ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ

Source: so news | Published on 5th December 2019, 12:37 AM | Coastal News | Don't Miss |

ಮಂಗಳೂರು:- ಜಿಲ್ಲೆಯ  ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯಾಗುವ ಆಸ್ಪತ್ರೆ ಮತ್ತು ಕ್ಲ್ಲಿನಿಕ್‍ಗಳಲ್ಲಿ ಗರ್ಭಿಣಿ ದಾಖಲಾತಿಯನ್ನು ಕಡ್ಡಾಯವಾಗಿ  ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಕಚೇರಿಯಲ್ಲಿ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.
ಪ್ರತಿ ತಿಂಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್‍ಗಳ ಭೇಟಿ ನೀಡಿ ಪರಿಶೀಲನೆಯನ್ನು ಇನ್ನಷ್ಟು ತೀವ್ರಗೊಳಿಸಿ, ಜಿಲ್ಲಾ ಸಲಹಾ ಸಮಿತಿ ನಿರ್ಣಯದಂತೆ ಜಿಲ್ಲಾ ಸಕ್ಷಮ ಪ್ರಾಧಿಕಾರಿ ಜಿಲ್ಲಾಧಿಕಾರಿ ಅನುಮತಿಯ ಮೇರೆಗೆ ಎಲ್ಲಾ ತಾಲೂಕು ಆರೋಗ್ಯಧಿಕಾರಿಗಳು ಅವರವರ ವ್ಯಾಪ್ತಿಯಲ್ಲಿ ಬರುವ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ಮತ್ತು ಪರಿಶೀಲನೆ ನಡೆಸಬೇಕೆಂದು ಸಭೆಯಲ್ಲಿ ಸೂಚಿಸಲಾಯಿತು.
   ಯಾವುದೇ ಸಂಸ್ಥೆಯು ತಮ್ಮಲ್ಲಿರುವ ಹಳೆಯ ಸ್ಕ್ಯಾನಿಂಗ್ ಯಂತ್ರಗಳನ್ನು ಸಕ್ಷಮ ಪ್ರಾಧಿಕಾರ ಅಥವಾ ಇಲಾಖೆಯ ಗಮನಕ್ಕೆ ತಾರದೇ ಅದನ್ನು ಮಾರಾಟ ಅಥವಾ ಯಾವುದೇ ಕಂಪನಿಗಳಿಗೆ ವಾಪಸ್ಸು ಮಾಡಬಾರದು. ಸಂಬಂಧಪಟ್ಟ ಸಮಿತಿಯ ಅನುಮತಿ ಇಲ್ಲದೇ ಇಂತಹ ನಿರ್ಣಯಗಳನ್ನು ಕೈಗೊಂಡಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
   ಆಸ್ಪತ್ರೆಗಳಲ್ಲಿ ನಡೆಯುವ ಗರ್ಭಪಾತ ಪ್ರಕರಣಗಳ ಸತ್ಯಾಸತ್ಯತೆಯನ್ನು ಕಂಡು ಹಿಡಿಯುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿ, ಗರ್ಭಿಣಿಯರು ಯಾವುದೇ ವೈದ್ಯರಲ್ಲಿಗೆ ಬಂದು  ಎಂ.ಟಿ.ಪಿ ಅಥವಾ ಗರ್ಭಪಾತ ಮಾಡಲು ಕೇಳಿಕೊಂಡಲ್ಲಿ, ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಪ್ತ ಸಮಾಲೋಚಕರ ಮೂಲಕ ಸಮಾಲೋಚನೆಗಳನ್ನು ನಡೆಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
  ಲಿಂಗಾನುಪಾತ ಇಳಿಕೆಗೆ ಸಂಬಂಧಪಟ್ಟಂತೆ ಜಿಲ್ಲೆಯಾದ್ಯಂತ ಆರೋಗ್ಯ ಶಿಕ್ಷಣ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ಹಾಗೂ  ತಾಲೂಕು ಮಟ್ಟದಲ್ಲಿ ಪರಿಣಾಮಕಾರಿಯಾಗಿ ನಡೆಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.
 ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿಖಂದರ್ ಪಾಷಾ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ| ರಶ್ಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಹಾಗೂ ಸಲಹಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...