ಆಸ್ಪತ್ರೆಯ ಐ.ಸಿ.ಯು ನಿಂದ ಕೊರೋನಾ ರೋಗಿ ನಾಪತ್ತೆ!

Source: sonews | By Staff Correspondent | Published on 2nd June 2020, 3:59 PM | National News | Don't Miss |

ಹೊಸದಿಲ್ಲಿ: ಮುಂಬೈಯ ಆಸ್ಪತ್ರೆಯೊಂದರಿಂದ ಕೊರೋನಾ ಸೋಂಕಿತ ರೋಗಿಯೊಬ್ಬ ನಾಪತ್ತೆಯಾಗಿರುವ ಘಟನೆ ತಡವಾಗಿ ವರದಿಯಾಗಿದೆ. 

ಕುಟುಂಬ ಸದಸ್ಯರುಗಳಿಗೆ ಮಾಹಿತಿ ನೀಡದೆ ಕೋವಿಡ್-19 ರೋಗಿಯ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿದ ಪ್ರಕರಣ ವರದಿಯಾದ ಬೆನ್ನಿಗೇ ಮುಂಬೈನ ಸರಕಾರಿ ಆಸ್ಪತ್ರೆಯ ಐಸಿಯುನಲ್ಲಿದ್ದ ಕೋವಿಡ್-19 ರೋಗಿಯೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

67ರ ಹರೆಯದ ರೋಗಿಯನ್ನು ಮುಂಬೈನ ಕೆಇಎಂ ಆಸ್ಪತ್ರೆಗೆ ಮೇ 14ರಂದು ದಾಖಲಿಸಲಾಗಿತ್ತು ಎಂದು ರೋಗಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮಾರಣಾಂತಿಕ ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ, ಮೇ 19ರಿಂದ ರೋಗಿ ನಾಪತ್ತೆಯಾಗಿದ್ದಾರೆ. ರೋಗಿ ಎಲ್ಲಿದ್ದಾರೆಂದು ಯಾರಿಗೂ ಗೊತ್ತಿಲ್ಲ.

"ನಮಗೆ ಮೇ 20ರಂದು ಬೆಳಗ್ಗೆ ಕರೆ ಬಂದಿತ್ತು. ನಾನು ಆ ಕರೆಯನ್ನು ಸ್ವೀಕರಿಸಿರಲಿಲ್ಲ. ನಾನು 10:30ಕ್ಕೆ ಮರಳಿ ಕರೆ ಮಾಡಿದ್ದೆ. ರೋಗಿಯು ಎಲ್ಲಿಯೂ ಕಾಣುತ್ತಿಲ್ಲ. ನೀವು ಸ್ಥಳಾಂತರಗೊಳಿಸಿದ್ದೀರಾ?ಎಂದು ನಮ್ಮನ್ನೇ ಆಸ್ಪತ್ರೆಯವರು ಪ್ರಶ್ನಿಸಿದ್ದಾರೆ. ನನಗೆ ಆ ಕುರಿತು ಏನೂ ಗೊತ್ತಿಲ್ಲ ಎಂದು ಅವರಿಗೆ ತಿಳಿಸಿದ್ದೆ. ನಾನು ಅವರನ್ನು ಅಲ್ಲಿ ಬಿಟ್ಟು ಕ್ವಾರಂಟೈನ್‌ನಲ್ಲಿದ್ದೆ. ಆ ನಂತರ ಅವರು ರೋಗಿಗಾಗಿ ಹುಡುಕಾಟ ನಡೆಸಿದ್ದು, ಹೀಗಿಯೇ ನಾಲ್ಕೈದು ದಿನ ಕಳೆದಿದ್ದಾರೆ. ಅವರು ಎಲ್ಲಿದ್ದಾರೆಂದು ನಮಗೆ ಗೊತ್ತಿಲ್ಲ'' ಎಂದು ನಾಪತ್ತೆಯಾಗಿರುವ ರೋಗಿಯ ಸಂಬಂಧಿಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ರೋಗಿ ನಾಪತ್ತೆಯಾದ ಐದು ದಿನಗಳ ಬಳಿಕ ಮುಂಬೈ ಪೊಲೀಸರು ವ್ಯಕ್ತಿ ನಾಪತ್ತೆಯಾಗಿರುವ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ಮುಂಬೈನ ನಿವಾಸಿ ಕೋವಿಡ್-19ಗೆ ಮೃತಪಟ್ಟ ಬಳಿಕ ಮಹಾನಗರ ಪಾಲಿಕೆ ಅಧಿಕಾರಿಗಳು ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡದೇ ಅಂತ್ಯಕ್ರಿಯೆ ನೆರವೇರಿಸಿದ್ದರು. ಈ ಪ್ರಕರಣದಲ್ಲಿ ಕೂಡ ರೋಗಿಯ ಕುಟುಂಬದವರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಬಳಿಕ ಬಿಎಂಸಿ ಅಧಿಕಾರಿಗಳು ರೋಗಿಯ ಕುಟುಂಬದವರನ್ನು ಪತ್ತೆ ಹಚ್ಚಲು ಕಷ್ಟವಾದ ಕಾರಣ ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದರು.

ಮುಂಬೈನ ವಡಾಲ ನಿವಾಸಿಯಾಗಿರುವ ರಾಕೇಶ್ ವರ್ಮಾ ಮೇ 17ರಂದು ಮೃತಪಟ್ಟಿದ್ದು, ಪೊಲೀಸ್ ಅಧಿಕಾರಿಗಳು ಅವರ ಅಂತ್ಯಕ್ರಿಯೆ ನಡೆಸಿದ್ದರು. ವರ್ಮಾ ಅವರ ಅಂತ್ಯಕ್ರಿಯೆ ನಡೆಸಿದ್ದು ನಮಗೆ ಗೊತ್ತಿರಲಿಲ್ಲ. ಅವರು ಸಾವನ್ನಪ್ಪಿರುವುದೂ ನಮಗೆ ಗೊತ್ತಿರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಕೆಇಎಂ ಆಸ್ಪತ್ರೆಯಲ್ಲಿ ನಾಪತ್ತೆಯಾಗಿರುವ ರೋಗಿಗಳ ಪ್ರಕರಣದಲ್ಲಿ ಪೊಲೀಸರು ಇನ್ನಷ್ಟೇ ವ್ಯಕ್ತಿಯನ್ನು ಪತ್ತೆ ಹಚ್ಚಬೇಕಾಗಿದೆ. 67ರ ಹರೆಯದ ಕೋವಿಡ್-19 ರೋಗಿಯು ಯಾರಿಗೂ ಗೊತ್ತಾಗದೆ ಆಸ್ಪತ್ರೆಯ ವಾರ್ಡ್‌ನಿಂದ ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...