ರಾಜ್ಯದಲ್ಲಿ ಸ್ಪೋಟಗೊಳ್ಳುತ್ತಿರುವ ಕೊರೋನಾ ಸೋಂಕು; ಒಂದೇ ದಿನ 248 ಗೆ ಸೋಂಕು

Source: sonews | By Staff Correspondent | Published on 29th May 2020, 8:17 PM | State News | Don't Miss |

ಬೆಂಗಳೂರು: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 248 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೋನದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 48 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ 248 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಮೇ.24ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ 50 ವರ್ಷದ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು ನಗರ 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ವಿಜಯಪುರ, ದಾವಣಗೆರೆ, ಹಾಸನದಲ್ಲಿ ತಲಾ 4, ತುಮಕೂರು, ಮಂಡ್ಯ, ಚಿಕ್ಕಮಗಳೂರು ಮತ್ತು ಮೈಸೂರಿನಲ್ಲಿ ತಲಾ 2, ಬೆಂಗಳೂರು ಗ್ರಾಮೀಣ, ಶಿವಮೊಗ್ಗ, ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 2,781 ಕೊರೋನ ಸೋಂಕಿತರ ಪೈಕಿ 894 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 60 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1837 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...