Breaking... ರಾಜ್ಯದಲ್ಲಿ ಒಂದೇ ದಿನ 299 ಜನರಿಗೆ ಕೊರೋನಾ; 51 ಸಾವು

Source: sonews | By Staff Correspondent | Published on 31st May 2020, 6:50 PM | State News | Don't Miss |

ಬೆಂಗಳೂರು: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 299 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 3,221ಕ್ಕೆ ಏರಿಕೆಯಾಗಿದೆ. ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಕೊರೋನದಿಂದ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 51ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆವರೆಗೆ 299 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಮುಂಬೈಯಿಂದ ಹಿಂದಿರುಗಿ ಕ್ವಾರಂಟೈನ್ ನಲ್ಲಿದ್ದ ರಾಯಚೂರು ಜಿಲ್ಲೆಯ 50 ವರ್ಷದ ಪುರುಷರೊಬ್ಬರು ಮೇ.29ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇವರ ಕೊರೋನ ವರದಿ ಪಾಸಿಟಿವ್ ಬಂದಿದೆ. ಬೀದರ್ ಜಿಲ್ಲೆಯ 75 ವರ್ಷದ ಪುರುಷರೊಬ್ಬರು ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಇವರು ಮೇ.29ರಂದು ಸಾವನ್ನಪ್ಪಿದ್ದಾರೆ. ಇವರ ಕೊರೋನ ವರದಿ ಪಾಸಿಟಿವ್ ಬಂದಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ರಾಯಚೂರು 83, ಯಾದಗಿರಿ 44, ಬೀದರ್ 33, ಕಲಬುರಗಿ 28, ವಿಜಯಪುರ 26, ಬೆಂಗಳೂರು ನಗರ 21, ದಕ್ಷಿಣ ಕನ್ನಡ 14, ಮಂಡ್ಯ ಮತ್ತು ಬೆಳಗಾವಿಯಲ್ಲಿ ತಲಾ 13, ಉಡುಪಿ 10, ದಾವಣಗೆರೆ 6, ಉತ್ತರ ಕನ್ನಡ 5, ಬಳ್ಳಾರಿ, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 3,221 ಕೊರೋನ ಸೋಂಕಿತರ ಪೈಕಿ 1,218 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 221 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 51 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1,950 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...