ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ. ಸೆ.5 ರ ಸಂಜೆ 6 ಗಂಟೆಯಿಂದ ಸೆ.6 ರ ಸಂಜೆ 7 ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ

Source: SO News | By Laxmi Tanaya | Published on 5th September 2021, 9:53 PM | State News | Don't Miss |

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಕಾರ್ಯವು ನಾಳೆ (ಸೆಪ್ಟೆಂಬರ 6 ರಂದು) ಬೆಳಿಗ್ಗೆ 8 ಗಂಟೆಯಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ  ಜರುಗಲಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಧಾರವಾಡ ತಾಲೂಕು ಹುಬ್ಬಳ್ಳಿ ತಾಲೂಕು ಮತ್ತು ಹುಬ್ಬಳ್ಳಿ ನಗರ ತಾಲೂಕುಗಳ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ 1973 ಕಲಂ 144 ರನ್ವಯ  ಸೆಪ್ಟೆಂಬರ್ 5 ರ ಸಾಯಂಕಾಲ 6 ಗಂಟೆಯಿಂದ ಪ್ರಾರಂಭಿಸಿ, ಸೆಪ್ಟೆಂಬರ್ 6ರ ಸಾಯಂಕಾಲ 7 ಗಂಟೆಯವರೆಗೆ  ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.

 ಈ ಕುರಿತು ಪ್ರಟಣೆ ನೀಡಿರುವ ಅವರು ಸೆ. 6ರ ಮತ ಎಣಿಕೆ ಸಂದರ್ಭದಲ್ಲಿ ಅಥವಾ  ಮತಗಳ ಎಣಿಕೆ ಕಾರ್ಯದ ಮುಕ್ತಾಯದ ನಂತರ ಹಾಗೂ ಫಲಿತಾಂಶ ಘೋಷಣೆಯಾದ ತರುವಾಯ ವಿಜಯಶಾಲಿಯಾದ ಅಭ್ಯರ್ಥಿಯ ಕಾರ್ಯಕರ್ತರು, ಬೆಂಬಲಿಗರು ವಿಜಯೋತ್ಸವ ಆಚರಿಸುವ ಸಂಭವಗಳಿದ್ದು ಮತ್ತು ಈ ಸಮಯದಲ್ಲಿ ಪರಾಭವಗೊಂಡ ಅಭ್ಯರ್ಥಿಯ ಕಾರ್ಯಕರ್ತರು, ಬೆಂಬಲಿಗರು ಹಾಗೂ ವಿಜಯಶಾಲಿ ಅಭ್ಯರ್ಥಿಯ ಕಾರ್ಯಕರ್ತರು ಮತ್ತು ಬೆಂಬಲಿಗರ ವ್ಮಧ್ಯ ವೈಮನಸ್ಸು, ಜಗಳ ಮತ್ತು ಘರ್ಷಣೆಗಳು ಜರುಗದಂತೆ ಮುಂಜಾಗೃತಾ ಕ್ರಮವಾಗಿ ಮತ್ತು ಶಾಂತಿಯುತ ಮತ ಎಣಿಕೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಆದೇಶ ವನ್ನು ಉಲ್ಲಂಘಿಸುವವರ ವಿರುದ್ಧ ಭಾರತಿಯ ದಂಡ ಸಹಿಂತೆ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶದಲ್ಲಿ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...