ಕ್ರಿಕೆಟಿಗ ಶ್ರೀಶಾಂತ ನಿಷೇಧ ಅವಧಿ ಮುಕ್ತಾಯ. ಮತ್ತೆ ಆಟ ನೋಡಲು ಅಭಿಮಾನಿಗಳ ಕಾತರ.

Source: SO News | By Laxmi Tanaya | Published on 13th September 2020, 2:33 PM | National News | Don't Miss |

ನವದೆಹಲಿ: ಕ್ರಿಕೆಟ್ ಸ್ಪಾಟ್ ಫಿಕ್ಸಿಂಗಲ್ಲಿ ಸಿಲುಕಿ‌ ನಿಷೇಧ ಶಿಕ್ಷೆ ಅನುಭವಿಸಿದ್ದ  ಭಾರತದ ವೇಗದ ಬೌಲರ್ ಎಸ್. ಶ್ರೀಶಾಂತ್ ಪುನಃ ಮೈದಾನಕ್ಕಿಳಿಯಲು‌ ಕಾತರರಾಗಿದ್ದಾರೆ.

2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ‌ ಶ್ರೀಶಾಂತ ಭಾಗಿಯಾಗಿದ್ದರಿಂದ ಬಿಸಿಸಿಐ ಅವರಿಗೆ ಆಜೀವ ನಿಷೇಧ ಶಿಕ್ಷೆ ವಿಧಿಸಿತ್ತು. ಆದರೆ ಸುಪ್ರಿಮಕೋರ್ಟ್ ಮೊರೆ ಹೋಗಿದ್ದರಿಂದ ನಿಷೇಧ ಅವಧಿ ಏಳು ವರ್ಷಕ್ಕೆ ಇಳಿದಿತ್ತು.
ಅವರ ಏಳು ವರ್ಷಗಳ ನಿಷೇಧ ಶಿಕ್ಷೆ ಅವಧಿ ಭಾನುವಾರ ಕೊನೆಗೊಂಡಿದೆ.

2007 ರ ಟಿ ಟ್ವೆಂಟಿ ವಿಶ್ವಕಪ್ ಮತ್ತು 2011 ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ಶ್ರೀಶಾಂತ ಭಾಗವಾಗಿದ್ದರು.
ನಿಷೇಧ ಅವಧಿ ಮುಕ್ತಾಯಗೊಂಡಿದ್ದರಿಂದ  ದೇಶಿಯ ಮಟ್ಟದಲ್ಲಿ ಮತ್ತೆ ವೃತ್ತಿ ಜೀವನ ಆರಂಭಿಸುವುದಾಗಿ 37 ವರ್ಷದ ಶ್ರೀಶಾಂತ್ ಸ್ಪಷ್ಪಪಡಿಸಿದ್ದಾರೆ. 

ಕೇರಳ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಟವಾಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಕೇರಳ ಕ್ರಿಕೆಟ್ ಕ್ಲಬ್ ಒಂದರಲ್ಲಿ ಬೌಲಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಇನ್ನೂ ಕೆಲ ದಿನಗಳಲ್ಲಿ ಅವರು ಕ್ರಿಕೆಟ್ ಪ್ರಿಯರನ್ನ ಸೆಳೆಯಲಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...