ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ఇల్ల 15 ದಿನ ಪ್ರತಿಭಟನೆ, ಧರಣಿಗಳಿಗೆ ಅವಕಾಶವಿಲ್ಲ: ಮುಖ್ಯಮಂತ್ರಿ

Source: VB | By S O News | Published on 30th March 2021, 8:08 PM | State News |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ತುಂಬಾ ಮುಖ್ಯ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್‌ ಅಥವಾ ನೈಟ್ ಕರ್ಪ್ಯೂ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಸಚಿವರು, ಸರಕಾರದ ಹಿರಿಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಮಹಾರಾಷ್ಟ್ರದಲ್ಲಿ ಒಂದು ದಿನಕ್ಕೆ 40 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ.

ಮಂಗಳವಾರದಿಂದ 15 ದಿನ ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶವಿರುವುದಿಲ್ಲವೆಂದು ಮುಖ್ಯಮಂತ್ರಿ ತಿಳಿಸಿದರು. ಜಾತ್ರೆ, ಉತ್ಸವಗಳ ಆಚರಣೆಗೆ ನಿರ್ಬಂಧ ವಿಧಿಸಿ ಈಗಾಗಲೇ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಶಾಲೆಗಳಿಗೆ ರಜೆ ಇಲ್ಲ


ಶಾಲಾ, ಕಾಲೇಜುಗಳಿಗೆ ರಜೆ ನೀಡುವುದಾಗಲಿ, ಬಂದ್ ಮಾಡಲು ಸರಕಾರ ನಿರ್ಧರಿಸಿಲ್ಲ. ಸದ್ಯಕ್ಕೆ ಪರೀಕ್ಷೆಗಳು ಹತ್ತಿರ ಬರುತ್ತಿದ್ದು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ 3 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸರಾಸರಿ 2 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ.

ಮೈಸೂರು, ಕಲಬುರಗಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದಿನಕ್ಕೆ 100 ಪಾಸಿಟಿವ್ ಕೇಸ್‌ಗಳು ಬರುತ್ತಿವೆ. ಆದುದರಿಂದ, ಇನ್ನು 15 ದಿನ ಯಾವುದೇ ರೀತಿಯ ಪ್ರತಿಭಟನೆ, ಸತ್ಯಾಗ್ರಹ, ಚಳವಳಿ, ಧರಣಿಗಳನ್ನು ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.
 
'ಕೋವಿಡ್ ಎರಡನೆ ಅಲೆ ಪ್ರಾರಂಭವಾಗಿದ್ದು ಜನರನ್ನು ಭೀತಿಗೆ ಒಳಪಡಿಸದೆ, ಆರ್ಥಿಕ ಚುಟಿವಕೆಗಳಿಗೆ ಧಕ್ಕೆಯಾಗದಂತೆ ಸರಕಾರ ವೈಜ್ಞಾನಿಕವಾಗಿ ನಿರ್ಧಾರ ಕೈಗೊಳ್ಳಬೇಕು' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಸಲಹೆ ನೀಡಿದ್ದಾರೆ. ಇವತ್ತಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಆರ್‌ ಟಿ ಪಿ ಸಿ ಆರ್ ನೆಗೆಟಿವ್ ವರದಿ ಕಡ್ಡಾಯ: ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದ್ದು, ಪ್ರಯಾಣಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಸಾರ್ವಜನಿಕರು ಜಾಗೃತರಾಗಿ, ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಕಾಪಾಡುವುದು ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತೊಮ್ಮೆ ಮನವಿ  ಮಾಡಿಕೊಳ್ಳುತ್ತೇನೆ. ನಾಳೆಯಿಂದ ಮಾಸ್ಕ್ ಹಾಕದೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ತಡೆಗಟ್ಟಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲ್ಲ ಅರ್ಹ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳಬೇಕು. ಸಭೆಯಲ್ಲಿ ಸಚಿವರಾದ ಆರ್.ಅಶೋಕ್‌, ಎಸ್‌.ಸುರೇಶ್ ಕುಮಾರ್, ಡಾ.ಕೆ.ಸುಧಾಕರ್, ಕೆ.ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು, ಕೋವಿಡ್ ತಂತ್ರಿಕಾ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...