ಪಾಸಿಟಿವ್ ವರದಿಯೊಂದಿಗೆ ಆಗಮಿಸಿದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್

Source: so news | Published on 7th July 2020, 12:27 AM | Coastal News | Don't Miss |

 

ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಾರ್ವಜನಿಕರು, ಖಾಸಗಿ ಲ್ಯಾಬ್ ಗಳಲ್ಲಿ  ನೀಡಿರುವ ತಮ್ಮ ಕೋವಿಡ್-19 ಪರೀಕ್ಷಾ ವರದಿ ಬರುವ ಮುನ್ನವೇ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜಿಲ್ಲೆಗೆ ಆಗಮಿಸಿದ ನಂತರ ಅವರ ವರದಿಯು ಪಾಸಿಟಿವ್ ಆಗಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಲ್ಲಿ, ಅಂತಹ ವ್ಯಕ್ತಿಗಳ ವಿರುದ್ದ  ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಹೊರರಾಜ್ಯದಿಂದ ಬರುವ ವ್ಯಕ್ತಿಗಳು ತಮ್ಮ ಕೋವಿಡ್ 19 ಪರೀಕ್ಷಾ  ವರದಿ ಬಂದ ನಂತರವೇ ಜಿಲ್ಲೆಗೆ ಬರಬೇಕು, ಖಾಸಗಿ ಲ್ಯಾಬ್ ಗಳೂ ಸಹ ಅಂತಹ ವ್ಯಕ್ತಿಗಳ ವರದಿಯನ್ನು ಸಂಬAದಪಟ್ಟ ಜಿಲ್ಲಾಡಳಿತಕ್ಕೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯಲ್ಲಿ ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದೇ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇಂತಹ ಬಸ್ ಗಳ ವಿರುದ್ದ ಇದುವರೆಗೂ ಪ್ರಕರಣ ದಾಖಲಿಸದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನೋಟೀಸ್ ನೀಡುವಂತೆ ಸೂಚಿಸಿದರು.
ಎಲ್ಲಾ ತಹಸೀಲ್ದಾರ್ ಗಳು  ತಮ್ಮ ವ್ಯಾಪ್ತಿಯಲ್ಲಿ ಸಂಚರಿಸಿಸುವ ಬಸ್ ಗಳಲ್ಲಿ ನಿಗಧಿತ ಸಂಖ್ಯೆಗಿAತ ಹೆಚ್ಚಿನ ಪ್ರಯಾಣಿಕರು ಕಂಡುಬAದಲ್ಲಿ , ಹೆಚ್ಚುವರಿ ಪ್ರಯಾಣಿಕರನ್ನು ಕೆಳಗಿಳಿಸಿ, ಬಸ್ ನ ಚಾಲಕ ಮತ್ತು ಕಂಡಕ್ಟರ್ ವಿರುದ್ದ ಪ್ರಕರಣ ದಾಖಲಿಸುವಂತೆ ಹಾಗೂ ಹೆಚ್ಚ್ಚುವರಿ ಪ್ರಯಾಣಿಕರಿಗೆ ಆರ್.ಟಿ.ಓ ಮೂಲಕ ಮತ್ತೊಂದು ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಖಾಸಗಿ ಬಸ್ ಮಾಲೀಕರಿಗೆ ಮತ್ತು ಆರ್.ಟಿ.ಓ ಅಧಿಕಾರಿಗಳಿಗೆ ಈ ಹಿಂದೆಯೇ ಸಭೆ ನೆಡೆಸಿ, ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲನೆಗೆ ಸೂಚನೆಗಳನ್ನು ನೀಡಿದ್ದರೂ , ಸಹ ಇನ್ನೂ ಇದರ ಉಲ್ಲಂಘನೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...