ಭಾರತದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆ, 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

Source: PTI | Published on 8th July 2020, 12:02 AM | National News | Don't Miss |

 

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 
ಕಳೆದ 24 ಗಂಟೆಗಳಲ್ಲಿ 467 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ. 
ನಿನ್ನೆ ಒಂದೇ ದಿನ ಬರೋಬ್ಬರಿ 22,252 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ 7,19,665ಕ್ಕೆ ತಲುಪಿದೆ.
ಈ ನಡುವೆ 7,19,665 ಮಂದಿ ಸೋಂಕಿತರ ಪೈಕಿ 4,39,948 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 2,59,557 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 
ಆತಂಕಕಾರಿ ಸಂಗತಿಯೆಂದರೆ, ಸೋಂಕಿನ ಪ್ರಮಾಣ ಕೇವಲ 4 ದಿನಗಳಲ್ಲಿ 6 ಲಕ್ಷದಿಂದ 7 ಲಕ್ಷಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಅತೀ ಹೆಚ್ಚು ಬಾಧಿತವಾದ ದೇಶಗಳ ಪೈಕಿ ಅಮೆರಿಕಾ ಮತ್ತು ಬ್ರೆಜಿಲ್ ಬಳಿಕ ಭಾರತ ಮೂರನೇ ಸ್ಥಾನದಲ್ಲಿದೆ. ಆರಂಭಿಕ ಹಂತದಲ್ಲಿ ಕಟ್ಟುನಿಟ್ಟಿನ ಲಾಕ್'ಡೌನ್ ಹೇರಿಕೆ ಮಾಡಿದ್ದರಿಂದ ಕೊರೋನಾ ಪ್ರಕರಣಗಳು 1 ಲಕ್ಷದ ಗಡಿಗೆ ತಲುಪಲು 110 ದಿನಗಳು ಬೇಕಾಗಿದ್ದವು. ಬಳಿಕ 48 ದಿನಗಳ ಅಂತರದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. 
ಕೊರೋನಾಗೆ ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರಶಃ ನಲುಗಿ ಹೋಗಿದ್ದು, ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ದೆಹಲಿಯಲ್ಲಿ ಹೊಸದಾಗಿ 1,379 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 100823ಕ್ಕೆ ಏರಿಕೆಯಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಸೋಂಕಿತರು 211987ಕ್ಕೆ ಏರಿಕೆಯಾಗಿದೆ. 
ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ 20 ಸಾವಿರ ಗಡಿ ದಾಟುವುದರೊಂದಿಗೆ ಭಾರತ ಸಾವಿನ ಸಂಖ್ಯೆಯಲ್ಲಿ 8ನೇ ಸ್ಥಾನಕ್ಕೆ ಏರಿಕೆಯಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...