ಸುಳ್ಳು ಮಾಹಿತಿ ನೀಡಿದ 4 ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್: ಬಿಬಿಎಂಪಿ ಆಯುಕ್ತ ಮಂಜುನಾಥ್

Source: VB News | Published on 2nd August 2020, 12:35 AM | State News | Don't Miss |

ಬೆಂಗಳೂರು: ಆಸ್ಪತ್ರೆಗಳು ಹಾಸಿಗೆ ಸಾಮರ್ಥ್ಯದ ಬಗ್ಗೆ ಸುಳ್ಳು ಮಾಹಿತಿ ನೀಡಿದ ನಗರದ ನಾಲ್ಕು ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶಿಸಲಾಗಿದೆ ಎಂದು ಪಾಲಿಕೆ ಆಯಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ಸೋಂಕಿತ ವ್ಯಕ್ತಿಗಳಿಗೆ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡದ ನಗರದ ನಾಲ್ಕು ಪ್ರಮುಖ ಆಸ್ಪತ್ರೆಗಳಾದ ನೃಪತುಂಗ ರಸ್ತೆಯ ಸೇಂಟ್ ಮಾರ್ಥಾಸ್, ಶಂಕರಪುರದ ರಂಗದೊರೈ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್‍ಹ್ಯಾಮ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ನಾಲ್ಕೈದು ಆಸ್ಪತ್ರೆಯವರು ಒಟ್ಟಾಗಿ ಬಂದು ಒಂದೆರಡು ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ಸೋಂಕಿತರ ಆರೈಕೆಗೆ ಬಿಟ್ಟುಕೊಟ್ಟು ಉಳಿದ ಆಸ್ಪತ್ರೆಗಳನ್ನು ಸೋಂಕಿತರಲ್ಲದವರಿಗೆ ಬಳಕೆ ಮಾಡಿಕೊಳ್ಳಲು ನಮ್ಮ ಅಭ್ಯಂತರವಿಲ್ಲ.
ಒಟ್ಟಾರೆ ಸೋಂಕಿತರಿಗೆ ಹಾಸಿಗೆ ಸಿಗಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಆಯುಕ್ತರು ತಿಳಿಸಿದರು.
ಸಾಕ್ರ ವಿರುದ್ಧ ಕ್ರಮ
ಸರಕಾರದ ನಿಯಮದಂತೆ ಶೇ.50% ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡದೆ ಕಾನೂನು ಉಲ್ಲಂಘಿಸಿರುವ ಮಾರತ್ ಹಳ್ಳಿಯ ಸಾಕ್ರ ಆಸ್ಪತ್ರೆಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಸಲಿಸಲಾಗಿದೆ. ಆಸ್ಪತ್ರೆಯ ಮೂವರು ಮುಖ್ಯಸ್ಥರನ್ನು ಆರೋಪಿಗಳನ್ನಾಗಿ ಹೊಣೆ ಮಾಡಲಾಗಿದೆ. ನಿಯಮ ಪಾಲಿಸದ ಆಸ್ಪತ್ರೆಗಳ ವಿರುದ್ಧ ಕ್ರಮ ನಿಶ್ಚಿತ.

-ಡಾ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...