ಭಟ್ಕಳ ಕಾರ್ಮಿಕ ಇಲಾಖೆಯಲ್ಲಿನ ಭ್ರಷ್ಟಾಚಾರ:ಕರ್ನಾಟಕ ಸ್ವಾಭಿಮಾನಿ ಕ್ರಾಂತಿ ಸಂಘದಿಂದ ಮನವಿ’

Source: so news | Published on 16th June 2019, 8:06 PM | Coastal News | Don't Miss |

ಭಟ್ಕಳ: ತಾಲೂಕಿನಲ್ಲಿನ ಕಾರ್ಮಿಕ ಇಲಾಖೆಯ ಹೆಸರಿನಲ್ಲಿ ನಡೆಯುತ್ತಿರುವ ವಸೂಲಿ ಮತ್ತು ಭ್ರಷ್ಟಾಚಾರವನ್ನು ತಡೆಯುವ ಬಗ್ಗೆ ಹಾಗೂ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಸ್ವಾಭಿಮಾನಿ ಕ್ರಾಂತಿ ಸಂಘ ಭಟ್ಕಳ ಘಟಕದಿಂದ  ಮನವಿಯನ್ನು ಸಲ್ಲಿಸಿದರು.

ಕಾರ್ಮಿಕ ಇಲಾಖೆಯಲ್ಲಿ ಏಜೆಂಟರ ಹಾವಳಿ ಜಾಸ್ತಿಯಾಗಿದ್ದು, ಕಾರ್ಮಿಕರ ಇಲಾಖೆಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಕೆಲಸ ಎನ್ನುವಂತಾಗಿದೆ. ಕಟ್ಟಡ ಕಾರ್ಮಿಕರು ಮತ್ತಿತ್ತರ ಕೂಲಿ ಕಾರ್ಮಿಕರಿಗೆ ಕಾರ್ಡ್ ಮಾಡಿಸಿಕೊಡುತ್ತೇವೆ. ವಿದ್ಯಾರ್ಥಿ ವೇತನ ಕೊಡಿಸುತ್ತೇವೆ, ಮದುವೆ ಪ್ರೋತ್ಸಾಹಧನ ತೆಗೆಯಿಸಿಕೊಡುತ್ತೇವೆ ಎಂದು ಹೇಳಿ ಯಾಮಾರಿಸಿ ಮಹಿಳೆಯರು ಮತ್ತು ಕೂಲಿ ಕಾರ್ಮಿಕರ ಬಳಿ 3-5 ಸಾವಿರ ತೆಗೆದುಕೊಂಡು ಕಾರ್ಡ್ ಮತ್ತು ಸೌಲಭ್ಯ ಒದಗಿಸದೇ ಸತಾಯಿಸಲಾಗುತ್ತಿದೆ. 
ಭಟ್ಕಳದಲ್ಲಿ ಗಲ್ಲಿ ಗಲ್ಲಿಗೆ ಕಾರ್ಮಿಕ ಏಜೆಂಟ್ ಹಾವಳಿ ಇದ್ದು, ಇದನ್ನು ಶೀಘ್ರದಲ್ಲೇ ತಡೆಯಬೇಕಿದೆ. ಕಾರ್ಮಿಕ ಇಲಾಖೆ ಹೆಸರಿನಲ್ಲಿ ಹಣ ವಸೂಲಿ ಕಾರ್ಯ ಭರದಿಂದ ಸಾಗಿದ್ದು, ಇಲಾಖೆಯ ಹೆಸರು ಹಾಳಾಗುವಂತೆ ಆಗಿದೆ. ಮಹಿಳೆಯರು ಹಣ ವಸೂಲಿಯಿಂದ ರೊಚ್ಚಿಗೆಗಿದ್ದು, ಪ್ರತಿಭಟನೆಗೆ ಮುಂದಾಗುತ್ತಿದ್ದಾರೆ.
ಮದುವೆ ಪ್ರೋತ್ಸಾಹ ಧನಕ್ಕೆ ಸರ್ಕಾರದಿಂದ ಸಿಗುವ 50 ಸಾವಿರದಲ್ಲಿ ಕಾರ್ಮಿಕ ಅಧಿಕಾರಿಗೆ 2 ಸಾವಿರ ಏಜೆಂಟರಿಗೆ 3 ಸಾವಿರ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ 5 ಸಾವಿರ ಸೇರಿ ಒಟ್ಟು 10 ಸಾವಿರ ಲಂಚ ಕೇಳಲಾಗುತ್ತಿದೆ. ಲಂಚದ ಹಾವಳಿಯಿಂದ ಕೂಲಿ ಕಾರ್ಮಿಕರು ಸರಕಾರಿ ಸೌಲಭ್ಯ ಸಿಗದೆ ಕಂಗಾಲಾಗುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಯಾರಿಗೂ ಕಾರ್ಡ್ ಬಂದಿಲ್ಲ ಎಲ್ಲರೂ ಹಣ ಕೊಟ್ಟು ಸೌಲಭ್ಯಕ್ಕಾಗಿ ಕಾಯುವಂತಾಗಿದೆ. ಕಾರ್ಮಿಕ ಇಲಾಖೆಯ ಭ್ರಷ್ಟಾಚಾರವನ್ನು ಹತ್ತಿಕ್ಕಿ ಏಜೆಂಟರ ಹಾವಳಿಯನ್ನು ತಡೆಯಬೇಕೆಂದು ಆಗ್ರಹಿಸಿದರು. 

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಗಾಯಾಳುಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಗಾಯಾಳುಗಳನ್ನು ದೂರದ ಹುಬ್ಬಳ್ಳಿ, ಗೋವಾ, ಉಡುಪಿ, ಮಂಗಳೂರು ಮುಂತಾದ ಪ್ರದೇಶಗಳಿಗೆ ಸಾಗಿಸಲಾಗುತ್ತದೆ. ಇದಕ್ಕೆ ಕಾರಣ ಸರಿಯಾದ ಆಸ್ಪತ್ರೆ ವ್ಯವಸ್ಥೆ ಕಲ್ಪಿಸದಿರುವುದು. ಹೀಗಾಗಿ ಉತ್ತರ ಕನ್ನಡದ ಮಧ್ಯ ಭಾಗವೆನಿಸಿರುವ ಹಾಗೂ ಎಲ್ಲ ತಾಲ್ಲೂಕುಗಳಿಗೂ ಸಮಾನ ದೂರ ಇರುವ ಕುಮಟಾ ಅಥವಾ ಇನ್ನಿತರ ಪ್ರದೇಶದಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿದರೆ ಹೆಚ್ಚಿನ ಅನುಕೂಲವಾಗುತ್ತದೆ. ಜೊತೆಗೆ ಪ್ರತಿ ತಾಲೂಕಿನಲ್ಲೂ ಸರ್ಕಾರಿ ಆಸ್ಪತ್ರೆ ಸೂಕ್ತ ವ್ಯವಸ್ಥೆ ಅಳವಡಿಸಿ ರೋಗಿಗಳಿಗೆ ತ್ವರಿತ ಚಿಕಿತ್ಸೆ ಮತ್ತು ವೈದ್ಯರು ಸಿಬ್ಬಂದಿಗಳಿಂದ ಸ್ಪಂದನೆ ದೊರಕಿಸಿಕೊಡಬೇಕು ಹಾಗೂ ಆದಷ್ಟು ಬೇಗ ಉತ್ತರ ಕನ್ನಡದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ಪ್ರಯತ್ನ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿಯನ್ನು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳು ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಕೆ.ಎಮ್.ಶರೀಪ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಅಲಿ ಮಲ್ಲಿಕ್, ಜಿಲ್ಲಾ ಸಹ ಕಾರ್ಯದರ್ಶಿ ರಾಮಚಂದ್ರ ಗೊಂಡ ಉಪಸ್ಥಿತರಿದ್ದರು. 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...