ಕೋವಿಡ್ ನಿಯಂತ್ರಣ ಖಾಸಗಿ ಆಸ್ಪತ್ರೆಗಳ ಸೇವೆ ಕಡ್ಡಾಯ : ಸಚಿವ ಜಗದೀಶ ಶೆಟ್ಟರ್

Source: so news | Published on 9th July 2020, 12:27 AM | State News | Don't Miss |

 


ಧಾರವಾಡ: ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಾದ್ಯಂತ ಸರ್ಕಾರಿ ಆಸ್ಪತ್ರೆಗಳು ಮತ್ತು ಕಿಮ್ಸ್ ಹಾಗೂ ಬೆರಳೆಣಿಕೆಯಷ್ಟು ಖಾಸಗಿ ಆಸ್ಪತ್ರೆಗಳು ಮಾತ್ರ ಶ್ರಮಿಸುತ್ತಿವೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮಲ್ಲಿರುವ ಅನಗತ್ಯ ಭಯವನ್ನು ತೊರೆದು ದೇಶದ ಜನರ ಆರೋಗ್ಯಕ್ಕಾಗಿ ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಚಿಕಿತ್ಸೆಗೆ ಹಿಂದೇಟು ಹಾಕಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೊರೊನಾ ವಿರುದ್ಧದ ಯುದ್ಧದಲ್ಲಿ ಖಾಸಗಿ ವೈದ್ಯರ ಭಾಗವಹಿಸುವಿಕೆ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಈ ಕುರಿತು ಅನೇಕ ಬಾರಿ ಸಭೆ ಕರೆದು ಮನವಿ ಮಾಡಿಕೊಳ್ಳಲಾಗಿದೆ. ಖಾಸಗಿ ವೈದ್ಯರು ತಮ್ಮಲ್ಲಿರುವ ಅನಗತ್ಯ ಭಯ ತೊರೆದು ಸ್ವಯಂ ಪ್ರೇರಣೆಯಿಂದ ಕೊರೊನಾ ಸೇನಾನಿಗಳಾಗಿ ಸೇವೆ ಸಲ್ಲಿಸಬೇಕು. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಖಾಸಗಿ ಆಸ್ಪತ್ರೆಗಳ ಸೇವೆ ಪಡೆಯುವುದು ಅನಿವಾರ್ಯವಾಗಲಿದೆ. ಸರ್ಕಾರಿ ವೈದ್ಯರು, ಅಧಿಕಾರಿಗಳು, ಆಹಾರ ಇಲಾಖೆ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಅನೇಕ ಇಲಾಖೆಗಳು ಕಳೆದ 3-4 ತಿಂಗಳಿನಿಂದ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಅವರ ಕಾರ್ಯನಿರ್ವಹಣೆ ಪ್ರಶಂಸನೀಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ರಚಿಸಿರುವ ವಿವಿಧ ತಂಡಗಳ ಅಧಿಕಾರಿಗಳು ಬರುವ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ತಕ್ಷಣ ತಮ್ಮ ಗಮನಕ್ಕೆ ತರಲು ಸಚಿವರು ಸೂಚಿಸಿದರು.
ಕೊರೊನಾ ನಿಯಂತ್ರಣದ ಜೊತೆಗೆ ಮುಂಗಾರು ಹಂಗಾಮಿನ ಸಂದರ್ಭದಲ್ಲಿ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕೂಡಾ ಅಧಿಕಾರಿಗಳು ಅಗತ್ಯ ಕ್ರಮ ಜರುಗಿಸಬೇಕು ಎಂದು ಸಚಿವರು ಸೂಚಿಸಿದರು. 
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 611 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 30 ಜನ ಬೇರೆ ಜಿಲ್ಲೆಯವರಿದ್ದಾರೆ. 12 ಜನ ಮರಣ ಹೊಂದಿದ್ದಾರೆ. ಜಿಲ್ಲೆಯ ಡಿಮ್ಹಾನ್ಸ್ ಪ್ರಯೋಗಾಲಯದಲ್ಲಿ 31807, ಕಿಮ್ಸ್ 19596, ಖಾಸಗಿ ಎನ್‍ಎಂಆರ್ ಪ್ರಯೋಗಾಲಯದಲ್ಲಿ 63 ಜನರನ್ನು ಇದುವರೆಗೆ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಪ್ರಸ್ತುತ ಕಿಮ್ಸ್‍ನಲ್ಲಿ 188, ಎಸ್‍ಡಿಎಂನಲ್ಲಿ 13, ಕೋವಿಡ್ ಕೇರ್ ಸೆಂಟರ್‍ನಲ್ಲಿ 138 ಸೇರಿ ಒಟ್ಟು 339 ಸಕ್ರೀಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೇ ತಿಂಗಳಿನಲ್ಲಿ 15482 ಜನರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅದರಲ್ಲಿ 35 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಜೂನ್ ತಿಂಗಳಲ್ಲಿ 9818 ಜನರನ್ನು ತಪಾಸಣೆ ಮಾಡಲಾಗಿತ್ತು. ಅದರಲ್ಲಿ 151 ಜನರಿಗೆ ಸೋಂಕು ದೃಡಪಟ್ಟಿತ್ತು. 8 ಜನ ಮೃತ ಪಟ್ಟಿದ್ದರು. ಜುಲೈ ತಿಂಗಳಿನಲ್ಲಿ ಈ ವರೆಗೆ 2499 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. 339 ಪ್ರಕರಣಗಳು  ದೃಢಪಟ್ಟಿವೆ. 4 ಜನ ಮರಣ ಹೊಂದಿದ್ದಾರೆ. ಜಿಲ್ಲೆಯ ಕಿಮ್ಸ್‍ನಲ್ಲಿ 250, ಜಿಲ್ಲಾಸ್ಪತ್ರೆಯಲ್ಲಿ 40, ಮೂರು ತಾಲೂಕಾ ಆಸ್ಪತ್ರೆಗಳಲ್ಲಿ ತಲಾ 50 ಹಾಸಿಗೆಗಳು ಸೇರಿ ಒಟ್ಟು 440 ಹಾಸಿಗೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ 91 ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 8970 ಹಾಸಿಗೆಗಳ ಸಾಮಥ್ರ್ಯ ಗುರುತಿಸಲಾಗಿದೆ. ಈ ಪೈಕಿ ಸಧ್ಯ 4 ಸೆಂಟರ್‍ಗಳಲ್ಲಿ 300 ಹಾಸಿಗೆಗಳು ಲಭ್ಯವಿವೆ. ಎಲ್ಲಾ 17 ಖಾಸಗಿ ಆಸ್ಪತ್ರೆಗಳಲ್ಲಿ ಅವುಗಳ ಒಟ್ಟು ಸಾಮಥ್ರ್ಯದ ಅರ್ಧದಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಹಂತಹಂತವಾಗಿ ಪಡೆಯಲಾಗುವುದು ಎಂದು ಸಭೆಗೆ ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಶಾಸಕರಾದ ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಸಿ.ಎಂ. ನಿಂಬಣ್ಣವರ, ಅರವಿಂದ ಬೆಲ್ಲದ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ ಸೇರಿದಂತೆ ಕಿಮ್ಸ್, ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಕಾರ್ಯಪಡೆಯ ವಿವಿಧ 14 ತಂಡಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...