ಕೋವಿಡ್-19: ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧ ತೆರವುಗೊಳಿಸಿ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

Source: PTI | Published on 23rd August 2020, 6:56 PM | National News | Don't Miss |

ನವದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಅಂತರ್ ರಾಜ್ಯ ಪ್ರಯಾಣದ ಮೇಲಿನ ನಿರ್ಬಂಧವನ್ನು ತೆರವು ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶನಿವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದು, 'ಅನ್ ಲಾಕ್ 3" ಗಾಗಿ ಕೇಂದ್ರ ಮಾರ್ಗಸೂಚಿಗಳ ಅಡಿಯಲ್ಲಿ ಅಥವಾ ಕೊರೋನಾ ವೈರಸ್ ಲಾಕ್ಡೌನ್ ಅನ್ನು ಸರಾಗಗೊಳಿಸುವ ಮೂರನೇ  ಹಂತದ ಅಡಿಯಲ್ಲಿ, ಅಂತರ್ ರಾಜ್ಯ ಅಥವಾ ರಾಜ್ಯದೊಳಗಿನ ಯಾವುದೇ ಜನರು ಅಥವಾ ಸರಕುಗಳ ಪ್ರಯಾಣಕ್ಕೆ ನಿರ್ಬಂಧಗಳಿಲ್ಲ. ಕೂಡಲೇ ಈ ನಿರ್ಬಂಧ ಸಡಿಲಗೊಳಿಸಿ. ವ್ಯಕ್ತಿಗಳು ಅಥವಾ ಸರಕುಗಳ ಚಲನೆಗೆ ಪ್ರತ್ಯೇಕ ಅನುಮತಿ ಅಥವಾ ಇ-ಪರ್ಮಿಟ್ ಅಗತ್ಯವಿಲ್ಲ ಎಂದು ತಿಳಿಸಿದೆ.
ಅಂತೆಯೇ ಅಂತರ್ ರಾಜ್ಯ ಪ್ರಯಾಣ ನಿರ್ಬಂಧ ಕುರಿತಂತೆ ಕೆಲ ರಾಜ್ಯಸರ್ಕಾರಗಳ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಗೃಹ ಇಲಾಖೆ, 'ಹಲವಾರು ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂತಹ ನಿರ್ಬಂಧಗಳನ್ನು ವಿಧಿಸುತ್ತಿದ್ದಾರೆ ಎಂಬ ವರದಿಗಳಿವೆ. ಈ ನಿರ್ಬಂಧಗಳು ಪೂರೈಕೆ ಸರಪಳಿಗಳ  ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ ಮತ್ತು ಆ ಮೂಲಕ ಆರ್ಥಿಕ ಚಟುವಟಿಕೆ ಮತ್ತು ಉದ್ಯೋಗಕ್ಕೆ ಅಡ್ಡಿಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅಂತೆಯೇ ಇಂತಹ ನಿರ್ಬಂಧಗಳನ್ನು ನಿರಂತರವಾಗಿ ಹೇರುವುದು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹೊರಡಿಸಲಾದ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಯಾವುದಾದರೂ ಸಂಚಾರ ನಿರ್ಬಂಧಗಳಿದ್ದರೆ ತೆಗೆದು ಹಾಕಿ ಮತ್ತು ಗೃಹ  ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು  ಎಂದು ಭಲ್ಲಾ ಅವರು ತಮ್ಮ ಪತ್ರದಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...