ಚುನಾವಣಾ ಖರ್ಚು ವೆಚ್ಚಗಳ ತೀವ್ರ ನಿಗಾಕ್ಕೆ ವೆಚ್ಚ ವೀಕ್ಷಕ ಡಿ.ಡಿ.ಮಂಗಲ ಸೂಚನೆ

Source: sonews | By Staff Correspondent | Published on 29th March 2019, 6:39 PM | Coastal News |

ಕಾರವಾರ : ಚುನಾವಣಾ ಖರ್ಚು ವೆಚ್ಚಗಳ ಬಗ್ಗೆ ತೀವ್ರ ನಿಗಾ ವಹಿಸುವಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಡಿ.ಡಿ.ಮಂಗಲ ಅವರು ವಿವಿಧ ತಂಡಗಳಿಗೆ ಸೂಚಿಸಿದ್ದಾರೆ.
    
ಜಿಲ್ಲಾ ಪಂಚಾಯ್ತಿಯಲ್ಲಿ ಶುಕ್ರವಾರ ಚುನಾವಣಾ ವೆಚ್ಚ ವೀಕ್ಷಣೆ ನಿಗಾ ವಹಿಸಲು ರಚಿಸಲಾಗಿರುವ ವಿವಿಧ ತಂಡಗಳೊಂದಿಗೆ ಸಭೆ ನಡೆಸಿದ ಅವರು, ನಾವೆಲ್ಲರೂ ಪವಿತ್ರವಾದ ಚುನಾವಣೆ ಕರ್ತವ್ಯಕ್ಕೆ ಭಾರತ ಚುನಾವಣಾ ಆಯೋಗದಿಂದ ನಿಯೋಜನೆ ಗೊಂಡಿದ್ದು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ತೀವ್ರ ನಿಗಾ ವಹಿಸಬೇಕೆಂದು ಅವರು ಹೇಳಿದರು.
    
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ತಮ್ಮ ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗಿರುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗಲೇ ಎಲ್ಲ ದಾಖಲೆಗಳನ್ನು ಸರಿಯಾಗಿ ಮಾಡಬೇಕಿದೆ ಎಂದು ಅವರು ಹೇಳಿದರು.
    
ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತವೆ. ನ್ಯಾಯಸಮ್ಮತವಾಗಿ ಮತಯಾಚನೆಗೆ ಯಾವುದೇ ನಿಬಂದನೆಗಳಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳು ಇತ್ಯಾದಿಗಳ ವಿಷಯಗಳ ಕುರಿತು ನಿಯಮಾನುಸಾರ ಪೂರ್ವಾನುಮತಿ ಪಡೆಯಬೇಕಿದೆ. ಪೂರ್ವಾನುಮತಿಯಿಲ್ಲದ ಹಾಗೂ ಕಾನೂನು ಉಲ್ಲಂಘನೆಯ ಚಟುವಟಿಕೆಗಳ ಬಗ್ಗೆ ನಿಯೋಜಿತ ನಿಗಾ ತಂಡಗಳು ತಕ್ಷಣ ಕಾರ್ಯ ಪ್ರೌವೃತ್ತವಾಗಬೇಕು. ಅವರ ಛಾಯಾವೆಚ್ಚದ ಬಗ್ಗೆ ಕೂಲಂಕಶವಾಗಿ ದಾಖಲಿಸಿ ಚುನಾವಣಾ ವೆಚ್ಚಕ್ಕೆ ಪಡೆಯಬೇಕು ಎಂದರು.
    
ಸಾಮಾಜಿಕ ಜಾಲ ತಾಣಗಳು ಹಾಗೂ ಮಾಧ್ಯಮಗಳಲ್ಲಿಯೂ ಮತದಾರರನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತವೆ. ಪೂರ್ವಾನುಮತಿ ಇಲ್ಲದೆ ಅವರ ವೆಚ್ಚಕ್ಕೆ ಸೇರಿಸುವುದು ಸುಲಭ ಇಲ್ಲವಾದರೆ ಛಾಯಾ ವೆಚ್ಚ ದಾಖಲೆಗೆ ಸೇರಬೇಕು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಎಂಬುದು ಕಂಡು ಬಂದರೆ ಸಂಬಂಧಿಸಿದವರಿಗೆ ಆ ವರದಿ ಹೋಗಬೇಕು. ಅದಕ್ಕಾಗಿ ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ನಿಗಾ ಘಟಕವೂ ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ಡಾ.ಸಂಗೀತಾ ಗಜಾನನಭಟ್, ಕಂಟ್ರೋಲ್ ರೂಮ್ ನೋಡಲ್ ಅಧಿಕಾರಿ ಪುರುಷೋತ್ತಮ ಉಪಸ್ಥಿತರಿದ್ದರು.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...