ಕೊರೋನಾ ವೈರಸ್– ಮಾರ್ಗಸೂಚಿ ಪಾಲನೆ ಕಡ್ಡಾಯ -ಜಿಲ್ಲಾಧಿಕಾರಿ ಆದೇಶ

Source: SO News | By Laxmi Tanaya | Published on 24th September 2020, 8:49 AM | Coastal News | Don't Miss | State News |

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂಜಾಗೃತಾ ಕ್ರಮಗಳು ಹಾಗೂ ಶರತ್ತುಗಳನ್ನು ವಿಧಿಸುವುದು ಅಗತ್ಯವಾಗಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ 200 ರ ಕಲಂ 21(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, ರೆಸ್ಟೋರೆಂಟ್‍ಗಳು ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳು ಜನಸಂದಣಿ ಸೇರುವ ಪ್ರದೇಶಗಳಲ್ಲಿ ಎಲ್ಲಾ ಅಂಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.‌
ಪತ್ರಿಯೊಬ್ಬ ಅಂಗಡಿ ಮಾಲೀಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಯಮ ಉಲ್ಲಂಘನೆಯಾಗದಂತೆ ಸಾಕಷ್ಟು ಮುಂಜಾಗೃತಾ ಕ್ರಮವಹಿಸಬೇಕು.
ನಗರ ಸ್ಥಳೀಯ ಸಂಸ್ಥೆ ಹಾಗೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರತಿಯೊಬ್ಬ ವರ್ತಕರು ತಮ್ಮಅಂಗಡಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಏಕಕಾಲದಲ್ಲಿ ಸೇರದಂತೆ ಅಂಗಡಿ ಮುಂಗಟ್ಟಿನ ಮುಂಭಾಗದಲ್ಲಿ ಕನಿಷ್ಟ 6x6 ಅಡಿ ಅಂತರವನ್ನು ಗುರುತಿಸಿ ಗ್ರಾಹಕರಲ್ಲಿ ದೈಹಿಕ ಅಂತರ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ತಕರುತಮ್ಮಅಂಗಡಿ ಮುಂಗಟ್ಟಿನಲ್ಲಿ ಮುಂದೆ ಇರುವ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಬಳಸಲ್ಪಡುವ ರಸ್ತೆಯನ್ನು ಹೊರತುಪಡಿಸಿ, ಉಳಿದ ಸ್ಥಳವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಳಸುವುದು.

ಪ್ರತಿ ಅಂಗಡಿ ಮಾಲೀಕರು ತಮ್ಮಅಂಗಡಿ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ವ್ಯವಸ್ಥೆಯನ್ನು ಅಳವಡಿಸುವುದು ಹಾಗೂ ಗ್ರಾಹಕರನ್ನು ಸ್ಯಾನಿಟೈಸರ್ ಬಳಸಲು ಉತ್ತೇಜಿಸುವುದು. ಪ್ರತಿ ಅಂಗಡಿ ಮಾಲೀಕರು ಪ್ರತಿದಿನ ತಮ್ಮತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳ ಆರೋಗ್ಯತಪಾಸಣೆಯನ್ನು ನಡೆಸುವುದು, ಅಲ್ಲದೇ ಪ್ರತಿ ಮೂರು ದಿನಗಳಿಗೊಮ್ಮೆ ತಮ್ಮ ಅಂಗಡಿಗಳನ್ನು ಸ್ಯಾನಿಟೈಸರ್ ಮಾಡಲು ಕ್ರಮ ವಹಿಸಬೇಕು.
ಅಂಗಡಿ ಮಾಲಿಕರು ತಮ್ಮಅಂಗಡಿ ಮುಂಭಾಗದಲ್ಲಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಿ ದಿನನಿತ್ಯ ಗ್ರಾಹಕರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡುವುದು.

ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಹೆಸರು ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ರಿಜಿಸ್ಟರ್ ನಲ್ಲಿ ನಮೂದಿಸುವುದು ಹಾಗೂ ತಮ್ಮ ವ್ಯಾಪ್ತಿಯ ಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ವರದಿ ನೀಡಬೇಕು

ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಕುರಿತು ವರದಿ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಗೆ ಸ್ವೀಕೃತವಾದ ತಕ್ಷಣವೇ ಮಹಾನಗರ‌ ಪಾಲಿಕೆಯಿಂದ / ಜಿಲ್ಲಾಡಳಿತದಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿ ಕೋವಿಡ್ ಲಕ್ಷಣಗಳುಳ್ಳ ವ್ಯಕ್ತಿಯನ್ನು ಕೋವಿಡ್‍ಕೇರ್ ಸೆಂಟರ್‍ ಗೆ ತಪಾಸಣೆಗೆ ಕಳುಹಿಸಬೇಕು.

ಅಂಗಡಿ ಮುಂಗಟ್ಟುಗಳಲ್ಲಿ ಸಾರ್ವಜಿನಿಕರು ಸಾಮಾಜಿಕ ಅಂತರವನ್ನುಕಾಯ್ದುಕೊಂಡಿರುವ ಬಗ್ಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವ ಬಗ್ಗೆ ಸಿಸಿಟಿವಿ ಕ್ಯಾಮರಾವನ್ನು ಅಳವಡಿಸಿ ರೆಕಾರ್ಡಿಂಗ್ ಮಾಡವುದು ಸಂಬಂಧಪಟ್ಟ ವರ್ತಕರ ಜವಾಬ್ದಾರಿಯಾಗಿರುತ್ತದೆ.ಸಿಸಿಟಿವಿ ರೆಕಾರ್ಡಿಂಗ್ ದಾಖಲೆಗಳನ್ನು ಸಂಬಂಧಪಟ್ಟ ಆರೋಗ್ಯಇಲಾಖಾಧಿಕಾರಿಗೆ ಹಾಗೂ ಆಯುಕ್ತರು ಮಂಗಳೂರು ಮಹಾನಗರಪಾಲಿಕೆ/ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ಮೇಲ್ಕಂಡ ಅಧಿಕಾರಿಗಳು ದಾಖಲೆಗಳನ್ನು ನಿಯಮಿತವಾಗಿ ಪರಿಶೀಲಿಸಿ ಸಾಮಾಜಿಕ ಅಂತರವನ್ನು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದು/ ಪರವಾನಗಿರದ್ದು ಪಡಿಸುವಂತೆ ಕ್ರಮ ಕೈಗೊಳಲಾಗುವುದು.
ಯಾವುದೇ ಅಂಗಡಿಗಳಲ್ಲಿ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಕ ಅಂತರವನ್ನು ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆ ರೂ.1000, ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿರೂ.2000 ಮತ್ತುರೂ.3000 ದಂಡವನ್ನು ವಿಧಿಸಿ ಎಚ್ಚರಿಗೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದ್ದಲ್ಲಿ ಅಂಗಡಿಗಳ ಪರವಾನಿಗೆಯನ್ನು ರದ್ದು ಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಟಾನಗೊಳಿಸಬೇಕು.
ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ.ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ರೂ.200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ದಂಡ ವಿಧಿಸಲಾಗುವುದು.

ಪ್ರತಿ ಅಂಗಡಿಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ವಯ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು.ರಸ್ತೆಗಳಲ್ಲಿ ತ್ಯಾಜ್ಯಗಳನ್ನುಎಸೆಯದಂತೆಕ್ರಮವಹಿಸಲಾಗುವುದು, ಉಲ್ಲಂಘಿಸಿದ್ದಲ್ಲಿ ಹಾಗೂ ಮೇಲೆ ತಿಳಿಸಿದ ನಿಯಮಗಳು, ಹಾಗೂ ಘನತ್ಯಾಜ್ಯ ನಿರ್ವಹಣೆ ನಿಯಮಗಳು ಹಾಗೂ ಮಹಾನಗರಪಾಲಿಕೆ ನಿಯಮಗಳಡಿಯಲ್ಲಿ ದಂಡ ಭರಿಸುಬೇಕು.
ಮೀನುಗಳನ್ನು ದೋಣಿ, ಮೀನುಗಾರಿಕೆ ಹಡಗುಗಳಿಂದ ಇಳಿಸುವ ಸಂದರ್ಭಗಳಲ್ಲಿ ಬಂದರು, ಜಟ್ಟಿಗಳಲ್ಲಿ ಮೀನುಗಾರಿಕೆ ವ್ಯಾಪಾರದ ಸಂದರ್ಭಗಳಲ್ಲಿ ಅಲ್ಲಿ ಸೇರುವ ಜನಗಳು ಸಾಮಜಿಕ ಅಂತರವನ್ನು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಉಪನಿರ್ದೇಶಕರು ಮೀನುಗಾರಿಕೆ ಇಲಾಖೆ ದ.ಕ.ಮಂಗಳೂರು ಹಾಗೂ ಬಂದರು ಅಧಿಕಾರಿಯವರುಇದರ ಬಗ್ಗೆ ನಿಗಾವಹಿಸಿ ಸಂಬಂಧಪಟ್ಟವರಿಗೆ ಸೂಕ್ತ ತಿಳುವಳಿಕೆ ನೀಡಿ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುವಂತೆಅಗತ್ಯಕ್ರಮ ಕೈಗೊಳ್ಳಬೇಕು.

   ಮೀನುಗಾರಿಕೆ ವ್ಯಾಪಾರ, ಹಣ್ಣು ಹಂಪಲು, ತರಕಾರಿ ಹಾಗೂ ಇತರೇ ವ್ಯಾಪಾರ ವಹಿವಾಟುಗಳು ನಡೆಸುವ ಸ್ಥಳಗಳಲ್ಲಿ ಆಯುಕ್ತರು, ಮಂಗಳೂರು ಮಹಾನಗರಪಾಲಿಕೆ, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಮ್ಮತಮ್ಮ ವ್ಯಾಪ್ತಿಯಲ್ಲಿಓರ್ವ ನೋಡಲ್‍ಅಧಿಕಾರಿಯನ್ನು ನೇಮಿಸಿ ಪ್ರತಿನಿತ್ಯ ಸರ್ಕಾರಿ ಮಾರ್ಗಸೂಚಿಗಳನ್ನು ಸಾರ್ವಜನಿಕರು, ವರ್ತಕರು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು.
ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರುತಪ್ಪದೇ ಮಾಸ್ಕ್ ಗಳನ್ನು ಬಳಸಬೇಕು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.ಇದನ್ನುಉಲ್ಲಂಘಿಸುವ ಪ್ರಯಾಣಿಕರಿಗೆ ಪ್ರಯಾಣಕ್ಕೆ ಅವಕಾಶ ನೀಡದಂತೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿ, ಕೆ.ಎಸ್.ಆರ್.ಟಿ.ಸಿ, ಮಂಗಳೂರು, ಪುತ್ತೂರುಇವರು ಸೂಕ್ತ ನಿರ್ದೇಶನ ನೀಡಬೇಕು.

ಖಾಸಗಿ ಬಸ್, ಆಟೋ, ಕ್ಯಾಬ್‍ ಇತ್ಯಾದಿ ವಾಹನಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ ಸಂಚರಿಸಬೇಕು.ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ಉಲ್ಲಂಘನೆಯಾದ್ದಲ್ಲಿ ವಾಹನದ ಮಾಲೀಕರಿಗೆ ದಂಡವನ್ನು ವಿಧಿಸಬೇಕು. ಪೊಲೀಸ್ ಇಲಾಖಾ ಅಧಿಕಾರಿಗಳು ಕೂಡಾತಮ್ಮ  ಹಂತದಲ್ಲಿಆಗಿದ್ದಾಂಗೆ ವಾಹನ ತಪಾಸಣೆ ಮಾಡಿ ಸರ್ಕಾರಿ ಮಾರ್ಗಸೂಚಿಗಳನ್ನು ಸಾರ್ವಜನಿಕರುಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.    

      ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ಸಾರ್ವಜನಿಕರು ಹಾಗೂ ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.ಕೃಷಿ ಉತ್ಪನ್ನಗಳನ್ನು ಸಾಗಾಣಿಕೆ, ವಾಹನಗಳಿಂದ ಇಳಿಸುವ ಇತ್ಯಾದಿ ಸಂದರ್ಭಗಳಲ್ಲಿ ಸರ್ಕಾರಿ ಮಾರ್ಗಸೂಚಿಗಳ ಉಲ್ಲಂಘನೆಯಗದಂತೆ ಎ.ಪಿ.ಎಂ.ಸಿ.ಕಾರ್ಯದರ್ಶಿಯವರು ಅಗತ್ಯಕ್ರಮ ಜರುಗಿಸಿ ನಿಗಾವಹಿಸಬೇಕು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಹಾಗೂ ಎಲ್ಲೆಂದರಲ್ಲಿ ಉಗುಳದಂತೆ ಆಯುಕ್ತರು, ಮಂಗಳೂರು ಮಹಾನಗರಪಾಲಿಕೆ, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಜನಜಾಗೃತಿ ಮೂಡಿಸಬೇಕು ಹಾಗೂ ತಮ್ಮ ವ್ಯಾಪ್ತಿಯಲ್ಲಿ ಇದನ್ನು ಉಲ್ಲಂಘಿಸುವ ಸಾರ್ವಜನಿಕರಿಗೆದಂಡವನ್ನು ವಿಧಿಸಿ ಅಗತ್ಯಕ್ರಮ ಜರುಗಿಸಲಾಗುವುದು.

Read These Next

ದೇರಳಕಟ್ಟೆ ಬಳಿ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ. ಘಟನೆ ನಡೆದು ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು.

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ...

ಸುಳ್ಳಿನ ಆಧಾರದಲ್ಲಿ ಅಸ್ತಿತ್ವಕ್ಕೆ ಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ-ಎಚ್.ಕೆ.ಪಾಟೀಲ್

ಭಟ್ಕಳ : ದುಷ್ಟಾಲೋಚನೆಯೊಂದಿಗೆ ಅಧಿಕಾರಿಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ವಿಶ್ವಾಸ ಕಳೆದುಕೊಂಡಿವೆ ಎಂದು ...

ಮನೆಯ ಚಾವಣಿ ಕುಸಿದು ಬಾಲಕ ಮೃತ

ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ...

ಕಾರವಾರ: ಪಶ್ಚಿಮ ಪದವಿಧರ ಕ್ಷೇತ್ರದಲ್ಲಿ ಕುಬೇರಪ್ಪನವರಿಗೆ ಮತ ನೀಡಿ. ಎಚ್ ಕೆ ಪಾಟೀಲ್ ಮತಯಾಚನೆ.

‌ಅಕ್ಟೋಬರ್ 28ರಂದು ನಡೆಯುವ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕಾಂಗ್ರೆಸ್ ಮುಖಂಡ, ...

ಬಿಕಾಂ ಫೈನಲ್ ಪರೀಕ್ಷೆಯಲ್ಲಿ ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜು ಸಾಧನೆ.

ಭಟ್ಕಳ : ಅಂಜುಮನ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಕಾಲೇಜಿನ ಬಿ.ಕಾಂ ಅಂತಿಮ ವಿದ್ಯಾರ್ಥಿಗಳು ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ...

ಯಾವ ವ್ಯಕ್ತಿ ಸೋಲನ್ನು ಜೀರ್ಣಿಸಿಕೊಳ್ಳಲು ಕಲಿಯುತ್ತಾನೋ ಅಂತಹ ವ್ಯಕ್ತಿ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ: ಜಿಲ್ಲಾಧಿಕಾರಿ

ಮಂಡ್ಯ : ಪ್ರತಿಯೊಬ್ಬ ಮನುಷ್ಯನಿಗೆ ಓದು ಮತ್ತು ಕ್ರೀಡೆ ಎರಡು ಇರಬೇಕು. ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ ಭೌತಿಕವಾಗಿ, ...