96 ವರ್ಷದ ಸ್ವಾತಂತ್ರ್ಯ ಹೋರಾಟಗಾರನಿಗೆ 40 ವರ್ಷ ಪಿಂಚಣಿ ನಿರಾಕರಣೆ ಕೇಂದ್ರಕ್ಕೆ 20,000 ರೂ. ದಂಡ; ದಿಲ್ಲಿ ಹೈಕೋರ್ಟ್

Source: Vb | By I.G. Bhatkali | Published on 5th November 2023, 8:59 AM | National News |

ಹೊಸದಿಲ್ಲಿ: 96 ವರ್ಷ ಪ್ರಾಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಪಿಂಚಣಿ ನೀಡುವಲ್ಲಿ "ದಿವ್ಯ ನಿರ್ಲಕ್ಷ್ಯ ತೋರಿಸಿರುವುದಕ್ಕಾಗಿ'' ಮತ್ತು ಅವರನ್ನು 40 ವರ್ಷಗಳ ಕಾಲ ಕಾಯುವಂತೆ ಮಾಡಿರುವುದಕ್ಕಾಗಿ ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಕೇಂದ್ರ ಸರಕಾರಕ್ಕೆ 20,000 ರೂ. ದಂಡ ವಿಧಿಸಿದೆ.

ಸ್ವಾತಂತ್ರ್ಯ ಹೋರಾಟಗಾರ ಉತ್ತಮ್ ಲಾಲ್ ಸಿಂಗ್‌ ಅರ್ಜಿಯನ್ನು ಇತ್ಯರ್ಥಪಡಿಸಿದ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ್, ಸರಕಾರದ ಕಾರ್ಯವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ಅರ್ಜಿದಾರರ ಮೊಕದ್ದಮೆಯ ವೆಚ್ಚವನ್ನು ಅವರಿಗೆ ಆರು ವಾರಗಳಲ್ಲಿ ಪಾವತಿಸುವಂತೆಯೂ ನ್ಯಾಯಾಧೀಶರು ಸರಕಾರಕ್ಕೆ ಆದೇಶಿಸಿದರು.

ಅದೂ ಅಲ್ಲದೆ, ಸಿಂಗ್‌ಗೆ 1980ರಿಂದ ಸ್ವತಂತ್ರತಾ ಸೈನಿಕ್ ಸಮ್ಮಾನ್ ಪಿಂಚಣಿಯನ್ನು ವರ್ಷಕ್ಕೆ 6 ಶೇ. ಬಡ್ಡಿಯೊಂದಿಗೆ 12 ವಾರಗಳಲ್ಲಿ ಬಿಡುಗಡೆಗೊಳಿಸುವಂತೆಯೂ ನ್ಯಾಯಾಲಯ ಆದೇಶಿಸಿತು.

"ದೇಶಕ್ಕೆ ಸ್ವಾತಂತ್ರ್ಯ ಗಳಿಸಿ ಕೊಡುವುದಕ್ಕಾಗಿ ತಮ್ಮ ಬೆವರು ಮತ್ತು ನೆತ್ತರು ಹರಿಸಿದ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲು ಭಾರತ ಸರಕಾರವು ಸ್ವತಂತ್ರತಾ ಸೈನಿಕ್ ಸಮ್ಮಾನ್ ಪಿಂಚಣಿ ಪಿಂಚಣಿಯನ್ನು ಘೋಷಿಸಿತ್ತು. ತನಗೆ ನ್ಯಾಯವಾಗಿ ಸಿಗಬೇಕಾದ ಪಿಂಚಣಿಯನ್ನು ಪಡೆಯಲು 96 ವರ್ಷದ ಸ್ವಾತಂತ್ರ್ಯ ಹೋರಾಟಗಾರನನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಲಾಯಿತು' ಎಂದು ತನ್ನ ನವೆಂಬರ್ 2ರ ತೀರ್ಪಿನಲ್ಲಿ ನ್ಯಾ. ಪ್ರಸಾದ್ ಹೇಳಿದ್ದಾರೆ. ಉತ್ತಮ್ ಲಾಲ್ ಸಿಂಗ್ ಕ್ವಿಟ್ ಇಂಡಿಯಾ ಚಳವಳಿ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಇತರ ಚಳವಳಿಗಳಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...