭಾಗ 51
ರಿಂದ 60 ರನ್ವಯ, ಭಾರತೀಯ ದಂಡ ಸಂಹಿತ ಸಕ್ತನ್ 188 ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020 ರ ವಿಭಾಗ 4 5 ಮತ್ತು 10 ರಂತೆ ಕ್ರಮಗಳನ್ನು ಜರುಗಿಸಲಾಗುವುದು.

ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೋಲಿಸ್ ಅಧೀಕ್ಷಕರು  ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...