ಕಾರವಾರ: ಕೊರೊನಾ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ ಮಾಡಲು ಜಿಲ್ಲಾಡಳಿತ ನಿರ್ಧಾರ

Source: S.O. News Service | By I.G. Bhatkali | Published on 28th March 2020, 7:22 PM | Coastal News | State News | Don't Miss |

ಕಾರವಾರ: ಕೊರೊನಾ ವೈರಸ್ ಹರಡುವಿಕೆ ತಡೆ ನಿಟ್ಟಿನಲ್ಲಿ  ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ  ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. 

ಈ ಸಂದರ್ಭದಲ್ಲಿ ಪ್ರತಿ ಮನೆಯಲ್ಲಿ ಜ್ವರದಿಂದ  ಬಳಲುತ್ತಿರುವವರು ಮತ್ತು ಇತರೆ ಅನಾರೋಗ್ಯಕ್ಕೆ ಒಳಗಾಗಿರುವವರು, ಸಧ್ಯದಲ್ಲಿ ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿಯನ್ನು ಕಲೆಹಾಕಲಾಗುತ್ತದೆ. 

ಈ ಕ್ರಮದಿಂದ ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯ ಪ್ರಮಾಣವನ್ನುವ ನಿಖರವಾಗಿ ಅರಿಯಲು   ಸಾಧ್ಯವಾಗುತ್ತದೆ. 

ಜ್ವರದಿಂದ ಬಳಲುತ್ತಿರುವವರಿಗೆ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.  ವಿದೇಶದಿಂದ ,ಹೊರ ರಾಜ್ಯದಿಂದ ಮತ್ತು ಹೊರ ಜಿಲ್ಲೆಯಿಂದ ಬಂದವರನ್ನು  ಸಹ ಪ್ರತಿ ದಿನ ಸ್ಕ್ರೀನಿಂಗ್  ಗೆ ಒಳಪಡಿಸಲಾಗುತ್ತದೆ. ಈ ಸರ್ವೆ ಕಾರ್ಯಕ್ಕೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಯನ್ನು  ಯೋಜಿಸಲಾಗುತ್ತದೆ ಎಂದು ಡಿಸಿ ಡಾ. ಹರೀಶಕುಮಾರ ಕೆ. ತಿಳಿಸಿದ್ದಾರೆ.

Read These Next

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೀರ್ಘವೇ ಆರಂಭ-ಶಿಕ್ಷಣ ಸಚಿವ ಸುರೇಶ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಪಾಲಕ ಪೋಷಕರಿಂದ ತೀವ್ರ ಪ್ರತಿರೋಧದ ನಡುವೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶೀಘ್ರವೇ ...

ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ 

ಕೋಲಾರ ; ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಈ ಅಧಿಕಾರಿಗಳು ಕ್ಷೇತ್ರ ...

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೀರ್ಘವೇ ಆರಂಭ-ಶಿಕ್ಷಣ ಸಚಿವ ಸುರೇಶ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಪಾಲಕ ಪೋಷಕರಿಂದ ತೀವ್ರ ಪ್ರತಿರೋಧದ ನಡುವೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶೀಘ್ರವೇ ...