ಬೆಂಗಳೂರು: ಮಾರ್ಗಸೂಚಿ ಪಾಲಿಸದಿದ್ದರೆ ಲಾಕ್ಡೌನ್ ಅನಿವಾರ್ಯ,ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ

Source: VB | By S O News | Published on 12th April 2021, 7:49 PM | State News |

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಿನ್ನೆಯಿಂದ ಮುಂದಿನ 10 ದಿನಗಳ ವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಜನತೆ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿ ಸುವ ಮೂಲಕ ಸಹಕಾರ ನೀಡಬೇಕು. ಇಲ್ಲವಾದರೆ ಲಾಕ್‌ಡೌನ್ ಅನಿವಾರ್ಯ ವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿ ನಿಧಿಗಳ ಜತೆ ಮಾತನಾಡಿದ ಅವರು, ಈಗಾಗಲೇ ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಮಾಡಿದ್ದಾರೆ , ಏಕೆಂದರೆ ಜನರು ಉದಾಸೀನ ಮಾಡಿದಾಗ ಅಲ್ಲಿ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಯಿತು. ಹೀಗಾಗಿ ರಾಜ್ಯದಲ್ಲಿ ಲಾಕ್‌ಡನ್ ಬೇಡ ಎಂದರೆ ಜನರು ಉದಾಸೀನ ಮಾಡಬಾರದು. ಸರಕಾರ ಮಾಡಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಾಕ್ ಡೌನ್‌ಗೆ ಅವಕಾಶ ಮಾಡಿಕೊಡಬಾರದು ಎಂದು ಕೋರಿದರು.

ನಿನ್ನೆ ರಾತ್ರಿ ಸರಕಾರಿ ಆಸ್ಪತ್ರೆಗಳ ವ್ಯವಸ್ಥೆ ಪರಿಶೀಲಿಸಬೇಕು ಎಂದು ತೆರಳಿದ್ದೆ. 108 ಆ್ಯಂಬುಲೆನ್ಸ್‌ಗೆ ಸಂಬಂಧಿಸಿದ ದೂರುಗಳನ್ನು ನಿಭಾಯಿಸಲು ಸೂಚಿಸಲಾಗಿದೆ ಎಂದ ಅವರು, ಜನರು ಜಾಗೃತರಾದರೆ ಯಾವುದೇ ಲಾಕ್‌ಡೌನ್‌ನ ಅಗತ್ಯ ಬರುವುದಿಲ್ಲ. ಸಾರ್ವಜನಿಕರ ಮೇಲೆ ಜವಾಬ್ದಾರಿ ಇದೆ. ಕೊರೋನ ನಿಯಂತ್ರಣವನ್ನು ಜನರು ಮಾಡಿದರೆ ನಾವು ಇನ್ನಷ್ಟು ಸಬಲವಾಗಿರುತ್ತೇವೆ ಎಂದು ಹೇಳಿದರು.

ಇಂದಿನಿಂದ ಎ.14ರವರೆಗೆ ಲಸಿಕೆ ಉತ್ಸವ ಆಚರಣೆ ಮಾಡುತ್ತಿದ್ದೇವೆ. ಕರ್ನಾಟಕದ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿದ್ದೇವೆ. ಸಮಾಜ ಸುಧಾರಕ ಜ್ಯೋತಿಬಾಪುಲೆ ಮಹಿಳಾ ಸಬಲೀಕರಣಕ್ಕೆ ಹೋರಾಟ ಮಾಡಿದ ಮಹಾನುಭಾವರು. ಅವರ ಆಲೋಚನೆಗೆ ಹೆಚ್ಚು ಶಕ್ತಿ ನೀಡಬೇಕು ಎನ್ನುವ ಯೋಚನೆ ನಮ್ಮ ಸರಕಾರದ್ದು. ಎಲ್ಲ ಧರ್ಮದ ಮಹಿಳೆಯರಿಗೆ ಸಾಂಕೇತಿಕವಾಗಿಲಸಿಕೆನೀಡಿ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಮೈಕ್ರೋ ಕಂಟೈನೆಂಟ್ ಝೂನ್‌ಗಳನ್ನು ಹೆಚ್ಚು ಮಾಡಬೇಕು ಎಂದು ಪ್ರಧಾನಿ ಸಲಹೆ ನೀಡಿದ್ದಾರೆ. ಪ್ರಧಾನಿ ಕೊಟ್ಟಿರುವ ಸೂಚನೆ ಪಾಲನೆ ಮಾಡಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಎರಡನೇ ಅಲೆ ಮಣಿಸುವಂತಹ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...