ಹೊರ ರಾಜ್ಯಗಳಿಂದ ಬಂದವರಿಂದಲೇ ಕೊರೊನಾ ಸೋಂಕು ಹೆಚ್ಚಳ : ಹೋಂ ಕ್ವಾರಂಟೈನ್ ನಿಗಾ ಬಿಗಿಗೊಳಿಸಿ - ಸಚಿವ ಜಗದೀಶ ಶೆಟ್ಟರ್

Source: S.O. News Service | By MV Bhatkal | Published on 18th June 2020, 7:31 PM | State News | Don't Miss |

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೊರಗಿನಿಂದ ಬಂದವರಿಂದಲೇ ಈ ಸೋಂಕು ಹರಡುತ್ತಿದೆ. ಇದನ್ನು ನಿಯಂತ್ರಿಸಲು ಹೋಂ ಕ್ವಾರಂಟೈನ ಬಿಗಿಗೊಳಿಸಲು ಸೂಚಿಸಲಾಗಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಪ್ರತಿವಾರಕ್ಕೊಮ್ಮೆ ಸಭೆ ನಡೆಸುತ್ತಿದ್ದೇನೆ. ಕಿಮ್ಸ್‍ಗೂ ಕೂಡ ಭೇಟಿ ನೀಡಿದ್ದೇನೆ. ಅಲ್ಲಿ ಮತ್ತೊಂದು ಲ್ಯಾಬ್ ಘಟಕ ಉದ್ಘಾಟನೆ ಮಾಡಲಾಗಿದೆ. ಮೊದಲಿನಂತೆ ಈಗ ತಪಾಸಣಾ ವರದಿಗಳು ಬರುವುದು ತಡವಾಗುತ್ತಿಲ್ಲ. ಧಾರವಾಡ ಜಿಲ್ಲೆ ಅತೀ ಹೆಚ್ಚು ಜನರನ್ನು ಪರೀಕ್ಷೆಗೊಳಪಡಿಸಿದ ಜಿಲ್ಲೆಗಳ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ ಎಂದರು.
ಪಾಸಿಟಿವ್ ಕೇಸ್ ಬಂದ ಏರಿಯಾಗಳಲ್ಲμÉ್ಟೀ ಲಾಕ್‍ಡೌನ್ ಮಾಡಲಾಗುತ್ತಿದೆ.  ಜನ ಹೆದರುವ ಅಗತ್ಯವಿಲ್ಲ. ಆದರೆ, ಜಾಗೃತವಾಗಿರಬೇಕು. ನಾಳೆ ಹುಬ್ಬಳ್ಳಿಯಲ್ಲಿ ಮಾಸ್ಕ್ ಡೇ ಆಚರಣೆ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿ ಪಾದಯಾತ್ರೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗಲಿದೆ. ಲ್ಯಾಂಡ್‍ಸೀಲಿಂಗ್ ಕಾಯ್ದೆ ಪ್ರಕಾರ ಒಂದು ಕುಟುಂಬಕ್ಕೆ 108 ಎಕರೆ ಭೂಮಿ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಈ ಮಿತಿಯು 58 ಎಕರೆ ಜಮೀನಿಗೆ ಸೀಮಿತವಾಗಿತ್ತು. ಇದರಿಂದ ಕೃಷಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಬಹುದಾಗಿದೆ. ಕೈಗಾರಿಕೆಗಳ ಸ್ಥಾಪನೆ ಉದ್ದೇಶಕ್ಕೆ ಪಡೆದು ಬಳಕೆಯಾಗದ ಜಮೀನುಗಳು ಮರಳಿ ಪಡೆಯಲಾಗುವುದು ಎಂದು ಸಚಿವರು ತಿಳಿಸಿದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...