ರಾಜ್ಯದಲ್ಲಿ ಏರುತ್ತಲೆ ಇರುವ ಕೊರೋನಾ ಸೋಂಕು; ಸಾವಿರ ಗಡಿದ ಸೋಂಕಿತ ಸಂಖ್ಯೆ

Source: sonews | By Staff Correspondent | Published on 15th May 2020, 10:10 PM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡುಬಂದಿದ್ದು, ಒಂದೇ ದಿನ 45 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 1,032ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಗುರುವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯ ಅವಧಿಯಲ್ಲಿ 45 ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಲೆಟಿನ್ ತಿಳಿಸಿದೆ.

ದುಬೈಯಿಂದ ಮೇ 12ರಂದು ಆಗಮಿಸಿದವರ ಪೈಕಿ ದ.ಕ. ಜಿಲ್ಲೆಯಲ್ಲಿ 15 ಮತ್ತು ಉಡುಪಿ ಜಿಲ್ಲೆಯ ಐದು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 68 ವರ್ಷದ ಮಹಿಳೆಯೊಬ್ಬರಲ್ಲೂ ಸೋಂಕು ದೃಢಪಟ್ಟಿದೆ.

ಬೆಂಗಳೂರು ನಗರದಲ್ಲಿ 13 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದ್ದರೆ, ಬೀದರ್ ಮತ್ತು ಹಾಸನದಲ್ಲಿ ತಲಾ 3, ಚಿತ್ರದುರ್ಗದಲ್ಲಿ 2 ಮತ್ತು ಶಿವಮೊಗ್ಗದಲ್ಲಿ ಓರ್ವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದ.ಕ. ಮತ್ತು ಬೆಂಗಳೂರು ನಗರದಲ್ಲಿ ಆರು ವರ್ಷದ ಇಬ್ಬರು ಮಕ್ಕಳಲ್ಲಿ ಹಾಗೂ ಚಿತ್ರದುರ್ಗದಲ್ಲಿ 3 ವರ್ಷದ ಮಗುವಿಗೂ ಸೋಂಕು ತಗಲಿರುವುದು ದೃಢಪಟ್ಟಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 476 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 35 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...