ಕ್ರಿಕೆಟ್‌ ಬೆಟ್ಟಿಂಗ್‌: ಶಿವಮೊಗ್ಗದಲ್ಲಿ ಮೂವರ ಬಂಧನ

Source: SO News | By Laxmi Tanaya | Published on 4th November 2020, 9:26 PM | State News | Don't Miss |

ಶಿವಮೊಗ್ಗ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ನಗರದ ಜಯನಗರ ಠಾಣಾ ವ್ಯಾಪ್ತಿಯ ತಿಲಕ್‌ ನಗರ ಮುಖ್ಯ ರಸ್ತೆಯ ವಿಶ್ವೇಶ್ವರಯ್ಯ ಕಾಂಪ್ಲೆಕ್ಸ್‌ನಲ್ಲಿರುವ ಮೊಬೈಲ್‌ ಆಂಗಡಿಯಲ್ಲಿ ಆರೋಪಿಗಳು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ  ಪ್ರಕರಣವನ್ನು ದಾಖಲಿಸಿ, ಆರೋಪಿಗಳನ್ನು ದಸ್ತಗಿರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತ ಅಜೇಯ ಬಿನ್‌ ಯಲ್ಲೋಜಿರಾವ್‌, 35ವರ್ಷ, ಮೊಬೈಲ್‌ ಅಂಗಡಿ ಮಾಲೀಕ ವಾಸ: 1ನೇ ತಿರುವು ಶಾಂತಿನಗರ , ರಾಗಿಗುಡ್ಡ, ಶಿವಮೊಗ್ಗ.  ಕಿರಣ ಬಿನ್‌ ಹನುಮಂತಪ್ಪ, 32ವರ್ಷ, ಪೈನಾನ್ಸ್‌ ನಲ್ಲಿ ಕೆಲಸ ವಾಸ: ದ್ರೌಪದಮ್ಮ ಸರ್ಕಲ್‌ ಹತ್ತಿರ, 1ನೇ ತಿರುವು ಗೋಪಾಳ, ಶಿವಮೊಗ್ಗ ಮತ್ತು ಸಂದೀಪ್‌ ಬಿನ್‌ ವಿಠಲ್‌ ರಾವ್‌, 28ವರ್ಷ, ಮೊಬೈಲ್‌ ಅಂಗಡಿಯಲ್ಲಿ ಕೆಲಸ ವಾಸ: 1ನೇ ತಿರುವು,ರಾಗಿಗುಡ್ಡ, ಶಿವಮೊಗ್ಗ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...