ಕೊರೊನಾ ವೈರಸ್ ಸೋಂಕು ಹಿನ್ನೆಲೆ- 144(3) ಸೆಕ್ಷನ್ ಜಾರಿ- ಜಿಲ್ಲಾಧಿಕಾರಿ ಜಿ.ಜಗದೀಶ್

Source: so news | Published on 19th March 2020, 12:05 AM | Coastal News | Don't Miss |


ಉಡುಪಿ: ಕೋವಿಡ್-19 (ಕೊರೋನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ಸಂತೆ/ ಜಾತ್ರೆ/ ಉತ್ಸವ/ ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವ ಕಾರಣದಿಂದ ಸರ್ಕಾರದ ಆದೇಶದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಸೆಕ್ಷನ್ 144 (3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮಾರ್ಚ್ 18 ರಿಂದ ಮುಂದಿನ ಆದೇಶದವರೆಗೆ ಈ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಉತ್ಸವ/ ಜಾತ್ರೆಗಳಲ್ಲಿ ಕೇವಲ ಧಾರ್ಮಿಕ ಕೇಂದ್ರಗಳ ಸಿಬ್ಬಂದಿ ಮಾತ್ರ ಭಾಗವಹಿಸಬೇಕು, ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನಗಳಲ್ಲಿ ಕೇವಲ ದೇವರ ದರ್ಶನವನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ. ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದು, ಬೇಸಿಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕೀರ್ಣಗಳು, ಕ್ರೀಡಾಕೂಟಗಳು, ಮತ್ತಿತರ ಯಾವುದೇ ಒಂದೆಡೆ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ವಾರದ ಸಂತೆಯನ್ನು ನಿರ್ಬಂಧಿಸಲಾಗಿದೆ. ಬೀಚ್/ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ / ನಿಶ್ಚಿತಾರ್ಥ ಸಮಾರಂಭಗಲ್ಲಿ ಹಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಬೇಕು. ಹೆಚ್ಚು ಜನ ಸೇರುವಂತಹ ಕುಟುಂಬದ ಧಾರ್ಮಿಕ ಕಾರ್ಯಕ್ರಮಗಳನ್ನು ತಮ್ಮ ಸ್ವಂತ ಸ್ಥಳಗಳಲ್ಲಿ ಸರಳವಾಗಿ ಆಚರಿಸಬೇಕು. ಅನಗತ್ಯವಾಗಿ ಹೊರಗಿನವರು ಸೇರದಂತೆ ಎಚ್ಚರಿಕೆ ವಹಿಸಬೇಕು.
ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳು: ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ವಾಸಿಸುವ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣ ಸಂಸ್ಥೆಗಳು ಕೋವಿಡ್-19 ರ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಾಸು ಹೋಗಲು ಸಲಹೆ ನೀಡಬೇಕು. ಒಂದು ವೇಳೆ ಯಾರಾದರೂ ಪಿ.ಜಿ ಮತ್ತು ವಸತಿ ನಿಲಯಗಳಲ್ಲಿ ಉಳಿದುಕೊಳ್ಳಲು ಬಯಸಿದ್ದಲ್ಲಿ ಅಂತಹವರಿಗೆ ಪಿಜಿ ಹಾಗೂ ವಸತಿ ನಿಲಯಗಳ ಮಾಲಿಕರು/ ವ್ಯವಸ್ಥಾಪಕರು ಕರ್ನಾಟಕ ಸರಕಾರವು ನೀಡಿರುವ ಸಲಹೆಗಳಂತೆ ವೈಯಕ್ತಿಕ ಸ್ಚಚ್ಛತೆಗಳ ಬಗ್ಗೆ ಮನವರಿಕೆ ಮಾಡಿಕೊಂಡು ಪಾಲಿಸಬೇಕು. ನಿಯತಕಾಲಿಕವಾಗಿ ಪಿ.ಜಿ ವಸತಿ ನಿಲಯಗಳಲ್ಲಿ ನೈರ್ಮಲ್ಯತೆ ಹಾಗೂ ಸ್ವಚ್ಛತೆಯನ್ನು ಕಾಪಾಡುವುದು ಪಿ.ಜಿ, ವಸತಿ ನಿಲಯಗಳ ಮಾಲಿಕರ/ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ. ಪಿ.ಜಿ, ವಸತಿ ನಿಲಯಗಳಲ್ಲಿ ವಾಸಿಸುವವರಿಗೆ ಅನಾನುಕೂಲವಾಗದಂತೆ ಹಾಗೂ ಯಾವುದೇ ಸೋಂಕು ಹರಡದಂತೆ ಕೋಣೆಗಳಲ್ಲಿ ಜನದಟ್ಟಣೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಪಿ.ಜಿ/ ವಸತಿ ನಿಲಯಗಳ ಆವರಣಗಳಲ್ಲಿ ನೈರ್ಮಲ್ಯತೆ ಹಾಗೂ ಸ್ವಚ್ಛತೆಯನ್ನು ಕಾಪಾಡಲು ನೀಡಲಾದ ನಿವೇಶನಗಳನ್ನು ಅನುಸರಿಸದೇ ಕೋವಿಡ್-19 ಹರಡಲು ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು. ಪಿ.ಜಿ ಮತ್ತು ವಸತಿ ನಿಲಯದ ಮೇಲ್ವಿಚಾರಕರು/ ಮಾಲಕರು ತಾವು ಈ ನಿಟ್ಟಿನಲ್ಲಿ ಕೈಗೊಂಡ ಕ್ರಮದ ವರದಿಯನ್ನು ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ (ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್/ ಗ್ರಾಮ ಪಂಚಾಯತ್) ಮುಖ್ಯಸ್ಥರಿಗೆ ಪ್ರತಿ ಎರಡು ದಿನಕ್ಕೊಮ್ಮೆ ಕಡ್ಡಾಯವಾಗಿ ಒಪ್ಪಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...