Covid-19 India: ದಾಖಲೆಯ 4,529 ಸಾವು, 2,67,334 ಹೊಸ ಪ್ರಕರಣ

Source: ಪಿಟಿಐ | Published on 19th May 2021, 11:44 AM | National News |

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್‌ನಿಂದ ದಾಖಲೆಯ 4,529 ಸಾವು ಸಂಭವಿಸಿವೆ. ಇದೇ ಅವಧಿಯಲ್ಲಿ 2,67,334 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 3,89,851 ಮಂದಿ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹೀಗಾಗಿ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿದ್ದು, 32,26,719 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಈವರೆಗೆ ದೇಶದಲ್ಲಿ ಒಟ್ಟು 2,83,248 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣವು ಶೇಕಡಾ 1.11ಕ್ಕೆ ಏರಿದೆ.

ಭಾರತದ ಕೋವಿಡ್ ಸೋಂಕಿತರ ಸಂಖ್ಯೆಯು ಆಗಸ್ಟ್ 7 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿತ್ತು. ಸೆಪ್ಟೆಂಬರ್ 28 ರ ಹೊತ್ತಿಗೆ ಈ ಸಂಖ್ಯೆ 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ ದಾಟಿತ್ತು. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿತ್ತು. ಮೇ 4 ರಂದು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 2 ಕೋಟಿ ದಾಟಿದೆ.

ಐಸಿಎಂಆರ್ ಪ್ರಕಾರ, ಮೇ 18 ರವರೆಗೆ 32,03,01,177 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 20,08,296 ಮಾದರಿಗಳನ್ನು ಮಂಗಳವಾರ ಪರೀಕ್ಷಿಸಲಾಗಿದೆ.

ಒಂದೇ ದಿನ ಮಹಾರಾಷ್ಟ್ರದಲ್ಲಿ 1,291, ಕರ್ನಾಟಕ 525, ತಮಿಳುನಾಡು 364, ದೆಹಲಿ 265, ಉತ್ತರಪ್ರದೇಶ 255, ಪಂಜಾಬ್‌ 231, ಛತ್ತೀಸ್‌ಗಡ 153, ರಾಜಸ್ಥಾನದಲ್ಲಿ 146, ಪಶ್ಚಿಮ ಬಂಗಾಳದಲ್ಲಿ 145, ಹರಿಯಾಣದಲ್ಲಿ 124 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.

 

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...